AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ, ತೆಲುಗು, ತಮಿಳು ಬಳಿಕ ಮಲಯಾಳಂಗೆ ಹೊರಟ ರುಕ್ಮಿಣಿ, ಸಿನಿಮಾ ಯಾವುದು?

Rukmini Vasanth movie: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿನ ಅವರ ನಟನೆ, ಅವರನ್ನು ಹೊಸ ಎತ್ತರಗಳಿಗೆ ಏರಿಸುತ್ತಿದೆ. ಅದಾದ ಬಳಿಕ ‘ಕಾಂತಾರ’ ಈಗ ‘ಟಾಕ್ಸಿಕ್’ ಹೀಗೆ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು ಹಾಗೂ ತಮಿಳಿನ ಸಿನಿಮಾಗಳಲ್ಲಿಯೂ ಸಹ ರುಕ್ಮಿಣಿ ವಸಂತ್ ಈಗಾಗಲೇ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ ನಟಿ.

ಕನ್ನಡ, ತೆಲುಗು, ತಮಿಳು ಬಳಿಕ ಮಲಯಾಳಂಗೆ ಹೊರಟ ರುಕ್ಮಿಣಿ, ಸಿನಿಮಾ ಯಾವುದು?
Rukmini Vasanth
ಮಂಜುನಾಥ ಸಿ.
|

Updated on:Aug 11, 2026 | 12:05 PM

Share

ಮುಖ್ಯಾಂಶಗಳು

  • ರುಕ್ಮಿಣಿ ವಸಂತ್ ಕನ್ನಡದ ಹಾಲಿ ಸ್ಟಾರ್ ನಟಿ.
  • ರುಕ್ಮಿಣಿ, ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.
  • ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲಿದ್ದಾರೆ.

ರುಕ್ಮಿಣಿ ವಸಂತ್ (Rukmini Vasanth) ಕನ್ನಡದ ಹಾಲಿ ಸ್ಟಾರ್ ನಟಿ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿನ ಅವರ ನಟನೆ, ಅವರನ್ನು ಹೊಸ ಎತ್ತರಗಳಿಗೆ ಏರಿಸುತ್ತಿದೆ. ಅದಾದ ಬಳಿಕ ‘ಕಾಂತಾರ’ ಈಗ ‘ಟಾಕ್ಸಿಕ್’ ಹೀಗೆ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು ಹಾಗೂ ತಮಿಳಿನ ಸಿನಿಮಾಗಳಲ್ಲಿಯೂ ಸಹ ರುಕ್ಮಿಣಿ ವಸಂತ್ ಈಗಾಗಲೇ ನಟಿಸಿದ್ದಾರೆ. ಇದೀಗ ಮೊದಲ ಬಾರಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಮುಂದಾಗಿದ್ದಾರೆ ನಟಿ.

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ನಿವಿನ್ ಪೋಲಿ ಅವರ ಎದುರು ಹೊಸ ಸಿನಿಮಾ ಒಂದರಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ‘ಪ್ರೇಮಂ’ ಸೇರಿದಂತೆ ಮಲಯಾಳಂನಲ್ಲಿ ಹಲವಾರು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ನಿವಿನ್ ಪೋಲಿ, ರೊಮ್ಯಾಂಟಿಕ್ ಆಕ್ಷನ್ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾಕ್ಕೆ ಹೆಸರಿಟ್ಟಿಲ್ಲ ಆದರೆ ಎನ್ವಿ51 ಎಂದು ಕರೆಯಲಾಗುತ್ತಿದೆ. ಸಿನಿಮಾವನ್ನು ನಶೀದ್ ಮೊಹಮ್ಮದ್ ಫೇಮಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ ಆಗಿದೆ.

ಇದನ್ನೂ ಓದಿ:ಯಶ್ ಆಡಿದ ಮಾತಿಗೆ ರುಕ್ಮಿಣಿ ವಸಂತ್​ ಫುಲ್ ಖುಷ್

ಈ ಸಿನಿಮಾನಲ್ಲಿ ಮಲಯಾಳಂನ ಮತ್ತೊಬ್ಬ ಜನಪ್ರಿಯ ನಟ ಅಜು ವರ್ಗೀಸ್ ಸಹ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಮಾರ್ಟಿನ್ ಪ್ರಕತ್ ಫಿಲಮ್ಸ್ ಮತ್ತು ಪೌಲ್ ಜೆಆರ್ ಫಿಲಮ್ಸ್​​ನವರು ಬಂಡವಾಳ ಹೂಡಿದ್ದಾರೆ. ಆಗಸ್ಟ್ 09ರಂದು ಸಿನಿಮಾದ ಮುಹೂರ್ತ ನೆರವೇರಿದ್ದು, ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದೆ. ಕಡಿಮೆ ಅವಧಿಯಲ್ಲಿ ಚಿತ್ರೀಕರಣ ಮುಗಿಸಿ ಇದೇ ವರ್ಷ ಸಿನಿಮಾ ಬಿಡುಗಡೆ ಸಹ ಆಗಲಿದೆ ಎನ್ನಲಾಗುತ್ತಿದೆ.

ರುಕ್ಮಿಣಿ ವಸಂತ್ ಅವರ ಕೈಯಲ್ಲಿ ಹಲವಾರು ಸಿನಿಮಾಗಳಿವೆ. ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಇದೇ ತಿಂಗಳು ಬಿಡುಗಡೆ ಆಗಲಿದೆ. ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾನಲ್ಲಿ ನಾಯಕಿಯಾಗಿ ರುಕ್ಮಿಣಿ ನಟಿಸಿದ್ದಾರೆ, ಆ ಸಿನಿಮಾ ಮುಂದಿನ ವರ್ಷ ರಿಲೀಸ್ ಆಗಲಿದೆ. ತಮಿಳಿನ ಸ್ಟಾರ್ ನಟ ಎಸ್​​ಟಿಆರ್ (ಸಿಂಭು) ಜೊತೆಗೆ ಹೊಸ ಸಿನಿಮಾ ಒಂದರಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ರಜನೀಕಾಂತ್ ನಟನೆಯ ‘ಧರ್ಮನ್’ ಸಿನಿಮಾನಲ್ಲೂ ರುಕ್ಮಿಣಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಅದು ಖಾತ್ರಿಯಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Tue, 11 August 26

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?