ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

Rukmini Vasanth movie: ರಶ್ಮಿಕಾ ಮಂದಣ್ಣ ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್ ಇಂಡಿಯಾ ನಟಿಯಾಗುವ ಹಂತದಲ್ಲಿದ್ದಾರೆ.

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ
Rukmini Vasanth

Updated on: May 29, 2026 | 12:49 PM

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್ ಇಂಡಿಯಾ ನಟಿಯಾಗುವ ಹಂತದಲ್ಲಿದ್ದಾರೆ.

ಈಗಾಗಲೇ ಕನ್ನಡದ ಹೊರತಾಗಿ ಕೆಲ ಪರಭಾಷೆ ಸಿನಿಮಾಗಳಲ್ಲಿಯೂ ನಟಿಸಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟರೊಬ್ಬರ 50ನೇ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೆ ತೆಲುಗಿನ ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ.

ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕರುಪ್ಪು’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅವರು ತಮ್ಮ 50ನೇ ಸಿನಿಮಾದ ತಯಾರಿಯಲ್ಲಿದ್ದಾರೆ. ವೃತ್ತಿ ಜೀವನದ 50ನೇ ಸಿನಿಮಾ ಆಗಿರುವ ಕಾರಣಕ್ಕೆ ಸಿನಿಮಾ ವಿಶೇಷವಾಗಿರಬೇಕು ಎಂಬ ಕಾಳಜಿ ಸೂರ್ಯ ಅವರಿಗಿದ್ದು, ವಿಶೇಷ ಕತೆಯೊಂದನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ಕೆವಿಎನ್ ಪ್ರೊಡಕ್ಷನ್ಸ್​.

ಇದನ್ನೂ ಓದಿ:ಕೃತಿ ಸನೋನ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರಶ್ಮಿಕಾ ಮಂದಣ್ಣ

ಸೂರ್ಯ ಅವರ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಸೂರ್ಯ ನಟಿಸಿದ್ದ ಬ್ಲಾಕ್ ಬಸ್ಟರ್ ಸಿನಿಮಾ ‘24’ ನಿರ್ದೇಶಿಸಿದ್ದ ವಿಕ್ರಂ ಅವರೇ ಸೂರ್ಯ ಅವರ 50ನೇ ಸಿನಿಮಾ ನಿರ್ದೇಶಿಸಲಿದ್ದು, ಈ ಸಿನಿಮಾನಲ್ಲಿ ವಿಲನ್ ಆಗಿ ಬಾಲಿವುಡ್ ನಟ ಅಕ್ಷಯ್ ಖನ್ನಾ ನಟಿಸಲಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಲಿದ್ದು, ಕೆವಿಎನ್ ಪ್ರೊಡಕ್ಷನ್ಸ್​​ನವರು ಭಾರಿ ಬಜೆಟ್​​ ಹಾಕಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಶೀಘ್ರವೇ ಈ ಸಿನಿಮಾದ ಅಧಿಕೃತ ಘೋಷಣೆ ಹೊರಬೀಳಲಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us