
ರುಕ್ಮಿಣಿ ವಸಂತ್ (Rukmini Vasanth) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಹಲವು ಸೂಪರ್ಸ್ಟಾರ್ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. ರುಕ್ಮಿಣಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರೋ ಒಂದು ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಈ ಫೋಟೋದಲ್ಲಿ ಗಮನ ಸೆಳೆದಿದ್ದು ಅವರ ಶರ್ಟ್ ಮೇಲಿರೋ ಟೈಗರ್ ಚಿತ್ರ. ಇದಕ್ಕೆ ಒಂದು ವಿಶೇಷ ಕಾರಣ ಇದೆ ಎಂದು ಅನೇಕರು ಊಹಿಸಿದ್ದಾರೆ.
ರುಕ್ಮಿಣಿ ವಸಂತ್ ಅವರಿಗೆ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಸಾಕಷ್ಟು ಜನಪ್ರಿಯತೆ ತಂದು ಕೊಟ್ಟಿತು. ಆ ಬಳಿಕ ಅವರು ಹಿಂದೆ ತಿರುಗಿ ನೋಡಲೇ ಇಲ್ಲ. ಕನ್ನಡದಲ್ಲಿ ಗಣೇಶ್, ಶಿವರಾಜ್ಕುಮಾರ್, ಶ್ರೀಮುರಳಿ ಜೊತೆ ತೆರೆ ಹಂಚಿಕೊಂಡರು. ತಮಿಳಿನಲ್ಲಿ ವಿಜಯ್ ಸೇತುಪತಿ ಜೊತೆ ಸಿನಿಮಾ ಮಾಡಿದ್ದಾರೆ. ತೆಲುಗಿನಲ್ಲೂ ಅವರಿಗೆ ಆಫರ್ಗಳು ಬರುತ್ತಿವೆ.
ಜೂನಿಯರ್ ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಸಿನಿಮಾದಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗ ರುಕ್ಮಿಣಿ ಅವರು ಟೈಗರ್ ಪ್ರಿಂಟ್ ಇರೋ ಶರ್ಟ್ ಹಾಕಿಕೊಳ್ಳಲು ಜೂನಿಯರ್ ಎನ್ಟಿಆರ್ ಸಿನಿಮಾ ಕಾರಣ ಎನ್ನಲಾಗಿದೆ. ಜೂನಿಯರ್ ಎನ್ಟಿಆರ್ ಅವರನ್ನು ಎಲ್ಲರೂ ಯಂಗ್ ಟೈಗರ್ ಎನ್ನುತ್ತಾರೆ. ಅವರು ಜೂನಿಯರ್ ಎನ್ಟಿಆರ್ ಸೆಟ್ನ ಸೇರಿಕೊಂಡಿದ್ದೇನೆ ಎಂಬುದನ್ನು ತಿಳಿಸಲು ಈ ರೀತಿ ಶರ್ಟ್ ಹಾಕಿರಬಹುದು ಎಂದು ಅನೇಕರು ಊಹಿಸಿದ್ದಾರೆ.
ಇದನ್ನೂ ಓದಿ: ‘ಸಿನಿಮಾ ವಿಚಾರದಲ್ಲಿ ನಾನು ಲಕ್ಕಿ ಅನ್ನೋದನ್ನು ಒಪ್ಪಿಕೊಳ್ಳುತ್ತೇನೆ’; ರುಕ್ಮಿಣಿ ವಸಂತ್
ಇತ್ತೀಚೆಗೆ ಜೂನಿಯರ್ ಎನ್ಟಿಆರ್ ಅವರು ಬರ್ತ್ಡೇ ಆಚರಿಸಿಕೊಂಡರು. ಈ ವೇಳೆ ಪ್ರಶಾಂತ್ ನೀಲ್ ಹಾಗೂ ಜೂ.ಎನ್ಟಿಆರ್ ಸಿನಿಮಾದ ಟೈಟಲ್ ಅನಾವರಣ ಮಾಡುವ ಪ್ಲ್ಯಾನ್ ಇತ್ತು. ಆದರೆ, ‘ವಾರ್ 2’ ಟೀಸರ್ ಲಾಂಚ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇದನ್ನು ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. ಕೆಲವು ವರದಿಗಳ ಪ್ರಕಾರ ಈ ಚಿತ್ರಕ್ಕೆ ‘ಡ್ರ್ಯಾಗನ್’ ಟೈಟಲ್ ಫಿಕ್ಸ್ ಆಗಿದೆ ಎನ್ನಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್’ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ. ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:00 am, Fri, 20 June 25