AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ನಲ್ಲಿ ಪ್ಯಾಲೇಸ್​​ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್​. ಜಾನಕಿ ಅಂತಿಮ ದಿನಗಳು?

S Janaki Passes Away: ಮೈಸೂರಿನಲ್ಲಿ ನೆಲೆಸಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಕೊನೆಯ ದಿನಗಳ ಬಗ್ಗೆ ಕೇರ್ ಟೇಕರ್ ನವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅರಮನೆಯಂತಹ ಮನೆಯಿದ್ದರೂ ಅವರು ಮೈಸೂರನ್ನೇ ಆಯ್ದುಕೊಂಡಿದ್ದರು. ಜಾನಕಿಯವರಿಗೆ ಕಾಲಿನ ಇನ್ಫೆಕ್ಷನ್​​ ಆಗಿ ನೋವು ಆರಂಭವಾಗಿತ್ತು. ಹಾಸ್ಪಿಟಲ್​​ ಅಂದರೆ ಜಾನಕಮ್ಮ ಭಯ ಪಡುತ್ತಿದ್ದ ಕಾರಣ ಮನೆಗೇ ನರ್ಸ್​​ ಕರೆಸಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಈ ನಡುವೆ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದವರು ತಿಳಿಸಿದ್ದಾರೆ.

ಹೈದರಾಬಾದ್​​ನಲ್ಲಿ ಪ್ಯಾಲೇಸ್​​ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್​. ಜಾನಕಿ ಅಂತಿಮ ದಿನಗಳು?
ಎಸ್​.ಜಾನಕಿ
ದಿಲೀಪ್​, ಚೌಡಹಳ್ಳಿ
| Edited By: |

Updated on:Jul 13, 2026 | 12:08 PM

Share

ಮುಖ್ಯಾಂಶಗಳು

  • ಇಹಲೋಕ ತ್ಯಜಿಸಿದ ಹಿರಿಯ ಗಾಯಕಿ ಎಸ್. ಜಾನಕಿ (88)
  • ಮೈಸೂರಿನಲ್ಲಿ ಹೇಗಿತ್ತು ಗಾನ ಕೋಗಿಲೆಯ ಕೊನೆ ದಿನಗಳು?
  • ಟಿವಿ9 ಜೊತೆ ಮಾಹಿತಿ ಹಂಚಿಕೊಂಡ ಕೇರ್​​ ಟೇಕರ್​​ ನವೀನ್​​

ಮೈಸೂರು, ಜುಲೈ 12: ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಗಾನಕೋಗಿಲೆಯ ನಿರ್ಗಮನಕ್ಕೆ ಸಂಗೀತ ಲೋಕವೇ ಕಂಬನಿ ಮಿಡಿದಿದೆ. ಬೆಳಗ್ಗೆ 8 ಗಂಟೆಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಜಾನಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನವೀನ್ ಫಾರಂಹೌಸ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈ ನಡುವೆ ಜಾನಕಮ್ಮನ ಕೊನೆಯ ದಿನಗಳು ಹೇಗಿದ್ದವು ಎಂಬ ಬಗ್ಗೆ ಅವರ ಕೇರ್​​ ಟೇಕರ್​​ ಆಗಿದ್ದ ನವೀನ್​​ ಟಿವಿ9 ಕನ್ನಡದ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

2018ನಲ್ಲಿ ಕೊನೆಯ ಕಾರ್ಯಕ್ರಮ

2008ರಿಂದ ಮೈಸೂರಲ್ಲೇ ಇರುತ್ತಿದ್ದ ಜಾನಕಿ ಅವರು ಕಳೆದ 2 ವರ್ಷಗಳಿಂದ ತಮ್ಮ ಮನೆಯಲ್ಲಿಯೇ ನೆಲೆಸಿದ್ದರು. ಹೈದರಾಬಾದ್‌ನಲ್ಲಿ ಪ್ಯಾಲೇಸ್​​ನಂತಹ ಮನೆ ಹೊಂದಿದ್ದರೂ ಅವರನ್ನು ಸೆಳೆದಿದ್ದು ಮಾತ್ರ ಮೈಸೂರು. ಮೈಸೂರಿನಲ್ಲೇ ಪ್ರಾಣ ಬಿಡುವುದು ನನ್ನ ಆಸೆ ಎಂದು ಹೇಳುತ್ತಿದ್ದ ಅವರು, 2018ನಲ್ಲಿ ಮೈಸೂರಿನಲ್ಲೇ ಕೊನೆಯ ಕಾರ್ಯಕ್ರಮ ನೀಡಿದ್ದರು. ಆ ನಂತರ ಯಾವುದೇ ಪ್ರಶಸ್ತಿಗಳನ್ನೂ ಅವರು ಸ್ವೀಕರಿಸಿರಲಿಲ್ಲ ಎಂದು ನವೀನ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಹಾಡು ನಿಲ್ಲಿಸಿದ ‘ಗಾನಕೋಗಿಲೆ’; ಖ್ಯಾತ ಗಾಯಕಿ ಎಸ್. ಜಾನಕಿ ನಿಧನ

ಆಸ್ಪತ್ರೆ ಅಂದರೆ ಜಾನಕಮ್ಮನಿಗೆ ಭಯ!

ಈ ನಡುವೆ ಜಾನಕಿಯವರಿಗೆ ಕಾಲಿನ ಇನ್ಫೆಕ್ಷನ್​​ ಆಗಿ ನೋವು ಆರಂಭವಾಗಿತ್ತು. ಭಾಗ್ಯ ಎನ್ನುವವರು ಅವರನ್ನು ನೋಡಿಕೊಳ್ಳುತ್ತಿದ್ದರು. ಹಾಸ್ಪಿಟಲ್​​ ಅಂದರೆ ಜಾನಕಮ್ಮ ಭಯ ಪಡುತ್ತಿದ್ದ ಕಾರಣ ಮನೆಗೇ ನರ್ಸ್​​ ಕರೆಸಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಆದರೆ ಎದ್ದು ಕುಳಿತುಕೊಳ್ಳಲೂ ಅವರು ಕಷ್ಟ ಪಡುತ್ತಿದ್ದ ಕಾರಣ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದೆವು. ಈ ವೇಳೆ ವೈದ್ಯರು ಶೇಕಡಾ 20-30 ಮಾತ್ರ ಗ್ಯಾರೆಂಟಿ ಕೊಡ್ತೀವಿ ಎಂದು ತಿಳಿಸಿದ್ದರು ಎಂದು ಕೇರ್​​ ಟೇಕರ್​​ ಹೇಳಿದ್ದಾರೆ.

ಇನ್ನು ಜಾನಕಿ ಅವರ ಇಚ್ಛೆಯಂತೆಯೇ ಅವರ ಅಂತಿಮ ವಿಧಿ ವಿಧಾನ ನೆರವೇರಲಿದ್ದು, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರವನ್ನು ಮೊಮ್ಮಗಳು ಅಪ್ಸರಾ ನಡೆಸಲಿದ್ದಾರೆ. ಪೊಲೀಸ್​ ಗೌರವದೊಂದಿಗೆ ಮೈಸೂರಿ‌ನಲ್ಲಿಯೇ ಜಾನಕಮ್ಮ ಪಂಚ ಭೂತಗಳಲ್ಲಿ ಲೀನರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:16 am, Sun, 12 July 26

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ