‘ದೇವರ’ ಚಿತ್ರಕ್ಕೆ ಸಕ್ಸಸ್ ಮೀಟ್; ಇಲ್ಲಿಯೂ ಜೂ.​ ಎನ್​ಟಿಆರ್ ಅಭಿಮಾನಿಗಳಿಗೆ ಬೇಸರದ ವಿಚಾರ

ಜೂ. ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಸಿನಿಮಾ ಬಗ್ಗೆ ಋಣಾತ್ಮಕ ವಿಮರ್ಶೆಗಳೇ ಕೇಳಿ ಬರುತ್ತಿವೆ. ಈ ಮಧ್ಯೆ ತಂಡ ಸಕ್ಸಸ್ ಮೀಟ್ ಆಯೋಜಿಸಲು ನಿರ್ಧರಿಸಿದೆ.

‘ದೇವರ’ ಚಿತ್ರಕ್ಕೆ ಸಕ್ಸಸ್ ಮೀಟ್; ಇಲ್ಲಿಯೂ ಜೂ.​ ಎನ್​ಟಿಆರ್ ಅಭಿಮಾನಿಗಳಿಗೆ ಬೇಸರದ ವಿಚಾರ
ದೇವರ
Follow us
ರಾಜೇಶ್ ದುಗ್ಗುಮನೆ
|

Updated on: Oct 03, 2024 | 2:23 PM

‘ದೇವರ: ಚಾಪ್ಟರ್ 1’ ಸಿನಿಮಾ ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿದೆ. ಆದರೆ, ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ಈ ಚಿತ್ರದ ಕಲೆಕ್ಷನ್ 400 ಕೋಟಿ ರೂಪಾಯಿ ಆಗಿದೆ. ಅಕ್ಟೋಬರ್ 2ರಂದು ಸಿನಿಮಾ ಬಂಪರ್ ಗಳಿಕೆ ಮಾಡಿದೆ. ಈಗ ಸಿನಿಮಾಗೆ ಸಕ್ಸಸ್ ಮೀಟ್ ಮಾಡಲು ತಂಡ ರೆಡಿ ಆಗಿದೆ. ಆದರೆ, ಇದಕ್ಕೆ ಒಪ್ಪಿಗೆ ಸಿಗುತ್ತಿಲ್ಲ. ಈ ವಿಚಾರವನ್ನು ನಿರ್ಮಾಪಕರ ನಾಗ ವಂಶಿ ಅವರು ಹೇಳಿಕೊಂಡಿದ್ದಾರೆ.

‘ದೇವರ’ ಸಕ್ಸಸ್​ನ ಅಭಿಮಾನಿಗಳ ಜೊತೆ ಆಚರಿಸಬೇಕು ಎಂಬುದು ತಂಡದ ಆಲೋಚನೆ ಆಗಿತ್ತು. ಆದರೆ, ಇದಕ್ಕೆ ಒಪ್ಪಿಗೆ ಸಿಗುತ್ತಿಲ್ಲವಂತೆ. ‘ನಮ್ಮ ನಿರಂತರ ಪ್ರಯತ್ನದ ಮಧ್ಯೆಯೂ ಸಕ್ಸಸ್ ಪಾರ್ಟಿ ಆಯೋಜನೆ ಮಾಡಲು ಯಾವುದೇ ಗ್ರೌಂಡ್​ನಲ್ಲಿಯೂ ಅವಕಾಶ ಸಿಗುತ್ತಿಲ್ಲ. ದಸರಾ ಹಿನ್ನೆಲೆಯಲ್ಲಿ ಅವಕಾಶ ನಿರಾಕರಿಸಲಾಗಿದೆ’ ಎಂದು ನಾಗ ವಂಶಿ ಹೇಳಿದ್ದಾರೆ.

ಈ ಮೊದಲು ‘ದೇವರ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ನ ಹೋಟೆಲ್ ಒಂದರಲ್ಲಿ ಆಯೋಜನೆ ಮಾಡಲಾಗಿತ್ತು. ಆದರೆ, ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಇದನ್ನು ಕ್ಯಾನ್ಸಲ್ ಮಾಡಬೇಕಾಯಿತು. ಈಗ ಸಕ್ಸಸ್ ಮೀಟ್​ಗೆ ಅವಕಾಶ ಸಿಗುತ್ತಿಲ್ಲ.

ಕೆಲವು ವರದಿಗಳ ಪ್ರಕಾರ ಹೈದರಾಬಾದ್​ನ ಕೆಲ ಗ್ರೌಂಡ್​ನಲ್ಲಿ ಪ್ರೀ ರೀಲೀಸ್ ಈವೆಂಟ್ ಮಾಡಲು ಅವಕಾಶ ಕೇಳಲಾಗಿತ್ತು ಎನ್ನಲಾಗಿದೆ. ಆದರೆ, ಭದ್ರತೆ ದೃಷ್ಟಿಯಿಂದ ಇದಕ್ಕೆ ಅವಕಾಶ ನೀಡಿಲ್ಲ. ಈ ಮೊದಲು ‘ಗುಂಟೂರು ಖಾರಂ’ ಚಿತ್ರದವರೂ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಪ್ಲ್ಯಾನ್ ಮಾಡಿದ್ದರು. ಆದರೆ, ಅವಕಾಶ ನಿರಾಕರಣೆ ಆಗಿತ್ತು.

ಇದನ್ನೂ ಓದಿ: ನೆಗೆಟಿವ್ ವಿಮರ್ಶೆಗಳ ನಡುವೆಯೂ ಮುಂದುವರೆದ ‘ದೇವರ’ ಅಬ್ಬರ

ಇನ್ನು, ‘ದೇವರ’ ತಂಡ ಗುಂಟೂರು ಹಾಗೂ ವಿಶಾಖಪಟ್ಟಣದಲ್ಲೂ ಸಕ್ಸಸ್ ಮೀಟ್ ಆಯೋಜನೆ ಮಾಡಲು ಪ್ರಯತ್ನಿಸಿದೆ. ಅಲ್ಲಿಯೂ ಅವಕಾಶ ಸಿಕ್ಕಿಲ್ಲ. ನವರಾತ್ರಿ ಪೂರ್ಣಗೊಂಡ ನಂತರ ಇದಕ್ಕೆ ಅವಕಾಶ ಸಿಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ. ‘ದೇವರ’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಅವರು ನಟಿಸಿದ್ದಾರೆ. ಈ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್