AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Babu: ಕಾಲಿವುಡ್​ ಸ್ಟಾರ್​ ಕಾಮಿಡಿಯನ್​ ಯೋಗಿ ಬಾಬು ಸಿನಿಮಾಗೆ ಸಾಧು ಕೋಕಿಲ ಪುತ್ರನ ನಿರ್ದೇಶನ

ಸುರಾಗ್​ ಮತ್ತು ಯೋಗಿ ಬಾಬು ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಈಗಾಗಲೇ ಶೂಟಿಂಗ್ ಆರಂಭ ಆಗಿದೆ. ಸಾಧು ಕೋಕಿಲ ಅವರು ಸಂಗೀತ ನೀಡುತ್ತಿದ್ದಾರೆ.

Yogi Babu: ಕಾಲಿವುಡ್​ ಸ್ಟಾರ್​ ಕಾಮಿಡಿಯನ್​ ಯೋಗಿ ಬಾಬು ಸಿನಿಮಾಗೆ ಸಾಧು ಕೋಕಿಲ ಪುತ್ರನ ನಿರ್ದೇಶನ
ಯೋಗಿ ಬಾಬು, ಸುರಾಗ್​, ಸಾಧು ಕೋಕಿಲ
ಮದನ್​ ಕುಮಾರ್​
|

Updated on: Jun 28, 2023 | 4:41 PM

Share

ಖ್ಯಾತ ನಟ ಸಾಧು ಕೋಕಿಲ (Sadhu Kokila) ಅವರದ್ದು ಕಲಾವಿದರ ಕುಟುಂಬ. ನಟನೆ, ನಿರ್ದೇಶನ ಮತ್ತು ಸಂಗೀತದಲ್ಲಿ ಅವರಿಗೆ ಹಿಡಿತ ಇದೆ. ಈಗ ಸಾಧು ಕೋಕಿಲ ಅವರ ಪುತ್ರ ಸುರಾಗ್​ (Suraag) ಕೂಡ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ವಿಶೇಷ ಏನೆಂದರೆ, ತಮಿಳಿನ ಖ್ಯಾತ ನಟ ಯೋಗಿ ಬಾಬು (Yogi Babu) ಅವರ ಜೊತೆ ಸುರಾಗ್​ ಸಿನಿಮಾ ಮಾಡುತ್ತಿದ್ದಾರೆ. ಕಾಲಿವುಡ್​ವುಡ್​ನಲ್ಲಿ ಸ್ಟಾರ್​ ಕಾಮಿಡಿಯನ್​ ಆಗಿ ಗುರುತಿಸಿಕೊಂಡವರು ಯೋಗಿ ಬಾಬು. ಅಂಥ ಅನುಭವಿ ಕಲಾವಿದನಿಗೆ ನಿರ್ದೇಶನ ಮಾಡುವ ಅವಕಾಶ ಸುರಾಗ್​ಗೆ ಸಿಕ್ಕಿದೆ. ತಮಿಳಿನಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾ ಬಗ್ಗೆ ‘ಸಿನಿಮಾ ಎಕ್ಸ್​ಪ್ರೆಸ್​’ ವರದಿ ಪ್ರಕಟ ಮಾಡಿದೆ.

ಯೋಗಿ ಬಾಬು ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಕಾಮಿಡಿ ಪಾತ್ರಗಳಲ್ಲಿ ಅವರನ್ನು ಪ್ರೇಕ್ಷಕರು ಹೆಚ್ಚು ಇಷ್ಟಪಡುತ್ತಾರೆ. ಸುರಾಗ್​ ಜೊತೆ ಯೋಗಿ ಬಾಬು ಕೈ ಜೋಡಿಸಿರುವುದು ವಿಶೇಷ. ಈ ಸಿನಿಮಾ ಮಾಡಬೇಕು ಎಂದು ಬಹಳ ಸಮಯದಿಂದ ಸುರಾಗ್​ ಪ್ರಯತ್ನಿಸುತ್ತಿದ್ದರು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಯೋಗಿ ಬಾಬು ಮಾತ್ರವಲ್ಲದೇ ದಕ್ಷಿಣ ಭಾರತದ ಇನ್ನೂ ಇಬ್ಬರು ಸ್ಟಾರ್​ ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ಹೊರಬೀಳಲಿದೆ.

ಇದನ್ನೂ ಓದಿ: ತಮಿಳು ಸ್ಟಾರ್ ನಟ ಯೋಗಿ ಬಾಬುಗೆ ಸರ್​ಪ್ರೈಸ್ ಗಿಫ್ಟ್ ನೀಡಿದ ಎಂಎಸ್ ಧೋನಿ: ಫೋಟೋ ವೈರಲ್​

ಸುರಾಗ್​ ಮತ್ತು ಯೋಗಿ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. 2ನೇ ಹಂತದ ಶೂಟಿಂಗ್​ ಶೀಘ್ರದಲ್ಲೇ ಆರಂಭ ಆಗಲಿದೆ. ಸಾಧು ಕೋಕಿಲ ಅವರ ‘ಲೂಪ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸಾಧು ಕೋಕಿಲ ಅವರೇ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಾಧು ಕೋಕಿಲ ನಗಿಸ್ತಾರೆ, ಆದ್ರೆ ಲಯ ಹೆದರಿಸ್ತಾರೆ; ‘ತಾಯ್ತ’ ಸಿನಿಮಾದ ಟೀಸರ್ ಇಲ್ಲಿದೆ ನೋಡಿ

ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕನಾಗಿ ಸುರಾಗ್​ ಗುರುತಿಸಿಕೊಂಡಿದ್ದಾರೆ. ಅಲ್ಲದೇ ‘ಉಪ್ಪಿ 2’ ಸಿನಿಮಾಗೆ ಸಹ-ನಿರ್ದೇಶಕನಾಗಿ ಅವರು ಕೆಲಸ ಮಾಡಿ ಅನುಭವ ಹೊಂದಿದ್ದರು. ಈಗ ಯೋಗಿ ಬಾಬು ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಕೌತುಕ ಮೂಡಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ತಮಿಳಿನ ಜೊತೆಗೆ ಬೇರೆ ಭಾಷೆಗಳಿಗೂ ಈ ಚಿತ್ರ ಡಬ್​ ಆಗಲಿದೆ. ಕನ್ನಡದ ಕಲಾವಿದರಾದ ಉಮಾಶ್ರೀ, ಅವಿನಾಶ್​ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ