AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಬಿಡುಗಡೆ ಮುನ್ನ ಅಭಿಮಾನಿಗಳಿಗೆ ಎಚ್ಚರಿಕೆ ಪತ್ರ ಬರೆದ ಸಾಯಿ ಧರಮ್ ತೇಜ್

Bro Movie: ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಒಟ್ಟಿಗೆ ನಟಿಸಿರುವ 'ಬ್ರೋ' ತೆಲುಗು ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಂಬಂಧ, ನಟ ಸಾಯಿ ಧರಮ್ ತೇಜ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

ಸಿನಿಮಾ ಬಿಡುಗಡೆ ಮುನ್ನ ಅಭಿಮಾನಿಗಳಿಗೆ ಎಚ್ಚರಿಕೆ ಪತ್ರ ಬರೆದ ಸಾಯಿ ಧರಮ್ ತೇಜ್
ಬ್ರೋ
Follow us
ಮಂಜುನಾಥ ಸಿ.
|

Updated on: Jul 27, 2023 | 9:23 PM

ಮತ್ತೊಂದು ಪವನ್ ಕಲ್ಯಾಣ್ (Pawan Kalyan) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಪವನ್ ಕಲ್ಯಾಣ್ ಮಾತ್ರವೇ ಅಲ್ಲ ಯಾವುದೇ ತೆಲುಗು ಸೂಪರ್ ಸ್ಟಾರ್ (Super Star) ಸಿನಿಮಾ ಬಿಡುಗಡೆ ಆದಾಗಲು ಕೆಲವಾದರೂ ಚಿತ್ರಮಂದಿರಗಳು ಜಖಂ ಆಗುತ್ತವೆ, ಕೆಲವೆಡೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ. ಅತಿಯಾದ ಅಭಿಮಾನ ತೋರಲು ಹೋಗಿ ಪೆಟ್ಟು ಮಾಡಿಕೊಳ್ಳುತ್ತಾರೆ. ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಉಂಟು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನಟ ಸಾಯಿ ಧರಮ್ ತೇಜ್, ತಮ್ಮ ಹಾಗೂ ಪವನ್​ ಕಲ್ಯಾಣ್​ರ ಕಾಂಬಿನೇಷನ್​ನ ಸಿನಿಮಾ ಬಿಡುಗಡೆ ಆಗುವ ಮುನ್ನ ಅಭಿಮಾನಿಗಳಿಗೆ ಎಚ್ಚರಿಕೆ ಪತ್ರವೊಂದನ್ನು ಬರೆದಿದ್ದಾರೆ.

”ನಿಮ್ಮ ಪ್ರೀತಿ, ಅಭಿಮಾನಕ್ಕೆ ಚಿರಋಣಿ. ನೀವು ತೋರುತ್ತಿರುವ ಪ್ರೀತಿಯಿಂದ ನನ್ನ ಹೃದಯ ತುಂಬಿದೆ. ನೀವುಗಳು ನಮ್ಮ ‘ಬ್ರೋ; ದಿ ಅವತಾರ್’ ಸಿನಿಮಾಕ್ಕೆ ತೋರುತ್ತಿರುವ ಪ್ರೀತಿಗೆ ಅಭಿನಂದನೆ. ಸಿನಿಮಾದ ಪ್ರಚಾರ ಹಾಗೂ ಸಿನಿಮಾವನ್ನು ಸಂಭ್ರಮಿಸುವಲ್ಲಿ ನೀವು ತೋರುತ್ತಿರುವ ಆಸಕ್ತಿಗೆ ಧನ್ಯವಾದಗಳು. ಪ್ರಚಾರ ಕಾರ್ಯಕ್ರಮಗಳಿಗೆ ಭಾರಿ ಸಂಖ್ಯೆಯ ಜನ ಸೇರುತ್ತಿರುವುದಾಗಲಿ, ಸಿನಿಮಾದ ಭಿನ್ನ ಭಿನ್ನ ಬ್ಯಾನರ್, ಕಟೌಟ್​ಗಳನ್ನು ತಯಾರು ಮಾಡುತ್ತಿರುವುದಾಗಲಿ, ನಿಮ್ಮ ಈ ಉತ್ಸಾಹವೇ ನಮ್ಮನ್ನು ಇನ್ನಷ್ಟು ಶ್ರಮವಹಿಸಿ ಕೆಲಸ ಮಾಡುವಂತೆ ಮಾಡಿದೆ. ಅದಕ್ಕಾಗಿ ನಿಮಗೆ ಧನ್ಯವಾದ” ಎಂದಿದ್ದಾರೆ ಸಾಯಿ ಧರಮ್ ತೇಜ್.

ಇದನ್ನೂ ಓದಿ:Pawan Kalyan: ಪವನ್ ಕಲ್ಯಾಣ್ ಧರಿಸಿರುವ ಶೂಗಳ ಬೆಲೆ ಎಷ್ಟು ಲಕ್ಷ ಗೊತ್ತೆ?

”ಈ ನಡುವೆ, ಅಭಿಮಾನಿಗಳಲ್ಲಿ ನನ್ನ ಮನವಿ ಏನೆಂದರೆ, ಸಿನಿಮಾ ಬಿಡುಗಡೆ ಆಗುತ್ತಿರುವ ಈ ವೇಳೆ ನೀವು ಹೆಚ್ಚು ಎಚ್ಚರಿಕೆಯಿಂದ ಹಾಗೂ ಜಾಗರೂಕರಾಗಿ ವರ್ತಿಸಿ. ಬ್ಯಾನರ್ ಕಟ್ಟುವುದು, ಕಟೌಟ್ ಕಟ್ಟುವುದು ಒಟ್ಟಾರೆಯಾಗಿ ಸಿನಿಮಾವನ್ನು ಸಂಭ್ರಮಿಸುವ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಿ. ಅಭಿಮಾನಿಗಳಿಗೆ ಏನಾದರೂ ಕೆಡುಕಾಗಬಹುದು ಎಂಬ ಆಲೋಚನೆಯೇ ನನಗೆ ಭಯ ಉಂಟುಮಾಡುತ್ತದೆ. ನಿಮ್ಮ ಪ್ರೀತಿ, ಅಭಿಮಾನ ಬೆಲೆ ಕಟ್ಟಲಾಗದ್ದು, ಆದರೆ ನಿಮ್ಮ ಸುರಕ್ಷೆ ಎಲ್ಲದಕ್ಕಿಂತಲೂ ಮೊದಲು. ಎಲ್ಲರೂ ಸುರಕ್ಷತೆಯಿಂದ ಇರಿ” ಎಂದಿದ್ದಾರೆ.

ಸಾಯಿ ಧರಮ್ ತೇಜ್ ಹಾಗೂ ಪವನ್ ಕಲ್ಯಾಣ್ ನಟಿಸಿರುವ ‘ಬ್ರೋ’ ಸಿನಿಮಾ ಜುಲೈ 28ಕ್ಕೆ ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಪವನ್ ಕಲ್ಯಾಣ್ ಸಮಯ ಅಥವಾ ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆ ವೆಂಕಟೇಶ್ ಜೊತೆ ‘ಗೋಪಾಲ-ಗೋಪಾಲ’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಮಾಡರ್ನ್ ದೇವರ ಅವತಾರದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು.

‘ಬ್ರೋ’ ಸಿನಿಮಾವು ತಮಿಳು ಸಿನಿಮಾದ ರೀಮೇಕ್ ಆಗಿದ್ದು, ಮೂಲ ಸಿನಿಮಾದ ಕತೆಗೆ ಕೆಲವಾರು ಬದಲಾವಣೆಗಳನ್ನು ತಂದು ತೆಲುಗಿನಲ್ಲಿ ತೆರೆಗೆ ತರಲಾಗುತ್ತಿದೆ. ಮೂಲ ಸಿನಿಮಾ ನಿರ್ದೇಶಿಸಿ ನಟಿಸಿದ್ದ ಸಮುದ್ರಕಿಣಿ, ತೆಲುಗು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ತೆಲುಗಿನಲ್ಲಿ ಸಮುದ್ರಕಿಣಿ ನಟಿಸಿದ್ದ ಪಾತ್ರದಲ್ಲಿ ಪವನ್ ಕಲ್ಯಾಣ್ ನಟಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್