AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾದಲ್ಲಿ ಸಾಯಿ ಪಲ್ಲವಿ, ಚಿತ್ರೀಕರಣ ಪ್ರಾರಂಭ

Sai Pallavi: ಕಮಲ್ ಹಾಸನ್ ನಿರ್ಮಾಣ ಮಾಡುತ್ತಿರುವ ಹೊಸ ತಮಿಳು ಸಿನಿಮಾದಲ್ಲಿ ಸಾಯಿ ಪಲ್ಲವಿ, ಶಿವಕಾರ್ತಿಕೇಯನ್ ಒಟ್ಟಿಗೆ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.

ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾದಲ್ಲಿ ಸಾಯಿ ಪಲ್ಲವಿ, ಚಿತ್ರೀಕರಣ ಪ್ರಾರಂಭ
ಕಮಲ್ ಹಾಸನ್ ಸಿನಿಮಾ
ಮಂಜುನಾಥ ಸಿ.
|

Updated on: May 05, 2023 | 9:10 PM

Share

ನಟಿ ಸಾಯಿಪಲ್ಲವಿ (Sai Pallavi), ದಕ್ಷಿಣದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ತಮ್ಮ ವಾರಗೆಯ ಇತರೆ ನಟಿಯರಿಗಿಂತಲೂ ಬಹಳ ಭಿನ್ನ. ಸಿಕ್ಕ ಪಾತ್ರಗಳನ್ನೆಲ್ಲ ಒಪ್ಪಿಕೊಳ್ಳದೆ. ನಟನೆಗೆ ಅವಕಾಶವಿರುವ, ಸಂದೇಶವಿರುವ ಸಿನಿಮಾಗಳನ್ನು ಮಾತ್ರವೇ ಒಪ್ಪಿ, ನಟಿಸುತ್ತಾ ಬರುತ್ತಿದ್ದಾರೆ. ಆಯ್ಕೆಯ ವಿಷಯದಲ್ಲಿ ಬಹಳ ಚ್ಯೂಸಿ ಆಗಿರುವ ಸಾಯಿ ಪಲ್ಲವಿ, ಸ್ಟಾರ್ ನಟರ ಸಿನಿಮಾ ಅವಕಾಶಗಳನ್ನೂ ಪಕ್ಕಕ್ಕೆ ತಳ್ಳಿದ್ದಾರೆ. ಅಂಥಹವರು ಇದೀಗ ತಮ್ಮ ಮೆಚ್ಚಿನ ನಟ ಕಮಲ್ ಹಾಸನ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಸಾಯಿ ಪಲ್ಲವಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕಮಲ್ ಹಾಸನ್ ನಾಯಕರಲ್ಲ ಬದಲಿಗೆ ನಿರ್ಮಾಪಕರು.

ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Haasan) ಸಾರಥ್ಯದ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ (RKFI) ನಡಿ ಮೂಡಿಬಂದಿದ್ದ ‘ವಿಕ್ರಮ್’ ಸಿನಿಮಾ ಬ್ಲಾಕ್ ಬಸ್ಟರ್ ಅನಿಸಿಕೊಂಡಿದೆ. ವಿಕ್ರಂ, ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ನ 50 ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಆ ಸಿನಿಮಾ ಅದ್ಧೂರಿ ಸಕ್ಸಸ್ ಕಂಡಿದೆ. ಇದೀಗ ಕಮಲ್​ರ ರಾಜ್ ಕಮಲ್ ನಿರ್ಮಾಣ ಸಂಸ್ಥೆಯ 51 ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ (SPIP) ಮತ್ತೊಮ್ಮೆ ಜೊತೆಗೂಡಿ ಹೊಸ ಸಿನಿಮಾಕ್ಕೆ ಕೈ ಹಾಕಿದ್ದಾರೆ.

ಕಮಲ್ ಹಾಸನ್ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಯೇನ್ ನಟಿಸುತ್ತಿದ್ದು, ನಾಯಕಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಆರ್ ಮಹೇಂದ್ರನ್, ಶಿವಕಾರ್ತಿಕೇಯನ್, ಸಾಯಿ ಪಲ್ಲವಿ, ರಾಜ್ ಕುಮಾರ್ ಪೆರಿಯಸಾಮಿ, ಜಿವಿ ಪ್ರಕಾಶ್, ಸಹ ನಿರ್ಮಾಪಕ ವಕೀಲ್ ಖಾನ್, ಲಾಡಾ ಗುರುಡೆನ್ ಸಿಂಗ್, ಜನರಲ್ ಮ್ಯಾನೇಜರ್ ಮತ್ತು ಹೆಡ್, ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್, ಇಂಡಿಯಾ ಮತ್ತು ಶ್ರೀ ನಾರಾಯಣನ್, CEO, RKFI ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಿನಿಮಾಕ್ಕೆ ರಾಜ್ ಕುಮಾರ್ ಪೆರಿಯಸಾಮಿ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಶಿವಕಾರ್ತಿಕೇಯನ್ ಅವರನ್ನು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ ಶಿವಕಾರ್ತಿಕೇಯನ್​ರ 21ನೇ ಸಿನಿಮಾ ಇದಾಗಿರುವ ಕಾರಣ #SK21 ಎಂದು ಕರೆಯಲಾಗುತ್ತಿದೆ. ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಅವರೊಟ್ಟಿಗೆ ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಜಿ ವಿ ಪ್ರಕಾಶ್ ಸಂಗೀತ ನಿರ್ದೇಶನ, , ಸಿಎಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನಕಾರ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ನ ಸಹ-ನಿರ್ಮಾಣದಲ್ಲಿದೆ ಕೈ ಜೋಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು