ಬರಲಿದೆ ಸಾಯಿ ಪಲ್ಲವಿ ಸ್ಪೆಷಲ್​ ವಿಡಿಯೋ: ಹುಟ್ಟುಹಬ್ಬಕ್ಕೆ ‘ತಂಡೇಲ್​’ ಸಿಹಿ ಸುದ್ದಿ

‘ತಂಡೇಲ್​’ ಚಿತ್ರತಂಡದವರು ಗುಡ್​ ನ್ಯೂಸ್​ ನೀಡಿದ್ದಾರೆ. ಮೇ 9ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ಸಾಯಿ ಪಲ್ಲವಿಗೆ ವಿಶ್​ ಮಾಡುವ ಸಲುವಾಗಿ ಒಂದು ವಿಶೇಷವಾದ ವಿಡಿಯೋ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಹಲವು ಸಿನಿಮಾಗಳಲ್ಲಿ ಸಾಯಿ ಪಲ್ಲವಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ತಂಡೇಲ್​’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ.

ಬರಲಿದೆ ಸಾಯಿ ಪಲ್ಲವಿ ಸ್ಪೆಷಲ್​ ವಿಡಿಯೋ: ಹುಟ್ಟುಹಬ್ಬಕ್ಕೆ ‘ತಂಡೇಲ್​’ ಸಿಹಿ ಸುದ್ದಿ
ಸಾಯಿ ಪಲ್ಲವಿ
Follow us
ಮದನ್​ ಕುಮಾರ್​
|

Updated on: May 08, 2024 | 8:19 PM

ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರು ಮೇ 9ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಅವರು 32ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಸಾಯಿ ಪಲ್ಲವಿ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಜನ್ಮದಿನದ (Sai Pallavi Birthday) ಪ್ರಯುಕ್ತ ಸಾಯಿ ಪಲ್ಲವಿ ಅವರ ಅಭಿಮಾನಿಗಳಿಗೆ ಕೆಲವು ವಿಶೇಷ ಗಿಫ್ಟ್​ಗಳು ಸಿಗಲಿವೆ. ಈ ಬಗ್ಗೆ ‘ತಂಡೇಲ್​’ (Thandel) ಚಿತ್ರತಂಡ ಸಿಹಿ ಸುದ್ದಿ ನೀಡಿದೆ. ಈ ಚಿತ್ರತಂಡದಿಂದ ಒಂದು ಸ್ಪೆಷಲ್​ ವಿಡಿಯೋ ರಿಲೀಸ್​ ಆಗಲಿದೆ.

‘ತಂಡೇಲ್​’ ಸಿನಿಮಾದಲ್ಲಿ ನಾಗ ಚೈತನ್ಯ ಅವರು ಸಾಯಿ ಪಲ್ಲವಿಗೆ ಜೋಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಮೇ 9ರಂದು ಸಾಯಿ ಪಲ್ಲವಿ ಅವರ ಜನ್ಮದಿನದ ಖುಷಿಯಲ್ಲಿ ಬೆಳಗ್ಗೆ 9 ಗಂಟೆ 9 ನಿಮಿಷಕ್ಕೆ ವಿಶೇಷವಾದ ವಿಡಿಯೋವೊಂದನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡದವರು ತಿಳಿಸಿದ್ದಾರೆ. ಅದನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾದಿದ್ದಾರೆ.

ಡಿಸೆಂಬರ್​ 20ರಂದು ‘ತಂಡೇಲ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಅವರು ಮೀನುಗಾರನ ಪಾತ್ರ ಮಾಡುತ್ತಿದ್ದಾರೆ. ಟೀಸರ್​ ಬಿಡುಗಡೆ ಆದ ಬಳಿಕ ಈ ಚಿತ್ರದ ಮೇಲಿನ ಹೈಪ್​ ಹೆಚ್ಚಾಗಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಅವರು ಸತ್ಯ ಎಂಬ ಪಾತ್ರ ಮಾಡುತ್ತಿದ್ದಾರೆ. ‘ಲವ್​ ಸ್ಟೋರಿ’ ಬಳಿಕ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

View this post on Instagram

A post shared by Geetha Arts (@geethaarts)

‘ತಂಡೇಲ್​’ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಚಿತ್ರೀಕರಣ ಮುಗಿಯುವುದಕ್ಕೂ ಮೊದಲೇ ಭರ್ಜರಿ ಡೀಲ್​ ಮಾಡಿದೆ. ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು 40 ಕೋಟಿ ರೂಪಾಯಿಗೆ ಸೇಲ್​ ಆಗಿವೆ ಎಂದು ಇತ್ತೀಚೆಗೆ ಸುದ್ದಿ ಕೇಳಿಬಂದಿತ್ತು. ಈಗ ಸಾಯಿ ಪಲ್ಲವಿ ಅವರ ಬರ್ತ್​ಡೇಗೆ ಸ್ಪೆಷಲ್​ ವಿಡಿಯೋ ಬಿಡುಗಡೆ ಆದರೆ ಸಿನಿಮಾ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಾಗುವುದು ಖುಚಿತ.

ಇದನ್ನೂ ಓದಿ: ಸಾಯಿ ಪಲ್ಲವಿ ಜೊತೆ ಆಮಿರ್​ ಖಾನ್​ ಮಗನ ಸುತ್ತಾಟ; ಫೋಟೋ ವೈರಲ್​

ಇದಲ್ಲದೇ ಇನ್ನೂ ಹಲವು ಸಿನಿಮಾಗಳಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ ಸಿನಿಮಾದಲ್ಲಿ ಅವರು ಸೀತೆಯ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ರಾಮನಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಆಮಿರ್ ಖಾನ್​ ಮಗ ಜುನೈದ್​ ಖಾನ್​ ಜೊತೆಗೂ ಸಾಯಿ ಪಲ್ಲವಿ ಅವರು ಒಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾಗೆ ವಿದೇಶದಲ್ಲಿ ಶೂಟಿಂಗ್ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ