‘ಎಲ್ಲರ ಜೀವವೂ ಮುಖ್ಯ ಎಂದು ನಂಬಿದವಳು ನಾನು’; ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಾಯಿ ಪಲ್ಲವಿ

ಬೇರೆಯವರ ಜೀವವನ್ನು ತೆಗೆದುಕೊಳ್ಳುವ ಹಕ್ಕು ನಮಗೆ ಇಲ್ಲ. ನಾನು ಎಂಬಿಬಿಎಸ್​ ಪದವೀಧರೆಯಾಗಿ ಎಲ್ಲರ ಜೀವವೂ ಮುಖ್ಯ ಎಂದು ನಂಬಿದ್ದೇನೆ’ ಎಂದಿದ್ದಾರೆ ಸಾಯಿ ಪಲ್ಲವಿ

‘ಎಲ್ಲರ ಜೀವವೂ ಮುಖ್ಯ ಎಂದು ನಂಬಿದವಳು ನಾನು’; ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಾಯಿ ಪಲ್ಲವಿ
Sai pallavi
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 18, 2022 | 9:59 PM

‘ವಿರಾಟ ಪರ್ವಂ’ ಸಿನಿಮಾದ (Virata Parvam) ಪ್ರಚಾರದ ವೇಳೆ ನಟಿ ಸಾಯಿ ಪಲ್ಲವಿ (Sai Pallavi)  ನೀಡಿದ ಒಂದು ಹೇಳಿಕೆ ವಿವಾದಕ್ಕೆ ನಾಂದಿ ಹಾಡಿತ್ತು. ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದು ಹೇಳಿರುವ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದರು. ಈ ಬಗ್ಗೆ ಪರ ವಿರೋಧ (Sai Pallavi Controversy) ಚರ್ಚೆ ನಡೆಯುತ್ತಿದೆ. ಕೆಲವರು ಸಾಯಿ ಪಲ್ಲವಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಸಾಯಿ ಪಲ್ಲವಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಇದೇ ಮೊದಲ ಬಾರಿಗೆ ಸ್ಪಷ್ಟನೆ ನೀಡಲು ನಿಮ್ಮ ಎದುರು ಬರುತ್ತಿದ್ದೇನೆ. ಹೃದಯದಿಂದ ಮಾತನಾಡುವಾಗ ನಾನು ಎರಡು ಬಾರಿ ಯೋಚಿಸುತ್ತೇನೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಾನು ಎಡವೋ ಅಥವಾ ಬಲವೋ ಎಂದು ಪ್ರಶ್ನೆ ಮಾಡಲಾಯಿತು. ಆಗ ನಾನು ತಟಸ್ಥ ಎನ್ನುವ ಉತ್ತರ ಕೊಟ್ಟೆ. ನಾವು ಮೊದಲು ಮನುಷ್ಯರಾಗಬೇಕು ಎಂದು ಹೇಳಿದ್ದೆ. ನಾನು ವಿಚಾರಗಳನ್ನು ಹೇಗೆ ನೋಡುತ್ತೇನೆ ಎನ್ನುವುದನ್ನು ಹೇಳಿದ್ದೆ’ ಎಂದು ಮಾತು ಆರಂಭಿಸಿದ್ದಾರೆ ಅವರು.

ಇದನ್ನೂ ಓದಿ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

‘ಎರಡು ಘಟನೆ ನನ್ನನ್ನು ವಿಚಲಿತವಾಗಿಸಿತ್ತು. ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ನೋಡಿದ ನಂತರ ನಾನು ಡಿಸ್ಟರ್ಬ್​ ಆಗಿದ್ದೆ. ಅಲ್ಲಿ ನಡೆದ ಹತ್ಯೆ ಬಗ್ಗೆ ಮರುಗಿದ್ದೆ. ನಿರ್ದೇಶಕರ (ವಿವೇಕ್​ ಅಗ್ನಿಹೋತ್ರಿ) ಜತೆ ಈ ಬಗ್ಗೆ ಮಾತನಾಡಿದ್ದೆ. ಅದೇ ರೀತಿ ಕೊವಿಡ್ ಸಂದರ್ಭದಲ್ಲಿ ಆದ ಗುಂಪು ಹಲ್ಲೆ ವಿಡಿಯೋ ನೋಡಿ ನಾನು ವಿಚಲಿತಗೊಂಡಿದ್ದೆ. ಹಿಂಸೆ ತಪ್ಪು. ಯಾವುದೇ ಧರ್ಮದ ಹೆಸರಲ್ಲಿ ಹಿಂಸೆ ಮಾಡುವುದು ಪಾಪ. ಗುಂಪು ಹಲ್ಲೆಯನ್ನು ಕೆಲವರು ಸಮರ್ಥಿಸಿಕೊಂಡಿದ್ದರು. ನಿಜಕ್ಕೂ ಅದು ಬೇಸರದ ವಿಚಾರ. ಬೇರೆಯವರ ಜೀವವನ್ನು ತೆಗೆದುಕೊಳ್ಳುವ ಹಕ್ಕು ನಮಗೆ ಇಲ್ಲ. ನಾನು ಎಂಬಿಬಿಎಸ್​ ಪದವೀಧರೆಯಾಗಿ ಎಲ್ಲರ ಜೀವವೂ ಮುಖ್ಯ ಎಂದು ನಂಬಿದ್ದೇನೆ’ ಎಂದಿದ್ದಾರೆ ಸಾಯಿ ಪಲ್ಲವಿ.

‘ಎಲ್ಲಾ ಭಾರತೀಯರು ಸಹೋದರರಿದ್ದಂತೆ ಎಂದು ಹೇಳುತ್ತಾ ಬೆಳೆದವರು ನಾವು. ನನ್ನ ಮನಸ್ಸಲ್ಲಿ ಅದು ಆಳವಾಗಿ ಕೂತಿದೆ. ನಾನು ಮಾತನಾಡುವಾಗ ತಟಸ್ಥವಾಗಿ ಮಾತನಾಡುತ್ತೇನೆ. ನಾನು ಮಾತನಾಡಿದ್ದನ್ನು ಬೇರೆಯ ರೀತಿ ಅರ್ಥೈಸಿದ್ದು ನಿಜಕ್ಕೂ ಬೇಸರ ತರಿಸುವಂತಹದ್ದು. ಪೂರ್ತಿ ಸಂದರ್ಶನ ನೋಡದೆ ಕೆಲವರು ಮಾತನಾಡಿದ್ದು ಬೇಸರದ ವಿಚಾರ. ನನ್ನ ಪರವಾಗಿ ನಿಂತವರಿಗೆ ಧನ್ಯವಾದ’ ಎಂದಿದ್ದಾರೆ ಸಾಯಿ ಪಲ್ಲವಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ