AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

‘ಗಾರ್ಗಿ’ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ ನೀಡಿದ ವಿಮರ್ಶಕರು; ಸಾಯಿ ಪಲ್ಲವಿ ಫುಲ್​ ಖುಷ್
ಸಾಯಿ ಪಲ್ಲವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 14, 2022 | 2:39 PM

ನಟಿ ಸಾಯಿ ಪಲ್ಲವಿ (Sai Pallavi) ಅವರ ನಟನೆಯ ‘ವಿರಾಟ ಪರ್ವಂ’ ಸಿನಿಮಾ (Virat Parvam Movie) ಹೀನಾಯ ಸೋಲು ಕಂಡಿತು. ಈ ಚಿತ್ರದ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಈ ಸಿನಿಮಾ ಸೋಲಿಗೆ ಕಾರಣ ಎನ್ನುವ ಮಾತು ಕೇಳಿ ಬಂತು. ಈ ಬೆನ್ನಲ್ಲೇ ಅವರ ನಟನೆಯ ‘ಗಾರ್ಗಿ’ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರ ಜುಲೈ 15ರಂದು ರಿಲೀಸ್ ಆಗುತ್ತಿದೆ. ‘ಗಾರ್ಗಿ’ ರಿಲೀಸ್​ಗೂ ಮೊದಲೇ ಸ್ಪೆಷಲ್​ ಶೋ ಆಯೋಜಿಸಲಾಗಿತ್ತು. ಈ ವೇಳೆ ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಸಾಯಿ ಪಲ್ಲವಿ ಅವರ ನಟನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ಚಿತ್ರಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಇತ್ತೀಚೆಗೆ ‘ಗಾರ್ಗಿ’ ಸಿನಿಮಾದ ಟ್ರೇಲರ್ ರಿಲೀಸ್ ಆಯಿತು. ಈ ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಅವರು ಗಾರ್ಗಿ ಹೆಸರಿನ ಟೀಚರ್ ಪಾತ್ರ ಮಾಡುತ್ತಿರುವ ವಿಚಾರ ರಿವೀಲ್ ಆಗಿತ್ತು. ಗಾರ್ಗಿಯ ತಂದೆ ಸೆಕ್ಯುರಿಟಿ ಗಾರ್ಡ್​. ಗಾರ್ಗಿ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡುತ್ತಾರೆ. ಅದು ಏಕೆ? ತಂದೆಯನ್ನು ಗಾರ್ಗಿ ಮರಳಿ ಹೇಗೆ ಮನೆಗೆ ಕರೆತರುತ್ತಾಳೆ ಎಂಬುದು ಸಿನಿಮಾದ ಕಥೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಅನೇಕ ವಿಮರ್ಶಕರು ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್ಸ್ ನೀಡಿದ್ದಾರೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸಿನಿಮಾ ವಿಮರ್ಶಕ ರಾಜಶೇಖರ್ ಅವರು ‘ಗಾರ್ಗಿ’ ಚಿತ್ರಕ್ಕೆ ಭೇಷ್ ಎಂದಿದ್ದಾರೆ. ಈ ಚಿತ್ರದಲ್ಲಿನ ಸಾಯಿ ಪಲ್ಲವಿ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಕೂಡ ಈ ಚಿತ್ರಕ್ಕೆ ಐದಕ್ಕೆ ಐದು ಸ್ಟಾರ್​ ನೀಡಿ ಸಾಯಿ ಪಲ್ಲವಿ ನಟನೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲೇ ಬೇಕು ಎಂದ ಕೋರ್ಟ್

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಲ್ಲಿ ತೋರಿಸಿದ  ಕಾಶ್ಮೀರಿ ಪಂಡಿತರ ಹತ್ಯೆಯನ್ನು ಸಾಯಿ ಪಲ್ಲವಿ ಅವರು ಇತ್ತೀಚೆಗೆ ನಡೆದ ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಯಿಂದ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ಬಗ್ಗೆ ಅವರು ಸ್ಪಷ್ಟನೆ ನೀಡುವ ವಿಡಿಯೋ ಮಾಡಿ, ‘ಎಲ್ಲರ ಜೀವವೂ ಮುಖ್ಯ ಎಂದು ಹೇಳಿದ್ದರು’. ಅವರ ಈ ಹೇಳಿಕೆಯಿಂದಲೇ ‘ವಿರಾಟ ಪರ್ವಂ’ ಸಿನಿಮಾ ಸೋತಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಈಗ ಅವರು ‘ಗಾರ್ಗಿ’ ಚಿತ್ರದ ಮೂಲಕ ಗೆಲುವು ಕಾಣುವ ಸೂಚನೆ ನೀಡಿದ್ದಾರೆ.

Published On - 2:38 pm, Thu, 14 July 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್