AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

Pushpa 2 Movie | ‘ಪುಷ್ಪ 2’ ಸಿನಿಮಾದಲ್ಲಿ ಫಹಾದ್​ ಫಾಸಿಲ್​ ಅವರು ಮುಖ್ಯವಾದೊಂದು ಪಾತ್ರ ಮಾಡುತ್ತಿದ್ದಾರೆ. ಅವರ ಪತ್ನಿಯ ಪಾತ್ರಕ್ಕೆ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ.

Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು
ಅಲ್ಲು ಅರ್ಜುನ್, ಸಾಯಿ ಪಲ್ಲವಿ
ಮದನ್​ ಕುಮಾರ್​
|

Updated on:Mar 08, 2023 | 1:05 PM

Share

ಸುಕುಮಾರ್​ ನಿರ್ದೇಶನ ಮಾಡುತ್ತಿರುವ ‘ಪುಷ್ಪ 2’ ಸಿನಿಮಾ (Pushpa 2 Movie) ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ಹಲವಾರು ಅಂತೆ-ಕಂತೆಗಳು ಹರಿದಾಡುತ್ತಿವೆ. ಪಾತ್ರವರ್ಗದ ಬಗ್ಗೆಯಂತೂ ಸಾಕಷ್ಟು ಗಾಸಿಪ್​ಗಳಿವೆ. ನಟಿ ಸಾಯಿ ಪಲ್ಲವಿ (Sai Pallavi) ಅವರು ಈ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸಾಯಿ ಪಲ್ಲವಿ ಕೂಡ ಯಾವುದೇ ವಿಚಾರ ಬಾಯಿ ಬಿಟ್ಟಿಲ್ಲ. ಹಾಗಿದ್ದರೂ ಕೂಡ ಟಾಲಿವುಡ್​ (Tollywood) ಅಂಗಳಲ್ಲಿ ಈ ಗಾಸಿಪ್​ ಜೋರಾಗಿದೆ. ‘ಪುಷ್ಪ 2’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್​. ಹಾಗಾದರೆ ಸಾಯಿ ಪಲ್ಲವಿ ಅವರಿಗೆ ಏನು ಕೆಲಸ? ಈ ಬಗ್ಗೆಯೂ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಈವರೆಗೂ ಸಾಯಿ ಪಲ್ಲವಿ ಅವರು ಅಲ್ಲು ಅರ್ಜುನ್​ ಜೊತೆ ನಟಿಸಿಲ್ಲ. ಶೀಘ್ರದಲ್ಲೇ ಅವರು ‘ಪುಷ್ಪ 2’ ಶೂಟಿಂಗ್​ ಸೆಟ್​ಗೆ ಬರಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಸಿನಿಮಾದಲ್ಲಿ ಫಹಾದ್​ ಫಾಸಿಲ್​ ಅವರು ಮುಖ್ಯವಾದೊಂದು ಪಾತ್ರ ಮಾಡುತ್ತಿದ್ದಾರೆ. ಅವರ ಪತ್ನಿಯ ಪಾತ್ರಕ್ಕೆ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎಂದು ಗಾಸಿಪ್​ ಹಬ್ಬಿದೆ.

ಇದನ್ನೂ ಓದಿ: Sai Pallavi: ಸೀತೆ ಪಾತ್ರದಲ್ಲಿ ನಟಿಸುತ್ತಾರಾ ಸಾಯಿ ಪಲ್ಲವಿ? ಇದು ಬೆಸ್ಟ್ ಆಯ್ಕೆ ಅಂತಾರೆ ಅಭಿಮಾನಿಗಳು

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಸೋಶಿಯಲ್​ ಮೀಡಿಯಾದಲ್ಲಿ ಈ ವಿಷಯ ಹರಡುತ್ತಿದ್ದಂತೆಯೇ ಸಾಯಿ ಪಲ್ಲವಿ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಈ ಸುದ್ದಿ ನಿಜವೇ ಹೌದಾದರೆ ‘ಪುಷ್ಪ 2’ ಸಿನಿಮಾ ಸಖತ್​ ಇಂಟರೆಸ್ಟಿಂಗ್​ ಆಗಲಿದೆ. ಅವರನ್ನು ನೆಗೆಟಿವ್​ ರೋಲ್​ನಲ್ಲಿ ನೋಡಲು ನಾವು ಕಾಯುತ್ತಿದ್ದೇವೆ’ ಎನ್ನುತ್ತಿದ್ದಾರೆ ಸಾಯಿ ಪಲ್ಲವಿ ಅಭಿಮಾನಿಗಳು​. ಆದರೆ ಚಿತ್ರತಂಡದವರ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.

ಇದನ್ನೂ ಓದಿ: Sai Pallavi: ಚಿತ್ರಮಂದಿರದಲ್ಲಿ ಸೋತ ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ ಚಿತ್ರಕ್ಕೆ ಈಗ ಅಂತಾರಾಷ್ಟ್ರೀಯ ಮನ್ನಣೆ

‘ಕೆಜಿಎಫ್​ 2’ ಚಿತ್ರಕ್ಕಿಂತಲೂ ‘ಪುಷ್ಪ 2’ ಸಿನಿಮಾ ದೊಡ್ಡ ಹಿಟ್​ ಆಗಬೇಕು ಎಂಬ ಗುರಿ ಇಟ್ಟುಕೊಂಡು ನಿರ್ದೇಶಕ ಸುಕುಮಾರ್​ ಮತ್ತು ಅವರ ತಂಡದವರು ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಸ್ಕ್ರಿಪ್ಟ್​ನಲ್ಲಿಯೂ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದೆ. ಪಾತ್ರವರ್ಗದಲ್ಲಿ ಸರ್ಪ್ರೈಸ್​ ಇರಲಿದೆ. ದೊಡ್ಡ ಕ್ಯಾನ್ವಾಸ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಇದನ್ನೂ ಓದಿ: ‘ಎಲ್ಲರ ಜೀವವೂ ಮುಖ್ಯ ಎಂದು ನಂಬಿದವಳು ನಾನು’; ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಾಯಿ ಪಲ್ಲವಿ

ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್​ 8ರಂದು ‘ಪುಷ್ಪ 2’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್​ ಬಲವಾಗಿ ಹಬ್ಬಿದೆ. ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್​ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:05 pm, Wed, 8 March 23

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್