AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ‘ವಿರಾಟ ಪರ್ವಂ’ ಬೆನ್ನಲ್ಲೇ ರಿಲೀಸ್​ ಆಗ್ತಿದೆ ಸಾಯಿ ಪಲ್ಲವಿ ಹೊಸ ಚಿತ್ರ; ಜುಲೈ 15ಕ್ಕೆ ‘ಗಾರ್ಗಿ’ ಬಿಡುಗಡೆ

Sai Pallavi | Gargi Movie: ಜುಲೈ 15ರಂದು ‘ಗಾರ್ಗಿ’ ಸಿನಿಮಾ ಕನ್ನಡದಲ್ಲೂ ರಿಲೀಸ್​ ಆಗಲಿದೆ. ಕನ್ನಡದ ಅವತರಣಿಕೆಗೆ ಸ್ವತಃ ಸಾಯಿ ಪಲ್ಲವಿ ಅವರೇ ಡಬ್​​ ಮಾಡಿದ್ದಾರೆ ಎಂಬದು ವಿಶೇಷ.

Sai Pallavi: ‘ವಿರಾಟ ಪರ್ವಂ’ ಬೆನ್ನಲ್ಲೇ ರಿಲೀಸ್​ ಆಗ್ತಿದೆ ಸಾಯಿ ಪಲ್ಲವಿ ಹೊಸ ಚಿತ್ರ; ಜುಲೈ 15ಕ್ಕೆ ‘ಗಾರ್ಗಿ’ ಬಿಡುಗಡೆ
ಸಾಯಿ ಪಲ್ಲವಿ
TV9 Web
| Edited By: |

Updated on: Jul 04, 2022 | 7:20 AM

Share

ನಟಿ ಸಾಯಿ ಪಲ್ಲವಿ (Sai Pallavi) ಅವರು ಇತ್ತೀಚಿನ ದಿನಗಳಲ್ಲಿ ಸಖತ್​ ಸುದ್ದಿ ಆಗಿದ್ದರು. ಅವರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆದಿತ್ತು. ಅವರು ನೀಡಿದ ಒಂದೇ ಒಂದು ಹೇಳಿಕೆಯಿಂದ ಸಾಕಷ್ಟು ಗದ್ದಲ ಎದ್ದಿತ್ತು. ಆ ಸಮಯದಲ್ಲೇ ಅವರ ‘ವಿರಾಟ ಪರ್ವಂ’ (Virata Parvam) ಚಿತ್ರ ಬಿಡುಗಡೆ ಆಯಿತು. ಅವರು ನೀಡಿದ ಹೇಳಿಕೆಯ ಪರಿಣಾಮವೋ ಅಥವಾ ನಿಜಕ್ಕೂ ಆ ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಲಿಲ್ಲವೋ ಗೊತ್ತಿಲ್ಲ.. ಕಾಕತಾಳೀಯ ಎಂಬಂತೆ ‘ವಿರಾಟ ಪರ್ವಂ’ ಸಿನಿಮಾ ಯಶಸ್ಸು ಕಾಣಲಿಲ್ಲ. ಈಗ ಆ ಸೋಲಿನ ಬೆನ್ನಲ್ಲೇ ಸಾಯಿ ಪಲ್ಲವಿ ಅವರ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಹೌದು, ಅವರು ನಟಿಸಿರುವ ‘ಗಾರ್ಗಿ’ (Gargi Movie) ಚಿತ್ರ ಜುಲೈ 15ರಂದು ಚಿತ್ರಮಂದಿರದಲ್ಲಿ ರಿಲೀಸ್​ ಆಗಲಿದೆ. ಈ ಸಿನಿಮಾಗೆ ಗೌತಮ್​ ರಾಮಚಂದ್ರನ್​ ನಿರ್ದೇಶನ ಮಾಡಿದ್ದಾರೆ.

‘ಗಾರ್ಗಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾತ್ರವಲ್ಲದೇ ಸ್ವತಃ ಸಾಯಿ ಪಲ್ಲವಿ ಅವರಿಗೂ ಸಖತ್​ ನಿರೀಕ್ಷೆ ಇದೆ. ಸದ್ದಿಲ್ಲದೇ ಈ ಸಿನಿಮಾ ಸೆಟ್ಟೇರಿತ್ತು. ಬಹುತೇಕ ಎಲ್ಲ ಕೆಲಸಗಳು ಮುಗಿದ ನಂತರವೇ ಅವರು ಈ ಚಿತ್ರದ ಬಗ್ಗೆ ನ್ಯೂಸ್​ ಬಿಟ್ಟುಕೊಟ್ಟಿದ್ದರು. ವಿಶೇಷ ಏನೆಂದರೆ, ಈ ಸಿನಿಮಾ ಕನ್ನಡದಲ್ಲೂ ರಿಲೀಸ್​ ಆಗುತ್ತಿದೆ. ಕನ್ನಡದ ಅವತರಣಿಕೆಗೆ ಸಾಯಿ ಪಲ್ಲವಿ ಅವರೇ ಡಬ್​​ ಮಾಡಿದ್ದಾರೆ. ಅವರು ಕನ್ನಡದಲ್ಲಿ ಡಬ್​ ಮಾಡುತ್ತಿರುವ ವಿಡಿಯೋ ಕೆಲ ದಿನಗಳ ಹಿಂದೆ ವೈರಲ್​ ಆಗಿತ್ತು.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರು ಗ್ಲಾಮರ್​ ನಂಬಿಕೊಂಡು ಸಿನಿಮಾ ಒಪ್ಪಿಕೊಳ್ಳುವವರಲ್ಲ. ಅಭಿನಯದ ಮೂಲಕವೇ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ಹಿಂದೆ ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆದರೆ ಜೂನ್​ 17ರಂದು ಬಿಡುಗಡೆಯಾದ ‘ವಿರಾಟ ಪರ್ವಂ’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಂಡಿಲ್ಲ. ಹಾಗಾಗಿ ಅವರಿಗೆ ‘ಗಾರ್ಗಿ’ ಚಿತ್ರದ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

‘ಗಾರ್ಗಿ’ ಚಿತ್ರದ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ಕೌತುಕ ಮನೆ ಮಾಡಿದೆ. ಸಾಯಿ ಪಲ್ಲವಿ ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ. ಈ ಸಿನಿಮಾವನ್ನು ತಮಿಳುನಾಡಿನಲ್ಲಿ ರಿಲೀಸ್​ ಮಾಡಲು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಅವರು ಮುಂದೆ ಬಂದಿದ್ದಾರೆ. ಆ ಕಾರಣದಿಂದಲೂ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: Sai Pallavi: ಸಿಂಪಲ್​ ಸೀರೆ ಧರಿಸಿ ಕಣ್ಮನ ಸೆಳೆದ ಸಾಯಿ ಪಲ್ಲವಿ; ಸ್ಟಾರ್​ ನಟಿಗೆ ಅಭಿಮಾನಿಗಳ ಲೈಕ್ಸ್​ ಸುರಿಮಳೆ

Sai Pallavi: ಸಾಯಿ ಪಲ್ಲವಿಗೆ ಬಂತು ಮತ್ತಷ್ಟು ಬಲ; ಕನ್ನಡದಲ್ಲೂ ಬರುವ ಹೊಸ ಚಿತ್ರಕ್ಕೆ ಕೈ ಜೋಡಿಸಿದ ಸೂರ್ಯ-ಜ್ಯೋತಿಕಾ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?