ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನ ಪಡೆದ ನಟಿ ಸಾಯಿ ಪಲ್ಲವಿ
Sai Pallavi: ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಕಾಣಿಯೂರು ಮಠಕ್ಕೆ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮಿಗಳನ್ನು ಭೇಟಿಯಾಗಿ ಚರ್ಚಿಸಿ ಆಶೀರ್ವಾದ ಪಡೆದಿದ್ದಾರೆ.
ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ (Sai Pallavi) ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಕಾಣಿಯೂರು ಮಠಕ್ಕೆ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮಿಗಳನ್ನು ಭೇಟಿಯಾಗಿ ಚರ್ಚಿಸಿ ಆಶೀರ್ವಾದವನ್ನೂ ಸಹ ಪಡೆದಿದ್ದಾರೆ. ಸಾಯಿ ಪಲ್ಲವಿ ತಮ್ಮ ತಾಯಿಯೊಟ್ಟಿಗೆ ಮಠಕ್ಕೆ ಭೇಟಿ ನೀಡಿದ್ದರು. ಅಸಲಿಗೆ ಸಾಯಿ ಪಲ್ಲವಿ, ತೆಲುಗಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾಕ್ಕೆ ಅಕ್ಕಿನೇನಿ ನಾಗಾರ್ಜುನ ನಾಯಕ. ಸಿನಿಮಾದ ಚಿತ್ರೀಕರಣ ಉಡುಪಿಯ ಕಡಲ ತೀರದಲ್ಲಿ ನಡೆಯುತ್ತಿದೆ. ಶೂಟಿಂಗ್ನ ಬಿಡುವಿನ ವೇಳೆ ಸಾಯಿ ಪಲ್ಲವಿ ಅವರು ಮಠಕ್ಕೆ ಭೇಟಿ ನೀಡಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 22, 2023 09:46 PM
Latest Videos