ಉಡುಪಿಗೆ ಬಂದು ಶ್ರೀಕೃಷ್ಣನ ದರ್ಶನ ಪಡೆದ ನಟಿ ಸಾಯಿ ಪಲ್ಲವಿ

Edited By:

Updated on: Dec 22, 2023 | 10:57 PM

Sai Pallavi: ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಕಾಣಿಯೂರು ಮಠಕ್ಕೆ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮಿಗಳನ್ನು ಭೇಟಿಯಾಗಿ ಚರ್ಚಿಸಿ ಆಶೀರ್ವಾದ ಪಡೆದಿದ್ದಾರೆ.

ದಕ್ಷಿಣ ಭಾರತದ ಜನಪ್ರಿಯ ನಟಿ ಸಾಯಿ ಪಲ್ಲವಿ (Sai Pallavi) ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಈ ವೇಳೆ ಕಾಣಿಯೂರು ಮಠಕ್ಕೆ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮಿಗಳನ್ನು ಭೇಟಿಯಾಗಿ ಚರ್ಚಿಸಿ ಆಶೀರ್ವಾದವನ್ನೂ ಸಹ ಪಡೆದಿದ್ದಾರೆ. ಸಾಯಿ ಪಲ್ಲವಿ ತಮ್ಮ ತಾಯಿಯೊಟ್ಟಿಗೆ ಮಠಕ್ಕೆ ಭೇಟಿ ನೀಡಿದ್ದರು. ಅಸಲಿಗೆ ಸಾಯಿ ಪಲ್ಲವಿ, ತೆಲುಗಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾಕ್ಕೆ ಅಕ್ಕಿನೇನಿ ನಾಗಾರ್ಜುನ ನಾಯಕ. ಸಿನಿಮಾದ ಚಿತ್ರೀಕರಣ ಉಡುಪಿಯ ಕಡಲ ತೀರದಲ್ಲಿ ನಡೆಯುತ್ತಿದೆ. ಶೂಟಿಂಗ್​ನ ಬಿಡುವಿನ ವೇಳೆ ಸಾಯಿ ಪಲ್ಲವಿ ಅವರು ಮಠಕ್ಕೆ ಭೇಟಿ ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 22, 2023 09:46 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More