‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ

ಸಾಯಿ ಪಲ್ಲವಿ ಅವರ ನಟನೆಯ ‘ಅಮರನ್’ ಚಿತ್ರವು ಇಂದು ಬಿಡುಗಡೆಯಾಗಿದೆ. ಮಣಿರತ್ನಂ ಅವರು ಸಾಯಿ ಪಲ್ಲವಿಯ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಅವರ ನೈಜ ನಟನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಜೊತೆ ಸಾಯಿ ಪಲ್ಲವಿ ನಟಿಸಿದ್ದಾರೆ. ಈ ಚಿತ್ರ ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಕಥೆಯನ್ನು ಆಧರಿಸಿದೆ.

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ವಿಶೇಷ ಮೆಚ್ಚುಗೆ
ಮಣಿರತ್ನಂ-ಸಾಯಿ ಪಲ್ಲವಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 31, 2024 | 7:46 AM

ನಟಿ ಸಾಯಿ ಪಲ್ಲವಿ ಅವರ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟನೆಯಲ್ಲಿ ಅವರನ್ನು ಮೀರೀಸೋರು ಯಾರೂ ಇಲ್ಲ ಎಂದರೂ ತಪ್ಪಾಗಲಾದರು. ಯಾವುದೇ ಗ್ಲಾಮರ್ ಪಾತ್ರಗಳನ್ನು ಮಾಡದೆ ಮೆಚ್ಚುಗೆ ಪಡೆದವರು ಅವರು. ಅವರ ನಟನೆಯ ‘ಅಮರನ್’ ಸಿನಿಮಾ ಇಂದು (ಅಕ್ಟೋಬರ್ 31) ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯ ಅವರ ಜೊತೆ ಸಾಯಿ ಪಲ್ಲವಿ ಜೊತೆಯಾಗಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರು ಅತಿಥಿಯಾಗಿ ಬಂದಿದ್ದರು. ಅವರು ಸಾಯಿ ಪಲ್ಲವಿಯನ್ನು ಹೊಗಳಿದ್ದಾರೆ.

‘ಸಾಯಿ ಪಲ್ಲವಿ ಅವರು ಮಾಡುವ ಪಾತ್ರಗಳು ನೈಜವಾಗಿ ಇರುತ್ತವೆ. ಈ ಸಿನಿಮಾದಲ್ಲಿ ಚೆನ್ನಾಗಿಯೇ ಮಾಡಿರುತ್ತಾರೆ ಎಂದು ನನಗೆ ಅನಿಸುತ್ತಿದೆ. ನಾನು ಅವರ ದೊಡ್ಡ ಅಭಿಮಾನಿ’ ಎಂದು ಮಣಿರತ್ನಂ ಅವರು ಹೇಳುತ್ತಿದ್ದಂತೆ ಸಾಯಿ ಪಲ್ಲವಿ ಅವರು ನಾಚಿ ನೀರಾದರು.

ಸಾಯಿ ಪಲ್ಲವಿ ಜೊತೆ ಕೆಲಸ ಮಾಡಬೇಕು ಎಂದು ಅನೇಕ ಯುವ ನಿರ್ದೇಶಕರು ಅಂದುಕೊಳ್ಳೋದು ಸಹಜ. ಪಲ್ಲವಿ ಕೇವಲ ಯುವ ನಿರ್ದೇಶಕರಿಗೆ ಮಾತ್ರವಲ್ಲ ಹಿರಿಯ ನಿರ್ದೇಶಕರ ಫೇವರಿಟ್ ಕೂಡ ಹೌದು ಅನ್ನೋದು ಸಾಬೀತಾಗಿದೆ. ‘ನಾನು ಮುಂದೊಂದು ದಿನ ನಿಮ್ಮ ಜೊತೆ ಕೆಲಸ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಸಾಯಿ ಪಲ್ಲವಿ ಅವರು ಮಣಿರತ್ನಂ ಅವರಿಂದ ಈ ರೀತಿಯ ಮಾತುಗಳನ್ನು ನಿರೀಕ್ಷಿಸಿರಲೇ ಇಲ್ಲ. ಹೀಗಾಗಿ ಅವರು ಕರಗಿ ನಾಚಿ ನೀರಾದರು. ಅವರು ಮಣಿರತ್ನಂ ಅವರ ಮಾತಿಗೆ ಧನ್ಯವಾದ ಹೇಳಿದರು. ‘ಅಮರನ್’ ಚಿತ್ರವು ಮೇಜರ್ ಮುಕುಂದ್ ವರದರಾಜನ್ ಅವರ ಜೀವನ ಆಧರಿಸಿದೆ. ಶಿವಕಾರ್ತಿಕೇಯ ಅವರು ಮುಕುಂದ್ ಪಾತ್ರ ಮಾಡಿದ್ದಾರೆ. ಸಾಯಿ ಪಲ್ಲವಿ ಅವರು ಮುಕುಂದ್ ಪತ್ನಿ ಇಂದು ರೆಬೆಕಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ರಾಜ್​ಕುಮಾರ್ ಪೆರಿಯಸ್ವಾಮಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಶಿವ ಅರೂರ್ ಹಾಗೂ ರಾಹುಲ್ ಸಿಂಘ ಬರೆದ ಪುಸ್ತಕವನ್ನು ಆಧರಿಸಿದೆ.

ಇದನ್ನೂ ಓದಿ: 33 ವರ್ಷಗಳ ಬಳಿಕ ಮಣಿರತ್ನಂ ಸಿನಿಮಾದಲ್ಲಿ ನಟಿಸಲಿರುವ ರಜನೀಕಾಂತ್

ಮಣಿರತ್ನಂ ಅವರು ಸದ್ಯ ‘ಥಗ್​ ಲೈಫ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಹೀರೋ. ಮಣಿರತ್ನಂ ಸಿನಿಮಾಗಳ ಬಗ್ಗೆ ಅವರ ಕೆಲಸಗಳ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಸಿನಿಮಾಗಳಲ್ಲಿ ಅದ್ದೂರಿತನ ಹೆಚ್ಚೇ ಇರುತ್ತದೆ. ಅವರು ಓಪನ್ ಆಗಿ ಒಂದು ಕಲಾವಿದರನ್ನು ಹೊಗಳಿದ್ದೂ ಕಡಿಮೆಯೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ
ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ
ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ
ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ
ದರ್ಶನ್ ಜಾಮೀನು ಪಡೆದ ಬಳಿಕ ಬಳ್ಳಾರಿ ದುರ್ಗಾದೇವಿಗೆ ವಿಜಯಲಕ್ಷ್ಮಿ ಪೂಜೆ
ದರ್ಶನ್ ಜಾಮೀನು ಪಡೆದ ಬಳಿಕ ಬಳ್ಳಾರಿ ದುರ್ಗಾದೇವಿಗೆ ವಿಜಯಲಕ್ಷ್ಮಿ ಪೂಜೆ
ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್​
ಬೆಂಗಳೂರು ನಗರದ ಹಲವೆಡೆ ಮತ್ತೆ ಧಾರಾಕಾರ ಮಳೆ, ಟ್ರಾಫಿಕ್​ ಜಾಮ್​
ಜೈಲು ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡಿಂಗ್ ಮಾಡಿದ ಪೊಲೀಸ್
ಜೈಲು ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡಿಂಗ್ ಮಾಡಿದ ಪೊಲೀಸ್
ದರ್ಶನ್ ಮಿತ್ರನಾದರೂ ಜಾಮೀನು ಸಿಕ್ಕಿರುವುದಕ್ಕೆ ಪ್ರತಿಕ್ರಿಯಿಸಲೊಲ್ಲದ ಜಮೀರ್
ದರ್ಶನ್ ಮಿತ್ರನಾದರೂ ಜಾಮೀನು ಸಿಕ್ಕಿರುವುದಕ್ಕೆ ಪ್ರತಿಕ್ರಿಯಿಸಲೊಲ್ಲದ ಜಮೀರ್