AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ಎದುರು ವಿಲನ್ ಆಗ್ತಾರಾ ಸೈಫ್ ಅಲಿ ಖಾನ್, ಕರೀನಾ ದಂಪತಿ?

ಬಾಲಿವುಡ್​ನ ಅನೇಕ ಕಲಾವಿದರು ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗಾ ಮತ್ತು ಪ್ರಭಾಸ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಹಿಂದಿ ಚಿತ್ರರಂಗದ ನಟ-ನಟಿಯರು ಇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ದಂಪತಿ ಬಗ್ಗೆ ಈ ಗಾಸಿಪ್​ ಹರಡಿದೆ.

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ಎದುರು ವಿಲನ್ ಆಗ್ತಾರಾ ಸೈಫ್ ಅಲಿ ಖಾನ್, ಕರೀನಾ ದಂಪತಿ?
ಪ್ರಭಾಸ್​, ಸೈಫ್​ ಅಲಿ ಖಾನ್​, ಕರೀನಾ ಕಪೂರ್​
ಮದನ್​ ಕುಮಾರ್​
|

Updated on: Sep 26, 2024 | 5:12 PM

Share

2023ರಲ್ಲಿ ‘ಅನಿಮಲ್​’ ಸಿನಿಮಾದಿಂದ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಸೆನ್ಸೇಷನ್​ ಸೃಷ್ಟಿ ಮಾಡಿದ್ದರು. ವಿಮರ್ಶಕರಿಂದ ಸಿಕ್ಕಾಪಟ್ಟೆ ಟೀಕೆ ಎದುರಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಆ ಚಿತ್ರ ಅಬ್ಬರಿಸಿತು. ಅದಕ್ಕೂ ಮುನ್ನ ಅವರು ‘ಕಬೀರ್ ಸಿಂಗ್​’ ಮತ್ತು ‘ಅರ್ಜುನ್​ ರೆಡ್ಡಿ’ ಸಿನಿಮಾಗಳಿಂದ ಯಶಸ್ಸು ಕಂಡಿದ್ದರು. ‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಇರುವ ಬೇಡಿಕೆ ಡಬಲ್ ಆಯಿತು. ಈಗ ಅವರು ಪ್ರಭಾಸ್​ ಜೊತೆ ‘ಸ್ಪಿರಿಟ್​’ ಸಿನಿಮಾ ಮಾಡಲು ತಯಾರಿ ನಡೆಸಿದ್ದು, ಈ ಚಿತ್ರದ ಪಾತ್ರವರ್ಗದ ಬಗ್ಗೆ ಎಗ್ಸೈಟಿಂಗ್ ಮಾಹಿತಿ ಹರಿದಾಡುತ್ತಿದೆ.

ಸಂದೀಪ್ ರೆಡ್ಡಿ ವಂಗಾ ಅವರು ಪ್ಯಾನ್​ ಇಂಡಿಯಾ ಡೈರೆಕ್ಟರ್​ ಆಗಿದ್ದಾರೆ. ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರಿಗೆ ಖ್ಯಾತಿ ಸಿಕ್ಕಿದೆ. ಇತ್ತ, ಪ್ರಭಾಸ್​ ಕೂಡ ಪ್ಯಾನ್​ ಇಂಡಿಯಾ ಸ್ಟಾರ್​. ಪ್ರಭಾಸ್​ ಮತ್ತು ಸಂದೀಪ್​ ರೆಡ್ಡಿ ವಂಗಾ ಅವರು ಕೈ ಜೋಡಿಸಲಿರುವ ‘ಸ್ಪಿರಿಟ್​’ ಸಿನಿಮಾದ ಪಾತ್ರವರ್ಗದಲ್ಲಿ ಬಾಲಿವುಡ್​ ನಟ-ನಟಿಯರು ಅಭಿನಯಿಸುತ್ತಾರೆ ಎನ್ನಲಾಗಿದೆ. ಕೆಲವರ ಹೆಸರುಗಳು ಕೂಡ ಕೇಳಿಬರುತ್ತಿವೆ.

ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಈ ದಂಪತಿ ‘ಸ್ಪಿರಿಟ್​’ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರಿಬ್ಬರು ಪ್ರಭಾಸ್​ ಎದುರು ವಿಲನ್​ಗಳಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಈವರೆಗೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಗಾಸಿಪ್​ ಎಲ್ಲ ಕಡೆ ಹಬ್ಬಿದೆ.

ಇದನ್ನೂ ಓದಿ: ಗಣಪತಿ ಮೂರ್ತಿಗೆ ನಮಸ್ಕರಿಸಿದ ಕರೀನಾ ಮಕ್ಕಳು ತೈಮೂರ್​, ಜೇಹ್ ಅಲಿ ಖಾನ್​

ಕರೀನಾ ಕಪೂರ್​ ಅವರು ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಸಂಭಾವನೆ ವಿಚಾರದಲ್ಲಿ ಒಪ್ಪಿಗೆ ಆಗದ ಕಾರಣ ಅವರು ಆ ಚಿತ್ರಕ್ಕೆ ಸಹಿ ಮಾಡಲಿಲ್ಲ ಎಂಬ ಮಾತಿದೆ. ಈಗ ಕರೀನಾ ಕಪೂರ್​ ಹೆಸರು ‘ಸ್ಪಿರಿಟ್​’ ಜೊತೆ ತಳುಕು ಹಾಕಿಕೊಂಡಿದೆ. ಸೈಫ್​ ಅಲಿ ಖಾನ್​ ಅವರಿಗೆ ನೆಗೆಟಿವ್​ ಶೇಡ್​ ಇರುವ ಪಾತ್ರಗಳು ಹೊಸದೇನೂ ಅಲ್ಲ. ಈ ಮೊದಲ ಅವರು ಪ್ರಭಾಸ್​ ನಟನೆಯ ‘ಆದಿಪುರುಷ್’ ಸಿನಿಮಾದಲ್ಲಿ ರಾವಣನ ಪಾತ್ರವನ್ನು ಮಾಡಿದ್ದರು. ಈಗ ಮತ್ತೆ ಪ್ರಭಾಸ್​ ಎದುರು ‘ಸ್ಪಿರಿಟ್’ ಸಿನಿಮಾದಲ್ಲಿ ವಿಲನ್​ ಆಗಿ ನಟಿಸಿದರೆ ಅಚ್ಚರಿ ಏನಿಲ್ಲ. ಆದರೆ ಕರೀನಾ ಅವರು ಈ ರೀತಿಯ ಪಾತ್ರ ಒಪ್ಪಿಕೊಳ್ಳುತ್ತಾರೋ ಎಲ್ಲವೋ ಎಂಬುದೇ ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್