Saif Ali Khan: ‘ಆದಿಪುರುಷ್​’ ಪ್ರಮೋಷನ್​ನಿಂದ ದೂರ ಉಳಿಯಲಿದ್ದಾರೆ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಇದಕ್ಕೆ ತಕ್ಕಂತೆ ಸೈಫ್ ಅಲಿ ಖಾನ್ ಅವರು ಪ್ರಮೋಷನ್​ಗೆ ಡೇಟ್ಸ್ ನೀಡಿದ್ದರು.

Saif Ali Khan: ‘ಆದಿಪುರುಷ್​’ ಪ್ರಮೋಷನ್​ನಿಂದ ದೂರ ಉಳಿಯಲಿದ್ದಾರೆ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Apr 27, 2023 | 7:08 AM

‘ಆದಿಪುರುಷ್’ ಸಿನಿಮಾ ಸಾಕಷ್ಟು ಚರ್ಚೆಯಲ್ಲಿದೆ. ಈ ಚಿತ್ರದ ಬಗ್ಗೆ ಹುಟ್ಟಿಕೊಂಡ ಟ್ರೋಲ್​​​ಗಳು ಒಂದೆರಡಲ್ಲ. ಈ ಬೆಳವಣಿಗೆ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ. ಆದರೆ, ನೂರಾರು ಕೋಟಿ ರೂಪಾಯಿ ಹಾಕಿ ಸಿನಿಮಾ ಮಾಡಿದ ಮೇಲೆ ಅದನ್ನು ರಿಲೀಸ್ ಮಾಡಲೇಬೇಕು. ಸದ್ಯ, ‘ಆದಿಪುರುಷ್’ (Adipurush) ತಂಡ ಪೋಸ್ಟ್ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿದೆ. ಮೇ ತಿಂಗಳಿಂದ ಸಿನಿಮಾಗೆ ಭರ್ಜರಿ ಪ್ರಮೋಷನ್ ನೀಡಲು ನಿರ್ದೇಶಕ ಓಂ ರಾವತ್​ ಪ್ಲ್ಯಾನ್ ರೂಪಿಸಿದ್ದಾರೆ. ಪ್ರಭಾಸ್ (Prabhas) ಕೂಡ ಪ್ರಮೋಷನ್​​ಗೆ ಡೇಟ್ ನೀಡಿದ್ದಾರೆ. ಆದರೆ, ಸೈಫ್ ಅಲಿ ಖಾನ್ ಅವರು ಈ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿಲ್ಲ ಎಂದು ವರದಿ ಆಗಿದೆ.

ಕಳೆದ ವರ್ಷ ನವರಾತ್ರಿ ಸಂದರ್ಭದಲ್ಲಿ ‘ಆದಿಪುರುಷ್’ ಟೀಸರ್ ರಿಲೀಸ್ ಆಯಿತು. ಟೀಸರ್ ನೋಡಿದ ಅನೇಕರು ಟೀಕೆ ಮಾಡಿದರು. ಅದರಲ್ಲೂ ರಾವಣನ ಪಾತ್ರದ ಬಗ್ಗೆ ಕಟುವಾಗಿ ಟೀಕೆ ಮಾಡಲಾಯಿತು. ಒಂದಷ್ಟು ಮಂದಿ ರಾವಣನ ಪಾತ್ರ ಇಷ್ಟ ಆಗದೇ ಟೀಕೆ ಮಾಡಿದರೆ ಮತ್ತೊಂದಷ್ಟು ಮಂದಿ ಈ ಪಾತ್ರವನ್ನು ಸೈಫ್ ಅಲಿ ಖಾನ್ ಮಾಡಿದ್ದಾರೆ ಎಂದು ಟೀಕಿಸಿದರು. ಈ ಬೆಳವಣಿಗೆ ಚಿತ್ರತಂಡಕ್ಕೆ ಬೇಸರ ತಂದಿತ್ತು. ಈ ಕಾರಣಕ್ಕೆ ಗ್ರಾಫಿಕ್ಸ್​ನಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳಲು ನಿರ್ಧರಿಸಿದ ನಿರ್ದೇಶಕರು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಇದಕ್ಕೆ ತಕ್ಕಂತೆ ಸೈಫ್ ಅಲಿ ಖಾನ್ ಅವರು ಪ್ರಮೋಷನ್​ಗೆ ಡೇಟ್ಸ್ ನೀಡಿದ್ದರು. ಆದರೆ, ಸಿನಿಮಾ ರಿಲೀಸ್ ದಿನಾಂಕ ಜೂನ್​16ಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ಮೇ ಹಾಗೂ ಜೂನ್ ತಿಂಗಳ ಆರಂಭದಲ್ಲಿ ಸಿನಿಮಾಗೆ ಪ್ರಮೋಷನ್ ಮಾಡಬೇಕಿದೆ. ಆದರೆ, ಈ ಸಂದರ್ಭದಲ್ಲಿ ಸೈಫ್ ಅಲಿ ಖಾನ್ ಭಾರತದಲ್ಲಿ ಇರುವುದಿಲ್ಲ ಎನ್ನಲಾಗಿದೆ.

ಸೆಲೆಬ್ರಿಟಿಗಳು ಬೇಸಿಗೆಯಲ್ಲಿ ವೆಕೇಶನ್ ತೆರಳುತ್ತಾರೆ. ಸೈಫ್ ಅಲಿ ಖಾನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ, ಈ ಬೇಸಿಗೆಯಲ್ಲಿ ಪತ್ನಿ-ಮಕ್ಕಳ ಜೊತೆ ವಿದೇಶಕ್ಕೆ ಹಾರಲಿದ್ದಾರೆ. ಹೀಗಾಗಿ, ಅವರು ಪ್ರಮೋಷನ್​ನಲ್ಲಿ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ:  ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

ಆದಿಪುರುಷ್ ಸಿನಿಮಾ ರಾಮಾಯಣ ಆಧರಿಸಿ ಸಿದ್ಧಗೊಂಡಿದೆ. ಸಂಪೂರ್ಣ ರಾಮಾಯಣವನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆಯೇ ಎನ್ನುವ ಪ್ರಶ್ನೆಯೂ ಇದೆ. ಓಂ ರಾವತ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಂಡರೆ, ಕೃತಿ ಸನೋನ್ ಸೀತೆಯ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ