‘ಸಿದ್ದಾರ್ಥ್​ಗೆ ದೇವರು ಒಳ್ಳೆಯದು ಮಾಡಲಿ’; ಕ್ಷಮೆ ಬಳಿಕ ಪ್ರತಿಕ್ರಿಯಿಸಿದ ಸೈನಾ ನೆಹ್ವಾಲ್​​

ಸುದ್ದಿ ಸಂಸ್ಥೆಯೊಂದರ ಜೊತೆ ಸೈನಾ ನೆಹ್ವಾಲ್​ ಮಾತನಾಡಿದ್ದಾರೆ. ಈ ವೇಳೆ ಅವರು ನಟ ಸಿದ್ದಾರ್ಥ್​ ಅವರ ಟ್ವಿಟರ್​ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಸಿದ್ದಾರ್ಥ್​ಗೆ ದೇವರು ಒಳ್ಳೆಯದು ಮಾಡಲಿ’; ಕ್ಷಮೆ ಬಳಿಕ ಪ್ರತಿಕ್ರಿಯಿಸಿದ ಸೈನಾ ನೆಹ್ವಾಲ್​​
ಸಿದ್ದಾರ್ಥ್, ಸೈನಾ ನೆಹ್ವಾಲ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 12, 2022 | 12:52 PM

ಬ್ಯಾಡ್ಮಿಂಟನ್​​ ಆಟಗಾರ್ತಿ ಸೈನಾ ನೆಹ್ವಾಲ್​ (Saina Nehwal) ಅವರ ಟ್ವೀಟ್​ ಕುರಿತು ಎದ್ದಿದ್ದ ವಿವಾದಕ್ಕೆ (Siddharth Controversy) ಈಗ ಅಂತ್ಯ ಸಿಕ್ಕಿದೆ. ಸೈನಾ ನೆಹ್ವಾಲ್​ ಬಗ್ಗೆ ನಟ ಸಿದ್ದಾರ್ಥ್ (Actor Siddharth)​ ಅವರು ಅವಹೇಳನಕಾರಿಯಾಗಿ ಟ್ವೀಟ್​ ಮಾಡಿದ್ದರು. ಅವರ ವಿರುದ್ಧ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಮಹಿಳಾ ಆಯೋಗ ಕೂಡ ಮಧ್ಯ ಪ್ರವೇಶಿಸಿತ್ತು. ಆ ಬಳಿಕ ಸಿದ್ದಾರ್ಥ್​ ಕ್ಷಮೆ ಕೇಳಿದರು. ಒಟ್ಟಾರೆ ಬೆಳವಣಿಗೆಗಳ ಬಗ್ಗೆ ಈಗ ಸೈನಾ ನೆಹ್ವಾಲ್​ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದಾರ್ಥ್​ ಅವರ ಕ್ಷಮಾಪಣೆಯನ್ನು ಸೈನಾ ಸ್ವೀಕರಿಸಿದ್ದಾರೆ. ‘ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಅವರು ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದರ ಜೊತೆ ಸೈನಾ ನೆಹ್ವಾಲ್​ ಮಾತನಾಡಿದ್ದಾರೆ. ಈ ವೇಳೆ ಅವರು ನಟ ಸಿದ್ದಾರ್ಥ್​ ಅವರ ಟ್ವಿಟರ್​ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇದನ್ನೆಲ್ಲ ಅವರೇ ಹೇಳಿದ್ದು. ಈಗ ಅವರೇ ಕ್ಷಮೆ ಕೇಳಿದ್ದಾರೆ. ಅಂದು ನಾನು ಟ್ವಿಟರ್​ನಲ್ಲಿ ಟ್ರೆಂಡ್​ ಆಗುತ್ತಿರುವುದು ನೋಡಿ ನನಗೆ ಅಚ್ಚರಿ ಆಗಿತ್ತು. ನಾನು ಸಿದ್ದಾರ್ಥ್​ ಬಳಿ ಮಾತನಾಡಿಲ್ಲ. ಈಗ ಅವರು ಕ್ಷಮೆ ಕೇಳಿರುವುದಕ್ಕೆ ಖುಷಿ ಆಗಿದೆ’ ಎಂದು ಸೈನಾ ನೆಹ್ವಾಲ್​ ಹೇಳಿದ್ದಾರೆ.

‘ಇದು ಮಹಿಳೆಯರ ಘನತೆಗೆ ಸಂಬಂಧಿಸಿದ ವಿಚಾರ. ಓರ್ವ ಮಹಿಳೆಯನ್ನು ಅವರು ಈ ರೀತಿ ಟಾರ್ಗೆಟ್​​ ಮಾಡಬಾರದು. ಆದರೆ ಇಂಥ ವಿಚಾರಗಳಿಂದ ನಾನು ವಿಚಲಿತ ಆಗಿಲ್ಲ. ನನ್ನ ಕ್ಷೇತ್ರದಲ್ಲಿ ನಾನು ಖುಷಿಯಾಗಿದ್ದೇನೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಸೈನಾ ನೆಹ್ವಾಲ್​ ಹೇಳಿದ್ದಾರೆ.

ಬಹಿರಂಗ ಪತ್ರದ ಮೂಲಕ ಕ್ಷಮೆ ಕೇಳಿದ ಸಿದ್ದಾರ್ಥ್​:

‘ಡಿಯರ್​ ಸೈನಾ.. ಕೆಲವೇ ದಿನಗಳ ಹಿಂದೆ ನಿಮ್ಮ ಟ್ವೀಟ್​ಗೆ ಪ್ರತಿಯಾಗಿ ನಾನು ಕೆಟ್ಟ ಜೋಕ್​ ಮಾಡಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ. ನಿಮ್ಮ ಹಲವು ವಿಚಾರಗಳನ್ನು ನಾನು ವಿರೋಧಿಸಬಹುದು. ಆದರೆ ನನ್ನ ವಿರೋಧ ಮತ್ತು ಸಿಟ್ಟು ಕೂಡ ನಾನು ಬಳಸಿದ ಪದಗಳು ಹಾಗೂ ಧಾಟಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ಜೋಕ್​ ಅನ್ನು ವಿವರಿಸಬೇಕಾದ ಸಂದರ್ಭ ಬರುತ್ತದೆ ಎಂದಾದರೆ ಅದು ಒಳ್ಳೆಯ ಜೋಕ್​ ಅಲ್ಲ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಸಿದ್ದಾರ್ಥ್ ಅವರು ಜ.11ರ ತಡರಾತ್ರಿ​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

Saina Nehwal: ‘ನನ್ನ ಮಗಳು ದೇಶಕ್ಕಾಗಿ ಪದಕ ಗೆದ್ದಿದ್ದಾಳೆ; ನೀವೇನು ಮಾಡಿದ್ದೀರಿ?’ ನಟ ಸಿದ್ಧಾರ್ಥ್​ಗೆ ಸೈನಾ ತಂದೆಯ ನೇರ ಪ್ರಶ್ನೆ

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ