‘ಸಲಾರ್ 2’ ನಿಂತು ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ನಡುವೆ ಭಿನ್ನಾಭಿಪ್ರಾಯ ಬಂದ ಕಾರಣದಿಂದಾಗಿ ‘ಸಲಾರ್ 2’ ಸಿನಿಮಾ ರದ್ದಾಗಿದೆ. ಆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುತ್ತಿಲ್ಲ ಎಂಬ ಸುದ್ದಿ ಹರಿದಾಡಿದ್ದು, ಸುದ್ದ ಬಗ್ಗೆ ಹೊಂಬಾಳೆ ಪ್ರತಿಕ್ರಿಯಿಸಿದೆ.

‘ಸಲಾರ್ 2’ ನಿಂತು ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ
Follow us
ಮಂಜುನಾಥ ಸಿ.
|

Updated on: May 26, 2024 | 4:21 PM

ಕಳೆದ ವರ್ಷಾಂತ್ಯಕ್ಕೆ ಬಿಡುಗಡೆ ಆಗಿದ್ದ ಪ್ರಭಾಸ್ ನಟನೆಯ ‘ಸಲಾರ್’ (Salaar) ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಭಾಸ್ ಜೊತೆ ಪೃಥ್ವಿರಾಜ್ ಸುಕುಮಾರನ್ ಸಹ ನಟಿಸಿದ್ದು, ಹಲವು ಸೆಲೆಬ್ರಿಟಿಗಳು ನಟಿಸಿರುವ ಈ ಸಿನಿಮಾ ದೊಡ್ಡ ಹಿಟ್ ಆಗಿದೆ. ಈ ಸಿನಿಮಾದ ಎರಡನೇ ಭಾಗ ಶೀಘ್ರವೇ ಬರಲಿದೆ ಎಂದು ಪ್ರಶಾಂತ್ ನೀಲ್ ಹೇಳಿದ್ದರು. ಆದರೆ ಇತ್ತೀಚೆಗೆ ಈ ಬಗ್ಗೆ ಕೆಲವು ಸುದ್ದಿಗಳು ಹರಿದಾಡಿದ್ದು ‘ಸಲಾರ್ 2’ ನಿಂತು ಹೋಗಿದೆ ಎನ್ನಲಾಗಿತ್ತು. ಆದರೆ ಈ ಸುದ್ದಿಗೆ ಈಗ ಹೊಂಬಾಳೆಯವರೇ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ.

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ಕಾರಣ ‘ಸಲಾರ್ 2’ ಸಿನಿಮಾ ನಿಂತು ಹೋಗಿದೆ. ‘ಸಲಾರ್ 2’ ಸಿನಿಮಾದ ಚಿತ್ರೀಕರಣ ರದ್ದಾಗಿದೆ. ಹೊಂಬಾಳೆ ಸಹ ಈ ಸಿನಿಮಾದಿಂದ ಹಿಂದೆ ಸರಿದಿದೆ ಎನ್ನುವ ಮಾತುಗಳು ತುಸು ಜೋರಾಗಿ ಕೇಳಿ ಬಂದಿತ್ತು. ಆದರೆ ಇದಕ್ಕೆಲ್ಲ ಕೇವಲ ಒಂದು ಫೋಟೊ, ಒಂದು ಲೈನ್​ನಲ್ಲಿ ಉತ್ತರ ನೀಡಿದೆ ಹೊಂಬಾಳೆ.

‘ಸಲಾರ್’ ಸಿನಿಮಾದ ಚಿತ್ರೀಕರಣ ಸಮಯದಲ್ಲಿ ‘ಸಲಾರ್’ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಮಾಡಲಾಗಿತ್ತು. ಅದೇ ಖಾತೆಯಲ್ಲಿ ಈಗ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಒಟ್ಟಿಗೆ ಜೋರಾಗಿ ನಗುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು, ‘ಅವರಿಗೆ ನಗು ನಿಯಂತ್ರಿಸಿಕೊಳ್ಳಲೇ ಸಾಧ್ಯವಾಗುತ್ತಿಲ್ಲ’ ಎಂದು ಬರೆಯಲಾಗಿದೆ. ಅಂದರೆ ಈ ಸುದ್ದಿ ಕೇಳಿ ಅವರಿಗೆ ನಗು ತಡೆಯಲಾಗುತ್ತಿಲ್ಲ ಎಂಬರ್ಥದಲ್ಲಿ ಚಿತ್ರ ಹಾಗೂ ಸಾಲನ್ನು ಬಳಲಾಗಿದೆ. ಆ ಮೂಲಕ ‘ಸಲಾರ್ 2’ ನಿಂತು ಹೋಗಿದೆ ಎಂಬ ಸುದ್ದಿ ಸುಳ್ಳು ಎಂಬುದನ್ನು ಪರೋಕ್ಷವಾಗಿ ಖಾತ್ರಿ ಪಡಿಸಿದೆ.

ಇದನ್ನೂ ಓದಿ:ಯಾವಾಗ ಶುರು ಆಗಲಿದೆ ‘ಸಲಾರ್​ 2’ ಶೂಟಿಂಗ್​? ಪ್ರಭಾಸ್​ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ

‘ಸಲಾರ್’ ಸಿನಿಮಾ 2023 ರ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾನಲ್ಲಿ ಪ್ರಭಾಸ್, ಪೃಥ್ವಿರಾಜ್, ಜಗಪತಿ ಬಾಬು, ಶ್ರುತಿ ಹಾಸನ್, ಬಾಬಿ ಸಿಂಹ, ಟೀನು ಆನಂದ್, ಬ್ರಹ್ಮಾಜಿ ಇನ್ನೂ ಹಲವಾರು ಮಂದಿ ಸೆಲೆಬ್ರಿಟಿಗಳು ಒಟ್ಟಿಗೆ ನಟಿಸಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಇಬ್ಬರು ಗೆಳೆಯರ ಕತೆ ಇದಾಗಿದ್ದು, ಮೊದಲ ಭಾಗ ಮುಗಿವ ವೇಳೆಗೆ ಆ ಇಬ್ಬರು ಗೆಳೆಯರೇ ಪರಸ್ಪರ ಎದುರಾಳಿಗಳಾಗುವ ಮುನ್ಸೂಚನೆ ದೊರೆತಿದೆ. ಎರಡನೇ ಭಾಗ ಯಾವಾಗ ಬಿಡುಗಡೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಶಾಂತ್ ನೀಲ್, ಜೂ ಎನ್​ಟಿಆರ್ ಗಾಗಿ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸಲು ರೆಡಿಯಾಗುತ್ತಿದ್ದಾರೆ. ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶನಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಹಾಗಾಗಿ ‘ಡ್ರ್ಯಾಗನ್’ ಸಿನಿಮಾ ಮುಗಿಸಲು ಸುಮಾರು ಎರಡು ವರ್ಷವಾದರೂ ಸಮಯ ಬೇಕು ಅವರಿಗೆ. ಅದಾದ ಮೇಲಷ್ಟೆ ‘ಸಲಾರ್ 2’ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ‘‘

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ