AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Hassan: ಫೋಟೋಶೂಟ್​ಗಾಗಿ ಟಾಪ್​ಲೆಸ್​ ಆದ ಶ್ರುತಿ ಹಾಸನ್

ಸಿನಿಮಾಗಳಲ್ಲಿ ಪ್ರೇಕ್ಷಕರನ್ನು ಸೆಳೆಯುವುದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾಗಳಲ್ಲಿ ಹಿಂಬಾಲಕರಿಗಾಗಿ ಏನಾದರೂ ಒಂದನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ.

Shruti Hassan: ಫೋಟೋಶೂಟ್​ಗಾಗಿ ಟಾಪ್​ಲೆಸ್​ ಆದ ಶ್ರುತಿ ಹಾಸನ್
ಶ್ರುತಿ ಹಾಸನ್
TV9 Web
| Edited By: |

Updated on: Oct 07, 2021 | 4:04 PM

Share

ಕಮಲ್​ ಹಾಸನ್​ ಮಗಳಾದರೂ ಶ್ರುತಿ ಹಾಸನ್​ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಹೆಸರು ಮಾಡಿದ್ದಾರೆ. ತಂದೆ ಹೆಸರು ಹೇಳಿಕೊಂಡು ಅವರು ಎಲ್ಲಿಯೂ ಚಾನ್ಸ್​ ಗಿಟ್ಟಿಸಿಕೊಂಡಿಲ್ಲ. ನಟನೆ ಮೂಲಕ ತಮ್ಮ ತನವನ್ನು ತೋರಿಸಿದ್ದಾರೆ. ಅವರ ಕೈಯಲ್ಲಿ ‘ಸಲಾರ್​’ನಂತಹ ಬಿಗ್​ ಬಜೆಟ್​ ಚಿತ್ರಗಳಿವೆ. ಈಗ ಶ್ರುತಿ ಹಾಸನ್​ ಅವರು ಹೊಸ ಫೋಟೋಶೂಟ್​ ಮೂಲಕ ಸುದ್ದಿ ಆಗಿದ್ದಾರೆ.

ಸಿನಿಮಾಗಳಲ್ಲಿ ಪ್ರೇಕ್ಷಕರನ್ನು ಸೆಳೆಯುವುದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಸೋಶಿಯಲ್​ ಮೀಡಿಯಾಗಳಲ್ಲಿ ಹಿಂಬಾಲಕರಿಗಾಗಿ ಏನಾದರೂ ಒಂದನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಫೋಟೋಶೂಟ್​ ಮಾಡಿಸುತ್ತಾರೆ. ಕೆಲ ಫೋಟೋಗಳು ಸಾಕಷ್ಟು ಮೆಚ್ಚುಗೆ ಪಡೆದುಕೊಂಡರೆ, ಇನ್ನೂ ಕೆಲ ಫೋಟೋಗಳು ಟ್ರೋಲ್​ ಆದ ಉದಾಹರಣೆ ಇದೆ. ಈಗ ಶ್ರುತಿ ಹಾಸನ್ ಫೋಟೋಶೂಟ್​ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಬ್ಲಾಕ್​ ಆ್ಯಂಡ್​ ವೈಟ್​ ಫೋಟೋ ಹಾಕಿರುವ ಶ್ರುತಿ ಹಾಸನ್​, ಟಾಪ್​ಲೆಸ್​ ಆಗಿದ್ದಾರೆ. ‘ನನ್ನ ಹೆಸರನ್ನು ದೊಡ್ಡದಾಗಿ ಹೇಳಿ’ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್​ ಸೆಕ್ಷನ್​ನಲ್ಲಿ ಎಮೋಜಿಗಳ ಸುರಿಮಳೆಯನ್ನೇ ಹರಿಸಿದ್ದಾರೆ.

ಇತ್ತೀಚೆಗೆ ಅವರು ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಬಾಯ್​ಫ್ರೆಂಡ್​ ಜತೆ ವರ್ಕೌಟ್​ ಮಾಡುತ್ತಿರುವ ವಿಡಿಯೋ ಇದಾಗಿತ್ತು. ಈ ವಿಡಿಯೋ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದರು. ಶ್ರುತಿ ಹಾಸನ್​ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್​ ಅವರು ಈ ಬಗ್ಗೆ ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡುತ್ತಿರುತ್ತಾರೆ. ಅಲ್ಲದೆ ಬಾಯ್​ಫ್ರೆಂಡ್​ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್​ ಮಾಡುತ್ತಿರುತ್ತಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಲಬಾಮ್​’ ಸಿನಿಮಾದಲ್ಲಿ ವಿಜಯ್​ ಸೇತುಪತಿಗೆ ಜತೆಯಾಗಿ ಶ್ರುತಿ ನಟಿಸುತ್ತಿದ್ದಾರೆ. ಇದಲ್ಲದೆ, ‘ಸಲಾರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ತಡವಾಗಿವೆ.

ಇದನ್ನೂ ಓದಿ: ಸಾರ್ವಜನಿಕವಾಗಿಯೇ ಬಾಯ್​ಫ್ರೆಂಡ್​ಗೆ ಕಿಸ್​ ಮಾಡಿದ ಶ್ರುತಿ ಹಾಸನ್​; ವೈರಲ್​ ಆಯ್ತು ಫೋಟೋ

Salaar: ಪ್ರಶಾಂತ್ ನೀಲ್‌ರನ್ನು ಗೋಳು ಹೊಯ್ದುಕೊಂಡ ಶ್ರುತಿ ಹಾಸನ್; ಕಾರಣವೇನು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು