AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Neel Birthday: ಶೂಟಿಂಗ್​ ಸೆಟ್​ನಲ್ಲಿ ಹೇಗಿರ್ತಾರೆ ಗೊತ್ತಾ ಪ್ರಶಾಂತ್​ ನೀಲ್​? ವಿಶೇಷ ವಿಡಿಯೋ ಹಂಚಿಕೊಂಡ ‘ಸಲಾರ್​’ ಚಿತ್ರತಂಡ

​Salaar Movie Making Video: ಪ್ರಭಾಸ್​ ಅಭಿನಯದ ‘ಸಲಾರ್​’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದ್ದು, ಸ್ಟಾರ್​ ಡೈರೆಕ್ಟರ್​ ಬರ್ತ್​ಡೇ ಸಲುವಾಗಿ ಒಂದು ವಿಶೇಷ ವಿಡಿಯೋ ಹಂಚಿಕೊಳ್ಳಲಾಗಿದೆ.

Prashanth Neel Birthday: ಶೂಟಿಂಗ್​ ಸೆಟ್​ನಲ್ಲಿ ಹೇಗಿರ್ತಾರೆ ಗೊತ್ತಾ ಪ್ರಶಾಂತ್​ ನೀಲ್​? ವಿಶೇಷ ವಿಡಿಯೋ ಹಂಚಿಕೊಂಡ ‘ಸಲಾರ್​’ ಚಿತ್ರತಂಡ
ಪ್ರಶಾಂತ್​ ನೀಲ್​
ಮದನ್​ ಕುಮಾರ್​
|

Updated on:Jun 04, 2023 | 1:09 PM

Share

ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಅವರು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜೂನ್​ 4) ಅವರ ಜನ್ಮದಿನ. ಆ ಪ್ರಯುಕ್ತ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ. ಪ್ರಭಾಸ್​ ಅಭಿನಯದ ‘ಸಲಾರ್​’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ (​Hombale Films)​ ಸಂಸ್ಥೆ ಬಂಡವಾಳ ಹೂಡುತ್ತಿದ್ದು, ಸ್ಟಾರ್​ ಡೈರೆಕ್ಟರ್​ ಬರ್ತ್​ಡೇ ಸಲುವಾಗಿ ಒಂದು ವಿಶೇಷ ವಿಡಿಯೋ ಹಂಚಿಕೊಳ್ಳಲಾಗಿದೆ. ಶೂಟಿಂಗ್​​ ಸಂದರ್ಭದಲ್ಲಿ ಪ್ರಶಾಂತ್​ ನೀಲ್​ ಹೇಗೆ ಇರುತ್ತಾರೆ ಎಂಬುದಕ್ಕೆ ಈ ವಿಡಿಯೋದಲ್ಲಿ ಉತ್ತರ ಇದೆ. ಅವರ ಹುಟ್ಟುಹಬ್ಬದ ಪ್ರಯುಕ್ತ ‘ಸಲಾರ್​’ (​Salaar) ಚಿತ್ರತಂಡದಿಂದ ಟೀಸರ್​ ಬಿಡುಗಡೆ ಆಗಬಹುದು ಎಂದು ಕೆಲವರು ನಿರೀಕ್ಷಿಸಿದ್ದರು. ಆದರೆ ಅದು ನಿಜವಾಗಿಲ್ಲ. ಸದ್ಯ ಮೇಕಿಂಗ್​ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಳಿಕ ಪ್ರಶಾಂತ್​ ನೀಲ್​ ಅವರ ಖ್ಯಾತಿ ಹೆಚ್ಚಾಯಿತು. ಪ್ಯಾನ್​ ಇಂಡಿಯಾ ಡೈರೆಕ್ಟರ್​ ಆಗಿ ಅವರು ಗುರುತಿಸಿಕೊಂಡರು. ಹೊಂಬಾಳೆ ಫಿಲ್ಮ್ಸ್​ ಜೊತೆ ಅವರು ಮತ್ತೆ ಕೈ ಜೋಡಿಸಿದ್ದು, ‘ಸಲಾರ್​’ ಸಿನಿಮಾವನ್ನು ಅದ್ದೂರಿಯಾಗಿ ಕಟ್ಟಿಕೊಡುತ್ತಿದ್ದಾರೆ. ಪ್ರಶಾಂತ್​ ನೀಲ್​ ಅವರಿಗೆ ಸಿನಿಮಾ ಮೇಲೆ ಸಖತ್ ಪ್ಯಾಷನ್​ ಇದೆ. ಅವರು ಕೆಲಸ ಮಾಡುವ ರೀತಿಯೇ ಭಿನ್ನ. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಘಟಾನುಘಟಿ ಸ್ಟಾರ್​ ಕಲಾವಿದರು ಕೂಡ ಹಂಬಲಿಸುತ್ತಿದ್ದಾರೆ.

ಸಲಾರ್​ ಟೀಮ್​ ಜೊತೆ ಪ್ರಶಾಂತ್​ ನೀಲ್​ ಹುಟ್ಟುಹಬ್ಬ:

ಜೂನ್​ 3ರ ರಾತ್ರಿಯೇ ಸೆಲೆಬ್ರೇಷನ್​ ಶುರುವಾಗಿದೆ. ವಿಶೇಷ ಎಂದರೆ, ಈ ಬಾರಿ ಪ್ರಶಾಂತ್ ನೀಲ್​ ಅವರು ಪ್ಯಾನ್ ಇಂಡಿಯಾ ಸ್ಟಾರ್​ ಪ್ರಭಾಸ್​ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜೊತೆ ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಕೂಡ ಸಾಥ್​ ನೀಡಿದ್ದಾರೆ. ಎಲ್ಲರೂ ಒಟ್ಟಾಗಿ ಕೇಕ್​ ಕಟ್​ ಮಾಡುತ್ತಿರುವ ಫೋಟೋ ವೈರಲ್​ ಆಗಿದೆ. ‘ಸಲಾರ್​’ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಕೆಲಸದ ಮಧ್ಯೆ ಬ್ರೇಕ್​ ಪಡೆದು ಈ ಚಿತ್ರತಂಡದವರು ಪ್ರಶಾಂತ್​ ನೀಲ್​ ಅವರ ಬರ್ತ್​ಡೇ ಸೆಲೆಬ್ರೇಟ್​ ಮಾಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

‘ಕೆಜಿಎಫ್​’ ಸಿನಿಮಾ ಬಾಕ್ಲ್​ ಬಸ್ಟರ್​ ಹಿಟ್​ ಆಗುತ್ತಿದ್ದಂತೆಯೇ ಪ್ರಶಾಂತ್​ ನೀಲ್​ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರಲು ಆರಂಭ ಆಯಿತು. ಆ ಪೈಕಿ ಅವರು ಕೆಲವೇ ಪ್ರಾಜೆಕ್ಟ್​ಗಳಿಗೆ ಸಹಿ ಮಾಡಿದರು. ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಲಾರ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ನಟನೆಯ 31ನೇ ಸಿನಿಮಾಗೆ ಅವರು ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಡಿವಿವಿ ಎಂಟರ್​ಟೇನ್​ಮೆಂಟ್ಸ್​’ ಕೂಡ ಪ್ರಭಾಸ್​ಗೆ ವಿಶ್​ ಮಾಡಿದೆ. ಜೂನಿಯರ್​ ಎನ್​ಟಿಆರ್​ ಹಾಗೂ ಪ್ರಭಾಸ್​ ಫ್ಯಾನ್ಸ್​ ಪೇಜ್​ಗಳಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹರಿದುಬಂದಿದೆ. ತೆಲುಗು ಚಿತ್ರರಂಗದಲ್ಲಿ ಪ್ರಶಾಂತ್​ ನೀಲ್​ ಅವರಿಗೆ ಸಖತ್​ ಬೇಡಿಕೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Sun, 4 June 23

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?