AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಸಲಾರ್’ ಅಡ್ವಾನ್ಸ್ ಬುಕಿಂಗ್ ಬಗ್ಗೆ ಮಾಹಿತಿ ಕೊಟ್ಟ ಹೊಂಬಾಳೆ

‘ಸಲಾರ್’ಗೆ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ನೀಡಿದೆ. ಹೀಗಾಗಿ, ಚಿತ್ರದಲ್ಲಿ ಭರ್ಜರಿ ವೈಲೆನ್ಸ್ ಇದೆ ಅನ್ನೋದು ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಒಂದು ವಾರ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರುವಾಗಲಿದೆ.

ಕರ್ನಾಟಕದಲ್ಲಿ ‘ಸಲಾರ್’ ಅಡ್ವಾನ್ಸ್ ಬುಕಿಂಗ್ ಬಗ್ಗೆ ಮಾಹಿತಿ ಕೊಟ್ಟ ಹೊಂಬಾಳೆ
ಪ್ರಭಾಸ್​-ಪೃಥ್ವಿರಾಜ್
TV9 Web
| Edited By: |

Updated on: Dec 15, 2023 | 2:02 PM

Share

‘ಸಲಾರ್’ ಸಿನಿಮಾ (Salaar Movie) ರಿಲೀಸ್​ಗೆ ಇನ್ನು ಬಾಕಿ ಉಳಿದಿರುವುದು ಕೇವಲ ಒಂದು ವಾರ ಮಾತ್ರ. ಪ್ರಶಾಂತ್ ನೀಲ್ ನಿರ್ದೇಶನ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ. ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಸೇರಿ ದೊಡ್ಡ ಪಾತ್ರವರ್ಗ ಇದೆ. ತಾಂತ್ರಿಕ ವರ್ಗದಲ್ಲಿ ಕನ್ನಡದ ಅನೇಕರಿದ್ದಾರೆ. ಈ ಚಿತ್ರದ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಬಗ್ಗೆ ಮಾಹಿತಿ ನೀಡಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ (ಡಿಸೆಂಬರ್ 15) ಅಡ್ವಾನ್ಸ್ ಬುಕಿಂಗ್ ಶುರುವಾಗಲಿದೆ.

‘ಕೆಜಿಎಫ್ 2’ ಬಳಿಕ ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ‘ಸಲಾರ್’ಗೆ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ನೀಡಿದೆ. ಹೀಗಾಗಿ, ಚಿತ್ರದಲ್ಲಿ ಭರ್ಜರಿ ವೈಲೆನ್ಸ್ ಇದೆ ಅನ್ನೋದು ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಒಂದು ವಾರ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರುವಾಗಲಿದೆ.

ಕರ್ನಾಟಕದಲ್ಲಿ ‘ಸಲಾರ್’ ಚಿತ್ರದ ಅಡ್ವಾನ್ಸ್ ಬುಕಿಂಗ್ ಇಂದು ಸಂಜೆ 6:49ಕ್ಕೆ ಆರಂಭ ಆಗಲಿದೆ. ಕೆಲವೇ ಸ್ಕ್ರೀನ್​ಗಳಿಗೆ ಮಾತ್ರ ಬುಕಿಂಗ್ ಓಪನ್ ಆಗಲಿದೆ. ಮುಂದಿನ ದಿನಗಳಲ್ಲಿ ಪರದೆ ಹೆಚ್ಚಿಸಲು ನಿರ್ಧರಿಸಲಾಗಿದೆ. ‘ಸಲಾರ್’ ಚಿತ್ರಕ್ಕೆ ಮೊದಲ ದಿನ ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಶೋಗಳು ಸಿಗಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಸಲಾರ್​ನಲ್ಲಿ ಯಶ್ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’; ಬಾಯ್ತಪ್ಪಿ ಸತ್ಯ ಹೇಳಿದ್ರಾ ‘ಸಲಾರ್’ ಗಾಯಕಿ?

‘ಅನಿಮಲ್’ ಸಿನಿಮಾ ಇನ್ನೂ ಅಬ್ಬರಿಸುತ್ತಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಡಿಸೆಂಬರ್ 21ರಂದು ರಿಲೀಸ್ ಆಗಲಿದೆ. ಡಿಸೆಂಬರ್ 29ರಂದು ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆ ಆಗಲಿದೆ. ಈ ಕಾರಣಕ್ಕೆ ‘ಸಲಾರ್’ ಚಿತ್ರಕ್ಕೆ ಸ್ಪರ್ಧೆ ಜೋರಾಗಿಯೇ ಇದೆ. ಇವುಗಳ ಮಧ್ಯೆ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ