AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ‘ಸಲಾರ್ ಪಾರ್ಟ್​ 2’ ಬಗ್ಗೆ ಹಬ್ಬಿದೆ ದೊಡ್ಡ ಸುದ್ದಿ; ಎಗ್ಸೈಟ್ ಆದ ಅಭಿಮಾನಿಗಳು

ಈಗ ಕೇಳಿ ಬರುತ್ತಿರುವ ಕೆಲವು ವರದಿಗಳ ಪ್ರಕಾರ ‘ಸಲಾರ್’ ಎರಡನೇ ಭಾಗಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಈ ಮೊದಲು ಚಿತ್ರವನ್ನು ಒಂದೇ ಭಾಗದಲ್ಲಿ ತೆರೆಮೇಲೆ ತರಲು ತಂಡ ಪ್ಲಾನ್ ರೂಪಿಸಿತ್ತು. ಆದರೆ, ಈ ಕಥೆಯನ್ನು ಒಂದೇ ಪಾರ್ಟ್​ನಲ್ಲಿ ಹೇಳಲು ಸಾಧ್ಯವಿಲ್ಲ ಎನ್ನುವುದು ತಂಡಕ್ಕೆ ಅರಿವಾಗಿದೆ.

Salaar Movie: ‘ಸಲಾರ್ ಪಾರ್ಟ್​ 2’ ಬಗ್ಗೆ ಹಬ್ಬಿದೆ ದೊಡ್ಡ ಸುದ್ದಿ; ಎಗ್ಸೈಟ್ ಆದ ಅಭಿಮಾನಿಗಳು
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 03, 2023 | 5:54 PM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಇನ್ನು ಒಂದೂವರೆ ತಿಂಗಳಲ್ಲಿ ಸಿನಿಮಾ ವಿಶ್ವಾದ್ಯಂತ ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ದೊಡ್ಡ ಮಟ್ಟದಲ್ಲಿ ಹೊಂಬಾಳೆ ಫಿಲ್ಮ್ಸ್ (Hombale Films) ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಪ್ರಶಾಂತ್ ನೀಲ್ (Prashanth Neel) ಕಸುಬುದಾರಿಕೆ ಬಗ್ಗೆ ಜನರಿಗೆ ತಿಳಿದಿರುವುದರಿಂದ ‘ಸಲಾರ್’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಹೊಸ ಸುದ್ದಿಗಳು ಹರಿದಾಡುತ್ತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸಲಾರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಲು ಸಾಕಷ್ಟು ಕಾರಣಗಳು ಇವೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ಮಾಸ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ. ಪ್ರಶಾಂತ್ ನೀಲ್ ಅವರು ತಮ್ಮದೇ ಶೈಲಿಯಲ್ಲಿ ಈ ಚಿತ್ರವನ್ನು ಸಿದ್ಧಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗುತ್ತಿದೆ. ‘ಕೆಜಿಎಫ್​ 2’ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ‘ಸಲಾರ್’ ಚಿತ್ರಕ್ಕೂ ಕೆಲಸ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೊತೆಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ವ್ಯಯಿಸಲಿದ್ದಾರೆ ಪ್ರಭಾಸ್?

ಈಗ ಕೇಳಿ ಬರುತ್ತಿರುವ ಕೆಲವು ವರದಿಗಳ ಪ್ರಕಾರ ‘ಸಲಾರ್’ ಎರಡನೇ ಭಾಗಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಈ ಮೊದಲು ಚಿತ್ರವನ್ನು ಒಂದೇ ಭಾಗದಲ್ಲಿ ತೆರೆಮೇಲೆ ತರಲು ತಂಡ ಪ್ಲಾನ್ ರೂಪಿಸಿತ್ತು. ಆದರೆ, ಈ ಕಥೆಯನ್ನು ಒಂದೇ ಪಾರ್ಟ್​ನಲ್ಲಿ ಹೇಳಲು ಸಾಧ್ಯವಿಲ್ಲ ಎನ್ನುವುದು ತಂಡಕ್ಕೆ ಅರಿವಾಗಿದೆ. ಹೀಗಾಗಿ, ಎರಡು ಭಾಗದಲ್ಲಿ ಸಿನಿಮಾವನ್ನು ತೆರೆಮೇಲೆ ತರಲು ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲ್ಮ್ಸ್ ನಿರ್ಧರಿಸಿತು. ಶೂಟಿಂಗ್ ಪೂರ್ಣಗೊಂಡಿದ್ದು, 2024ರ ಏಪ್ರಿಲ್​ ತಿಂಗಳಲ್ಲಿ ಎರಡನೇ ಪಾರ್ಟ್ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ಇಟಲಿಯಲ್ಲಿ ಪ್ರಭಾಸ್ ಹೊಂದಿದ್ದಾರೆ ಐಷಾರಾಮಿ ವಿಲ್ಲಾ; ಇದರಿಂದ ಬರೋ ಆದಾಯಯ ಎಷ್ಟು?

ಡಿಸೆಂಬರ್ 22ರಂದು ವಿಶ್ವಾದ್ಯಂತ ‘ಸಲಾರ್’ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಕೊನೆಯಲ್ಲಿ ಎರಡನೇ ಪಾರ್ಟ್​ ರಿಲೀಸ್ ಡೇಟ್ ಬಗ್ಗೆ ತಂಡ ಮಾಹಿತಿ ನೀಡುವ ಸಾಧ್ಯತೆ ಇದೆ. ಸದ್ಯ ಈ ಎಲ್ಲಾ ವಿಚಾರಗಳು ಅಂತೆಕಂತೆ ರೂಪದಲ್ಲಿ ಇವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’ ಸಿನಿಮಾ ಈಗಾಗಲೇ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 22ಕ್ಕೆ ಮುಂದೂಡಲ್ಪಟ್ಟಿತು. ಅದೇ ದಿನ ಶಾರುಖ್ ಖಾನ್ ನಟನೆಯ, ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಎರಡೂ ಚಿತ್ರಗಳ ಮಧ್ಯೆ ದೊಡ್ಡ ಕ್ಲ್ಯಾಶ್ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!