‘ಸಲಾರ್​’ ಚಿತ್ರಕ್ಕೆ ಪ್ರಭಾಸ್​, ಪ್ರಶಾಂತ್​ ನೀಲ್​, ಶ್ರುತಿ ಹಾಸನ್​ ಪಡೆದ ಸಂಭಾವನೆ ಎಷ್ಟು?

|

Updated on: Dec 20, 2023 | 5:28 PM

ಪ್ರಭಾಸ್​, ಶ್ರುತಿ ಹಾಸನ್​, ಪೃಥ್ವಿರಾಜ್​ ಸುಕುಮಾರನ್​ ಅವರಂತಹ ಘಟಾನುಘಟಿ ಕಲಾವಿದರು ‘ಸಲಾರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಶಾಂತ್​ ನೀಲ್​ ಅವರ ನಿರ್ದೇಶನ ಎಂಬ ಕಾರಣಕ್ಕೆ ನಿರೀಕ್ಷೆ ಹೆಚ್ಚಾಗಿದೆ. ದುಬಾರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರಿಗೆ ಬಹುಕೋಟಿ ರೂ. ಸಂಭಾವನೆ ಸಿಕ್ಕಿದೆ.

‘ಸಲಾರ್​’ ಚಿತ್ರಕ್ಕೆ ಪ್ರಭಾಸ್​, ಪ್ರಶಾಂತ್​ ನೀಲ್​, ಶ್ರುತಿ ಹಾಸನ್​ ಪಡೆದ ಸಂಭಾವನೆ ಎಷ್ಟು?
ಪ್ರಶಾಂತ್​ ನೀಲ್​, ಪ್ರಭಾಸ್​, ಪೃಥ್ವಿರಾಜ್​
Follow us on

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಸಲಾರ್​’ (Salaar) ಕೂಡ ಇದೆ. ಎರಡು ಪಾರ್ಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದ್ದು, ಮೊದಲ ಪಾರ್ಟ್​ ಡಿಸೆಂಬರ್​ 22ರಂದು ಬಿಡುಗಡೆ ಆಗುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬಂದಿದೆ. ಅಂದಾಜು 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧಗೊಂಡಿದೆ. ಘಟಾನುಘಟಿ ಕಲಾವಿದರು ಮತ್ತು ತಂತ್ರಜ್ಞರು ‘ಸಲಾರ್’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಅವರ ಸಂಭಾವನೆ (Salaar Remuneration) ಎಷ್ಟು ಎಂಬುದನ್ನು ತಿಳಿಯುವ ಕುತೂಹಲ ಎಲ್ಲರಿಗೂ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪ್ರಭಾಸ್​ ಅವರು ಸತತ ಸೋಲು ಕಂಡಿದ್ದಾರೆ. ಹಾಗಿದ್ದರೂ ಕೂಡ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ‘ಸಲಾರ್​’ ಸಿನಿಮಾಗಾಗಿ ಪ್ರಭಾಸ್​ ಅವರು ಬರೋಬ್ಬರಿ 100 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಸಿನಿಮಾದಿಂದ ಬರುವ ಲಾಭದಲ್ಲಿ ಅವರಿಗೆ ಶೇಕಡ 10ರಷ್ಟು ಸಂದಾಯ ಆಗಲಿದೆ ಎಂಬ ಮಾಹಿತಿ ಕೂಡ ಇದೆ.

ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಮೂಲಕ ಭರ್ಜರಿ ಗೆಲವು ಕಂಡರು. ಆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಯಿತು. ‘ಫೈನಾನ್ಷಿಯಲ್​ ಎಕ್ಸ್​ಪ್ರೆಸ್​’ ವರದಿ ಮಾಡಿರುವ ಪ್ರಕಾರ, ‘ಸಲಾರ್​’ಸಿನಿಮಾದ ನಿರ್ದೇಶನಕ್ಕೆ ಪ್ರಶಾಂತ್​ ನೀಲ್​ ಅವರು 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಈ ಸಿನಿಮಾದ ಟ್ರೇಲರ್​ ನೋಡಿದವರು ಮೇಕಿಂಗ್​ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ಸಲಾರ್​’ ಗೆದ್ದರೆ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಹಿಂದಿ ಮಾರುಕಟ್ಟೆಯಲ್ಲಿ ‘ಸಲಾರ್​’ ಚಿತ್ರಕ್ಕೆ ಆಗುತ್ತಾ ಹಿನ್ನಡೆ? ಇಲ್ಲಿದೆ ಕಾರಣ..

ಮಲಯಾಳಂ ಸ್ಟಾರ್​ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ‘ಸಲಾರ್​’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರದ ಗೆಟಪ್​ ತುಂಬ ಡಿಫರೆಂಟ್​ ಆಗಿದೆ. ಈ ಸಿನಿಮಾದಲ್ಲಿನ ನಟನೆಗೆ ಅವರು 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರದಲ್ಲಿ ಪ್ರಭಾಸ್​ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದಾರೆ. ಅವರಿಗೂ 4 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂಬ ಮಾಹಿತಿ ಇದೆ.

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯು ನಿರ್ಮಾಣ ಮಾಡಿದ್ದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿತ್ತು. ಹಾಗೆಯೇ ‘ಸಲಾರ್​’ ಚಿತ್ರ ಕೂಡ ಅಬ್ಬರಿಸುತ್ತಾ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾಗೆ ‘ಡಂಕಿ’ ಚಿತ್ರ ಪೈಪೋಟಿ ನೀಡಲಿದೆ. ಡಿಸೆಂಬರ್​ 21ರಂದು ‘ಡಂಕಿ’ ಬಿಡುಗಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.