Salaar Release Date: ‘ಕಮಿಂಗ್​ ಬ್ಲಡಿ ಸೂನ್​’: ಪ್ರಭಾಸ್​ ಅಭಿಮಾನಿಗಳಿಗೆ ‘ಸಲಾರ್​’ ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’

‘ಸಲಾರ್​​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 22ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಪ್ರಭಾಸ್​ ಅಭಿಮಾನಿಗಳಿಗಾಗಿ ‘ಕಮಿಂಗ್​ ಬ್ಲಡಿ ಸೂನ್​’ ಎಂಬ ಖಡಕ್​ ಕ್ಯಾಪ್ಷನ್​ ಮತ್ತು ಪೋಸ್ಟರ್​ ಮೂಲಕ ಅಪ್​ಡೇಟ್​ ತಿಳಿಸಲಾಗಿದೆ.

Salaar Release Date: ‘ಕಮಿಂಗ್​ ಬ್ಲಡಿ ಸೂನ್​’: ಪ್ರಭಾಸ್​ ಅಭಿಮಾನಿಗಳಿಗೆ ‘ಸಲಾರ್​’ ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
ಪ್ರಭಾಸ್​

Updated on: Sep 29, 2023 | 4:23 PM

ಪ್ರಭಾಸ್​ ಅಭಿನಯದ ‘ಸಲಾರ್​’ (Salaar) ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಹಲವು ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಸೆಪ್ಟೆಂಬರ್​ 28ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಲಾರ್​ ರಿಲೀಸ್​ ದಿನಾಂಕ (Salaar Release Date) ಮುಂದಕ್ಕೆ ಹೋಗಿತ್ತು. ಹೊಸ ಡೇಟ್​ ಬಗ್ಗೆ ತಿಳಿಯಲು ಕಾದಿದ್ದ ಫ್ಯಾನ್ಸ್​ಗೆ ಈಗ ಗುಡ್​ ನ್ಯೂಸ್​ ಸಿಕ್ಕಿದೆ. 2023ರಲ್ಲೇ ಈ ಚಿತ್ರ ತೆರೆಕಾಣಲಿದೆ ಎಂಬುದು ಖಚಿತವಾಗಿದೆ. ಹೌದು, ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕಡೆಯಿಂದ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ಡಿಸೆಂಬರ್​ 22ರಂದು ‘ಸಲಾರ್​’ ಬಿಡುಗಡೆ ಆಗಲಿದೆ. ‘ಕಮಿಂಗ್​ ಬ್ಲಡಿ ಸೂನ್​’ ಎಂಬ ಖಡಕ್​ ಕ್ಯಾಪ್ಷನ್​ ಮತ್ತು ಪೋಸ್ಟರ್​ ಮೂಲಕ ರಿಲೀಸ್​ ಡೇಟ್​ ತಿಳಿಸಲಾಗಿದೆ. ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್ ಅವರ ಕಾಂಬಿನೇಷನ್​ ಎಂಬ ಕಾರಣಕ್ಕೆ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಪ್ರಭಾಸ್​, ಶ್ರುತಿ ಹಾಸನ್​, ಜಗಪತಿ ಬಾಬು, ಪೃಥ್ವಿರಾಜ್​ ಸುಕುಮಾರನ್​, ಟಿನು ದೇಸಾಯಿ, ಈಶ್ವರಿ ರಾವ್​ ಮುಂತಾದವರು ‘ಸಲಾರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಕೆಜಿಎಫ್​’ ರೀತಿಯೇ ಎರಡು ಪಾರ್ಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಮೊದಲ ಪಾರ್ಟ್​ ಡಿಸೆಂಬರ್​ 22ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಛಾಯಾಗ್ರಾಹಕ ಭುವನ್​ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು ಸೇರಿದಂತೆ ‘ಕೆಜಿಎಫ್​: ಚಾಪ್ಟರ್​ 2’ ತಂಡದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ‘ಸಲಾರ್’ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ.

ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿನಿಂದ ಸಖತ್​ ಜನಪ್ರಿಯತೆ ಪಡೆದಿದ್ದಾರೆ. ಅವರ ಕೆಲಸದ ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹಾಗಾಗಿ ‘ಸಲಾರ್​’ ಮೇಲೆ ಕಾತರ ಸೃಷ್ಟಿ ಆಗಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸಿನಿಮಾವನ್ನು ಕಟ್ಟಿಕೊಡಬೇಕು ಎಂಬುದು ಪ್ರಶಾಂತ್​ ನೀಲ್​ ಉದ್ದೇಶ. ಆ ಕಾರಣಕ್ಕಾಗಿ ಹೆಚ್ಚು ಕಾಳಜಿ ವಹಿಸಿ ಅವರು ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಾಹೋ’, ‘ಆದಿಪುರುಷ್​’ ಸಿನಿಮಾಗಳ ಸೋಲಿನ ಬಳಿಕ ಪ್ರಭಾಸ್​ ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ. ‘ಸಲಾರ್​’ ಸಿನಿಮಾದಿಂದ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Fri, 29 September 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us