ಬಿಡುಗಡೆಗೂ ಮೊದಲೇ 350 ಕೋಟಿ ರೂಪಾಯಿ ಬಾಚಿಕೊಂಡ ‘ಸಲಾರ್​’ ಸಿನಿಮಾ?

ಪ್ರಭಾಸ್​ ಅವರು ಇತ್ತೀಚಿನ ವರ್ಷಗಳಲ್ಲಿ ಸೋಲು ಕಂಡಿರಬಹುದು. ಹಾಗಿದ್ದರೂ ಕೂಡ ‘ಸಲಾರ್​’ ಸಿನಿಮಾದ ಮೇಲೆ ಅಭಿಮಾನಿಗಳು ಇಟ್ಟಿರುವ ನಿರೀಕ್ಷೆ ಕಡಿಮೆ ಆಗಿಲ್ಲ. ಈ ಚಿತ್ರದ ಮೇಲೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿಯಾಗಲು ಪ್ರಶಾಂತ್​ ನೀಲ್​ ಕಾರಣ. ಅವರ ಮೇಕಿಂಗ್​ ಬೇರೆಯದೇ ರೀತಿಯಲ್ಲಿ ಇರುತ್ತದೆ. ಹಾಗಾಗಿ ‘ಸಲಾರ್​’ ಚಿತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ.

ಬಿಡುಗಡೆಗೂ ಮೊದಲೇ 350 ಕೋಟಿ ರೂಪಾಯಿ ಬಾಚಿಕೊಂಡ ‘ಸಲಾರ್​’ ಸಿನಿಮಾ?
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Sep 13, 2023 | 6:24 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಸಲಾರ್​’ ಸಿನಿಮಾ (Salaar Movie) ಸೆಪ್ಟೆಂಬರ್​ 28ರಂದು ರಿಲೀಸ್​ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಹೊಸ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಪ್ರಭಾಸ್​ (Prabhas) ಮತ್ತು ಪ್ರಶಾಂತ್​ ನೀಲ್ (Prashanth Neel)​ ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡುತ್ತದೋ ತಿಳಿಯದು. ಆದರೆ ಬಿಡುಗಡೆಗೂ ಮುನ್ನವೇ ‘ಸಲಾರ್​’ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಆಗಿದೆ. ಈ ಚಿತ್ರದ ಸ್ಯಾಟಲೈಟ್​ ಹಕ್ಕು ಮತ್ತು ಒಟಿಟಿ ಹಕ್ಕುಗಳ ಮಾರಾಟದಿಂದ ಬರೋಬ್ಬರಿ 350 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ.

ಪ್ರಭಾಸ್​ ಅವರು ಇತ್ತೀಚಿನ ವರ್ಷಗಳಲ್ಲಿ ಸಾಲು ಸಾಲು ಸೋಲು ಕಂಡಿರಬಹುದು. ಹಾಗಿದ್ದರೂ ಕೂಡ ‘ಸಲಾರ್​’ ಸಿನಿಮಾದ ಮೇಲೆ ಅವರ ಅಭಿಮಾನಿಗಳು ಇಟ್ಟಿರುವ ನಿರೀಕ್ಷೆ ಕಡಿಮೆ ಆಗಿಲ್ಲ. ಈ ಚಿತ್ರದ ಮೇಲೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿಯಾಗಲು ಪ್ರಶಾಂತ್​ ನೀಲ್​ ಕಾರಣ. ಅವರ ಮೇಕಿಂಗ್​ ಬೇರೆಯದೇ ರೀತಿಯಲ್ಲಿ ಇರುತ್ತದೆ. ಹಾಗಾಗಿ ‘ಸಲಾರ್​’ ಚಿತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ. ವರದಿಗಳ ಪ್ರಕಾರ ಈ ಚಿತ್ರದ ಎಲ್ಲ ಭಾಷೆಯ ಟಿವಿ ಮತ್ತು ಒಟಿಟಿ ಹಕ್ಕುಗಳ ಮಾರಾಟ ಆಗಿದೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರುತ್ತಿದೆ.

ಇದನ್ನೂ ಓದಿ: ‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಕಡೆಗೂ ಮೌನ ಮುರಿದ ‘ಹೊಂಬಾಳೆ ಫಿಲ್ಮ್ಸ್​’

‘ಸಲಾರ್​’ ಪ್ಯಾನ್​ ಇಂಡಿಯಾ ಸಿನಿಮಾ. ಖಾಸಗಿ ವಾಹಿನಿಯೊಂದು ಈ ಚಿತ್ರದ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ವರ್ಷನ್​ಗಳ ಪ್ರಸಾರ ಹಕ್ಕುಗಳನ್ನು ಖರೀದಿಸಿದೆ. ಅದೇ ರೀತಿ ನೆಟ್​ಫ್ಲಿಕ್ಸ್​ಗೆ ಎಲ್ಲ ಭಾಷೆಯ ಒಟಿಟಿ ರೈಟ್ಸ್​ ಮಾರಾಟ ಆಗಿದೆ. ಈ ಪೈಕಿ ಯಾರು ಎಷ್ಟು ಹಣ ನೀಡಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಟಿವಿ ಮತ್ತು ಒಟಿಟಿಯಿಂದ ಸೇರಿ 350 ಕೋಟಿ ರೂಪಾಯಿಗೆ ಡೀಲ್​ ಮುಗಿದಿದೆ ಎಂದು ವರದಿ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?

ನಿರೀಕ್ಷೆಯ ಮಟ್ಟ ದೊಡ್ಡದಾಗಿರುವುದರಿಂದ ಅದಕ್ಕೆ ತಕ್ಕಂತೆ ‘ಸಲಾರ್​’ ಸಿನಿಮಾವನ್ನು ಕಟ್ಟಿಕೊಡಲು ನಿರ್ದೇಶಕ ಪ್ರಶಾಂತ್​ ನೀಲ್​ ಪ್ರಯತ್ನಿಸುತ್ತಿದ್ದಾರೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಿಸುತ್ತಿದೆ. ಪ್ರಭಾಸ್​, ಶ್ರುತಿ ಹಾಸನ್, ಪೃಥ್ವಿರಾಜ್​ ಸುಕುಮಾರನ್​ ಮುಂತಾದ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ಹೊಸ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ