‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್

‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ.

‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್
ಸಲಾರ್ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Jan 19, 2024 | 1:13 PM

ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಮೊದಲೇ ಈ ಚಿತ್ರ ನೆಟ್​ಫ್ಲಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯ ಆಗಲಿದೆ. ಹೌದು, ಡಿಸೆಂಬರ್ 20ರಂದು ‘ಸಲಾರ್’ ಸಿನಿಮಾ ನೆಟ್​ಫ್ಲಿಕ್ಸ್ ಮೂಲಕ ಪ್ರಸಾರ ಆರಂಭಿಸಲಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಸಿನಿಮಾ ನೋಡಲು ಅವಕಾಶ ಇದೆ. ಇದು ಅಭಿಮಾನಿಗಳಿಗೆ ಸರ್​ಪ್ರೈಸ್ ಎನಿಸಿದೆ.

ಈ ಬಗ್ಗೆ ನೆಟ್​ಫ್ಲಿಕ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ಕಾಟೇರಮ್ಮನ ಮಗ ನೆಟ್​ಫ್ಲಿಕ್ಸ್​ಗೆ ಬರುತ್ತಿದ್ದಾನೆ’ ಎಂದು ಈ ಒಟಿಟಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಚಿತ್ರ ರಿಲೀಸ್ ಆಗಿ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡಿದೆ. ಈಗ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಅಬ್ಬರಿಸೋಕೆ ರೆಡಿ ಆಗಿದೆ. ಈ ಮೊದಲು ‘ಸಲಾರ್’ ಸಿನಿಮಾ ಜನವರಿ 26ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂದು ಸುದ್ದಿ ಆಗಿತ್ತು.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಅವರು ಮಾಸ್ ಅವತಾರ ತಾಳಿದ್ದಾರೆ. ಪೃಥ್ವಿರಾಜ್​ ಸುಕುಮಾರನ್ ಅವರು ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶ್ರುತಿ ಹಾಸನ್ ನಾಯಕಿ ಪಾತ್ರ ಮಾಡಿದ್ದಾರೆ. ‘ಗೇಮ್ ಆಫ್ ಥ್ರೋನ್ಸ್ ರೀತಿಯಲ್ಲಿ ನನಗೆ ಈ ಸಿನಿಮಾ ಕಾಣಿಸಿತು’  ಎಂದು ಪೃಥ್ವಿರಾಜ್ ಸುಕುಮಾರನ್ ಹೇಳಿದ್ದರು. ಸಿನಿಮಾ ನೋಡಿದ ಅನೇಕರಿಗೆ ಇದು ಹೌದು ಎನ್ನಿಸಿದೆ.

ಇದನ್ನೂ ಓದಿ: ‘ಸಲಾರ್’ ಯಶಸ್ಸಿಗೆ ಭರ್ಜರಿ ಪಾರ್ಟಿ, ಇಲ್ಲಿವೆ ಕೆಲವು ಚಿತ್ರಗಳು

‘ಸಲಾರ್’ ಸಿನಿಮಾದ ಕಥೆಗೂ ‘ಉಗ್ರಂ’ ಚಿತ್ರಕ್ಕೂ ಲಿಂಕ್ ಕಲ್ಪಿಸಲಾಗಿದೆ. ಇದು ಚಿತ್ರಕ್ಕೆ ಹಿನ್ನಡೆ ಉಂಟು ಮಾಡಿತು. ಮೇಕಿಂಗ್ ವಿಚಾರದಲ್ಲಿ ‘ಸಲಾರ್’ ಸಿನಿಮಾ ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದೆ. ಇದರಿಂದಲೂ ಚಿತ್ರಕ್ಕೆ ಹಿನ್ನಡೆ ಆಯಿತು. ಈಗ ಚಿತ್ರವನ್ನು ಜನರು ಒಟಿಟಿಯಲ್ಲಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ‘ಸಲಾರ್’ ಚಿತ್ರಕ್ಕೆ ಎರಡನೇ ಪಾರ್ಟ್ ಕೂಡ ಸಿದ್ಧಗೊಳ್ಳಲಿದೆ. ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ