AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಟ್ರೇಲರ್​ ರಿಲೀಸ್​ ದಿನಾಂಕದಲ್ಲಿಲ್ಲ ಬದಲಾವಣೆ; ರಿವೀಲ್ ಆಗಲಿದೆ ದೊಡ್ಡ ವಿಚಾರ?

‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್’ಗೂ ಕನೆಕ್ಷನ್ ಇದೆ ಎಂದು ಮೊದಲಿನಿಂದಲೂ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಟ್ರೇಲರ್​ನಲ್ಲಿ ಈ ಬಗ್ಗೆ ಮಾಹಿತಿ ಸಿಗೋ ನಿರೀಕ್ಷೆ ಇದೆ. ‘ಸಲಾರ್’ ಚಿತ್ರದಲ್ಲಿ ಯಶ್ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಸಲಾರ್’ ಟ್ರೇಲರ್​ ರಿಲೀಸ್​ ದಿನಾಂಕದಲ್ಲಿಲ್ಲ ಬದಲಾವಣೆ; ರಿವೀಲ್ ಆಗಲಿದೆ ದೊಡ್ಡ ವಿಚಾರ?
ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: Nov 10, 2023 | 7:09 AM

Share

‘ಸಲಾರ್’ ಸಿನಿಮಾ (Salaar Movie) ರಿಲೀಸ್ ಡಿಸೆಂಬರ್ 1ರಂದು ಆಗಲಿದೆ ಎಂದು ವರದಿ ಆಗಿತ್ತು. ತಂಡದ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈ ಮಧ್ಯೆ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎಂದೆಲ್ಲ ಹೇಳಲಾಗುತ್ತಿತ್ತು. ಆದರೆ, ಹಾಗಾಗುತ್ತಿಲ್ಲ. ಡಿಸೆಂಬರ್ 1ರಂದು ‘ಸಲಾರ್’ ಟ್ರೇಲರ್ ರಿಲೀಸ್ ಆಗಲಿದ್ದು, ಡಿಸೆಂಬರ್ 22ಕ್ಕೆ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಸದ್ಯ ಚಿತ್ರತಂಡ ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್’ಗೂ ಕನೆಕ್ಷನ್ ಇದೆ ಎಂದು ಮೊದಲಿನಿಂದಲೂ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಟ್ರೇಲರ್​ನಲ್ಲಿ ಈ ಬಗ್ಗೆ ಮಾಹಿತಿ ಸಿಗೋ ನಿರೀಕ್ಷೆ ಇದೆ. ‘ಸಲಾರ್’ ಚಿತ್ರದಲ್ಲಿ ಯಶ್ ಅವರು ಅತಿಥಿ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದು ನಿಜವಾಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಐದು ಭಾಷೆಯಲ್ಲಿ ಒಂದೇ ಟ್ರೇಲರ್ ಬಿಡುಗಡೆ ಮಾಡಲು ತಂಡ ಪ್ಲಾನ್ ಮಾಡಿದೆ. ಡೈಲಾಗ್​ ಇಲ್ಲದೆ ಕೇವಲ ಬಿಜಿಎಂ ಮೂಲಕ ದೃಶ್ಯಗಳನ್ನು ತೋರಿಸಬಹುದು ಅಥವಾ ಇಂಗ್ಲಿಷ್ ಡೈಲಾಗ್ ಮೂಲಕ ಟ್ರೇಲರ್​ನ ಪ್ರಸ್ತುತಪಡಿಸಬಹುದು ಎಂದು ಹೇಳಲಾಗುತ್ತಿದೆ. ಐದು ಭಾಷೆಗಳಲ್ಲಿ ಒಂದೇ ಟ್ರೇಲರ್ ರಿಲೀಸ್ ಆದರೆ ಯೂಟ್ಯೂಬ್​ನಲ್ಲಿ ಹಲವು ದಾಖಲೆ ನಿರ್ಮಾಣ ಆಗಬಹುದು.

‘ಸಲಾರ್’ ಸಿನಿಮಾ ಪೋಸ್ಟರ್ ಹಾಗೂ ಟೀಸರ್ ಗಮನ ಸೆಳೆಯುತ್ತಿದೆ. ಇದು ಪ್ರಶಾಂತ್ ನೀಲ್ ಯೂನಿವರ್ಸ್​ನ ಸಿನಿಮಾ. ‘ಕೆಜಿಎಫ್’, ‘ಕೆಜಿಎಫ್ 2’ ರೀತಿಯಲ್ಲೇ ‘ಸಲಾರ್’ ಸಿನಿಮಾ ಕೂಡ ಡಾರ್ಕ್​ ಶೇಡ್​ನಲ್ಲಿ ಮೂಡಿಬರುತ್ತಿದೆ. ‘ಸಲಾರ್’ನ ಮೊದಲ ಭಾಗ ಇದಾಗಿದ್ದು, ಎರಡನೇ ಭಾಗವೂ ಬರಲಿದೆ.

ಇದನ್ನೂ ಓದಿ: Prabhas: ಭಾರತಕ್ಕೆ ವಾಪಸ್​ ಬಂದ ಪ್ರಭಾಸ್​; ‘ಸಲಾರ್​’ ಬಗ್ಗೆ ಚಿಂತೆ ಹೊಂದಿದ್ದ ಅಭಿಮಾನಿಗಳಿಗೆ ಈಗ ಖುಷಿ

‘ಸಲಾರ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್​ ಸುಕುಮಾರನ್ ಮೊದಲಾದವರು ನಟಿಸಿದ್ದಾರೆ. ‘ಕೆಜಿಎಫ್ 2’ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಇಲ್ಲಿಯೂ ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ