Salaar Release Trailer: ‘ಸಲಾರ್’ 2ನೇ ಟ್ರೇಲರ್ನಿಂದ ಕುತೂಹಲ ಹೆಚ್ಚಿಸಿದ ಪ್ರಶಾಂತ್ ನೀಲ್, ಪ್ರಭಾಸ್
‘ಸಲಾರ್’ ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಈಗ ಸಿನಿಮಾದ ಎರಡನೇ ಟ್ರೇಲರ್ ರಿಲೀಸ್ ಆಗಿದೆ. ಇದು ಚಿತ್ರದ ಮೇಲೆ ಇದ್ದ ನಿರೀಕ್ಷೆಯನ್ನು ದ್ವಿಗುಣ ಮಾಡಿದೆ. ಡಿಸೆಂಬರ್ 22ರಂದು ‘ಸಲಾರ್’ ರಿಲೀಸ್ ಆಗಲಿದೆ.
‘ಸಲಾರ್’ ಸಿನಿಮಾದ (Salaar Movie) ಮೊದಲ ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಧೂಳೆಬ್ಬಿಸಿತ್ತು. ಈಗ ಸಿನಿಮಾ ರಿಲೀಸ್ಗೆ ಕೆಲವೇ ದಿನಗಳು ಬಾಕಿ ಇರುವಾಗ ‘ಹೊಂಬಾಳೆ ಫಿಲ್ಮ್ಸ್’ ಹೊಸ ಟ್ರೇಲರ್ (Salaar release trailer) ರಿಲೀಸ್ ಮಾಡಿದೆ. ಈ ಮೂಲಕ ಚಿತ್ರದ ಮೇಲೆ ಇರುವ ಕ್ರೇಜ್ನ ಮತ್ತಷ್ಟು ಹೆಚ್ಚಿಸಿದೆ. ಈ ಚಿತ್ರ ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗಿದ್ದು, ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಆ್ಯಂಡ್ ಟೀಂ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ.
‘ಸಲಾರ್’ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ‘ಸಲಾರ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಮೂಲಕ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಇರುವ ನಿರೀಕ್ಷೆ ದಿನ ಕಳೆದಂತೆ ಹೆಚ್ಚುತ್ತಿದೆ.
𝐄𝐧𝐭𝐞𝐫 𝐭𝐡𝐞 𝐯𝐢𝐨𝐥𝐞𝐧𝐭 𝐰𝐨𝐫𝐥𝐝 𝐨𝐟 𝐊𝐡𝐚𝐧𝐬𝐚𝐚𝐫 🔥#SalaarReleaseTrailer out now: https://t.co/9bTtGoKvZ3#SalaarCeaseFire worldwide grand release on December 22nd!#Salaar #Prabhas #PrashanthNeel @PrithviOfficial @shrutihaasan @VKiragandur @hombalefilms… pic.twitter.com/kbjavSZwTU
— Hombale Films (@hombalefilms) December 18, 2023
‘ಸಲಾರ್’ ಸಿನಿಮಾದಲ್ಲಿ ಇಬ್ಬರು ಸ್ನೇಹಿತರ ಕಥೆ ಇದೆ. ಅದರ ಝಲಕ್ ತೋರಿಸುವ ರೀತಿಯಲ್ಲಿ 2ನೇ ಟ್ರೇಲರ್ ಮೂಡಿಬಂದಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅದರ ಅಬ್ಬರ ಕೂಡ ಟ್ರೇಲರ್ನಲ್ಲಿ ಕಾಣಿಸಿದೆ. ಮಾಸ್ ಸಿನಿಮಾವನ್ನು ಇಷ್ಟಪಡುವ ಪ್ರೇಕ್ಷಕರು ‘ಸಲಾರ್’ ಬಿಡುಗಡೆಗಾಗಿ ಕಾದಿದ್ದಾರೆ. ತೆಲುಗು, ಕನ್ನಡ, ಮಲಯಾಳಂ, ಹಿಂದಿ, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಎಲ್ಲ ಭಾಷೆಯಲ್ಲೂ ಟ್ರೇಲರ್ ರಿಲೀಸ್ ಆಗಿದೆ.
ಪ್ರಶಾಂತ್ ನೀಲ್ ಅವರು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಮೂಲಕ ದೊಡ್ಡ ಗೆಲುವು ಕಂಡಿದ್ದರು. ಈಗ ಅವರು ಇನ್ನೊಂದು ಗೆಲುವು ಪಡೆಯಲು ಸಜ್ಜಾಗಿದ್ದಾರೆ. ಚಿತ್ರದ ಅಡ್ವಾನ್ಸ್ ಬುಕಿಂಗ್ ಚೆನ್ನಾಗಿ ಆಗುತ್ತಿದೆ. ಈ ಸಿನಿಮಾಗೆ ಮೊದಲ ದಿನ ಉತ್ತಮ ಓಪನಿಂಗ್ ಸಿಗುವುದು ಖಚಿತ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:47 pm, Mon, 18 December 23