ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಇದು ನಡೆದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಸಲ್ಮಾನ್ ಖಾನ್ ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿವೆ.

ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ
ಸಲ್ಮಾನ್ ಖಾನ್ Image Credit source: Variety
Follow us
ನಯನಾ ರಾಜೀವ್
|

Updated on: Nov 08, 2024 | 9:31 AM

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್​ನಿಂದ ಮತ್ತೆ ಕೊಲೆ ಬೆದರಿಕೆ ಬಂದಿದೆ.ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್ ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಇದು ನಡೆದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಸಲ್ಮಾನ್ ಖಾನ್ ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿವೆ.

ಇತ್ತೀಚೆಗಷ್ಟೇ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾಗಿತ್ತು. ಆ ಬೆದರಿಕೆಯಲ್ಲಿ ಜಿಂಕೆ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೇವಸ್ಥಾನಕ್ಕೆ ತೆರಳಿ ಕ್ಷಮೆ ಕೇಳುವಂತೆ ಹಾಗೂ 5 ಕೋಟಿ ರೂ. ಕೊಡುವಂತೆ ಕೇಳಲಾಗಿತ್ತು.

1998ರಲ್ಲಿ ರಾಜಸ್ಥಾನದಲ್ಲಿ ಸಲ್ಮಾನ್ ಖಾನ್ ಅವರು ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಜೋಧ್ ಪುರದಲ್ಲಿ ಬೇಟೆಗೆ ತೆರಳಿದ್ದರು. ಅಂದು ರಾತ್ರಿ ಸಲ್ಮಾನ್ ಕೃಷ್ಣಮೃಗ ಬೇಟೆಯಾಡಿದ್ದರು ಎನ್ನಲಾಗಿದೆ. ಈ ಕಪ್ಪು ಜಿಂಕೆಯನ್ನು ಬಿಷ್ಣೋಯ್ ಸಮುದಾಯದಲ್ಲಿ ಬಹಳ ಪೂಜ್ಯವೆಂದು ಪರಿಗಣಿಸಲಾಗಿದೆ.

ಮತ್ತಷ್ಟು ಓದಿ: Threat To Shah Rukh Khan: ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೆಸರು ಕೇಳಿ ಬಂದ ತಕ್ಷಣ ಬಿಷ್ಣೋಯ್ ಸಮುದಾಯದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಇದೇ ಕಾರಣಕ್ಕೆ. 2018 ರಲ್ಲಿ, ಜೋಧ್‌ಪುರ ನ್ಯಾಯಾಲಯವು ಸಲ್ಮಾನ್ ಖಾನ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತು, ಆದರೆ ಎರಡು ದಿನಗಳ ನಂತರ ಸಲ್ಮಾನ್ ಖಾನ್ ಜಾಮೀನಿನ ಮೇಲೆ ಬಿಡುಗಡೆಯಾದರು.

ಇದರಿಂದ ಕೋಪಗೊಂಡ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಅಂದಿನಿಂದ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರ ಪರಮ ಶತ್ರುವಾಗಿಯೇ ಉಳಿದಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಅವರು ರಾಜಸ್ಥಾನದ ಬಿಕಾನೇರ್‌ನಲ್ಲಿರುವ ಬಿಷ್ಣೋಯ್ ಸಮುದಾಯದ ಮುಖ್ಯ ದೇವಾಲಯಕ್ಕೆ ಸಲ್ಮಾನ್ ಖಾನ್ ಬಂದು ಕೃಷ್ಣಮೃಗ ಬೇಟೆಯ ವಿಚಾರದಲ್ಲಿ ಕ್ಷಮೆಯಾಚಿಸಬೇಕೆಂದು ಕೇಳಿದ್ದರು.

ಕೆಲ ಸಮಯದ ಹಿಂದೆ ಮುಂಬೈನಲ್ಲಿರುವ ಸಲ್ಮಾನ್ ಖಾನ್ ಮನೆಯ ಮೇಲೂ ಗುಂಡಿನ ದಾಳಿ ನಡೆದಿತ್ತು. ಕಳೆದ ತಿಂಗಳು ಮುಂಬೈನಲ್ಲಿ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ದಿಕಿ ಅವರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರು ಕೇಳಿ ಬಂದಿದೆ.

ಸಲ್ಮಾನ್ ಖಾನ್ ಜೊತೆಗೆ ಶಾರುಖ್ ಖಾನ್ ಕೂಡ ಫೈಜಾನ್ ಎಂಬ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿತ್ತು. ಈ ಸಂಬಂಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿ ಛತ್ತೀಸ್‌ಗಢದ ರಾಯ್‌ಪುರ ನಿವಾಸಿಯಾಗಿದ್ದು, ಶಾರುಖ್ ಖಾನ್‌ಗೆ ಬೆದರಿಕೆ ಕರೆ ಮಾಡಿದ್ದ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್