AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ

‘ಜವಾನ್​’ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ದೊಡ್ಡ ದೊಡ್ಡ ಸ್ಟಾರ್​ ನಟರು ಅಟ್ಲಿ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಕಮಲ್​ ಹಾಸನ್​ ಹಾಗೂ ಸಲ್ಮಾನ್​ ಖಾನ್​ ಕಾಂಬಿನೇಷನ್​ನ ಸಿನಿಮಾಗೆ ಅಟ್ಲಿ ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ
ಕಮಲ್​ ಹಾಸನ್, ಅಟ್ಲಿ, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jul 01, 2024 | 8:53 PM

Share

ನಿರ್ದೇಶಕ ಅಟ್ಲಿ (Atlee) ಅವರಿಗೆ ದಕ್ಷಿಣ ಭಾರತದಲ್ಲಿ ಮತ್ತು ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಈ ಮೊದಲು ತಮಿಳು ಚಿತ್ರರಂಗದಲ್ಲಿ ಬ್ಲಾಕ್​ ಬಸ್ಟರ್​ ಸಿನಿಮಾಗಳನ್ನು ನೀಡಿದ್ದ ಅವರು ಕಳೆದ ವರ್ಷ ‘ಜವಾನ್​’ ಸಿನಿಮಾ ಮೂಲಕ ಹಿಂದಿ ಚಿತ್ರರಂಗದಲ್ಲೂ ಸೂಪರ್​ ಸಕ್ಸಸ್​ ಕಂಡರು. ಈಗ ಅವರು ಸೌತ್​ ಮತ್ತು ಬಾಲಿವುಡ್​ ಸ್ಟಾರ್ ಹೀರೋಗಳ ಸಂಗಮದಲ್ಲಿ ಹೊಸ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕಮಲ್​ ಹಾಸನ್ (Kamal Haasan)​ ಮತ್ತು ಸಲ್ಮಾನ್​ ಖಾನ್​ (Salman Khan) ಅವರ ಕಾಂಬಿನೇಷನ್​ನ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

‘ಜವಾನ್​’ ಬಳಿಕ ನಿರ್ದೇಶಕ ಅಟ್ಲಿ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡಿಲ್ಲ. ಅವರ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬ ಬಗ್ಗೆ ಎಲ್ಲರಿಗೂ ಕೌತುಕ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಟ್ಲಿ ಫೇಮಸ್​ ಆಗಿರುವುದರಿಂದ ಅವರ ಮುಂದಿನ ಸಿನಿಮಾ ಕೂಡ ಆ ಮಟ್ಟದಲ್ಲೇ ಮೂಡಿಬರಲಿದೆ. ಅದಕ್ಕೆ ಸರಿಹೊಂದುವಂತಹ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಅಟ್ಲಿ ಅವರು ಕಳೆದ ಕೆಲವು ದಿನಗಳಿಂದ ಸಲ್ಮಾನ್​ ಖಾನ್​ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಆ ಬಗ್ಗೆ ಇತ್ತೀಚೆಗಷ್ಟೇ ಗಾಸಿಪ್​ ಕೇಳಿಬಂದಿತ್ತು. ಇದೇ ಪ್ರಾಜೆಕ್ಟ್​ನಲ್ಲಿ ಓರ್ವ ಕಾಲಿವುಡ್​ ಸೂಪರ್​ ಸ್ಟಾರ್​ ಇರುತ್ತಾರೆ ಎಂದು ಹೇಳಲಾಗಿತ್ತು. ಅದು ಯಾರು ಎಂಬ ಪ್ರಶ್ನೆಗೆ ಉತ್ತರವಾಗಿ ಕಮಲ್​ ಹಾಸನ್​ ಅವರ ಹೆಸರು ಕೇಳಿಬರುತ್ತಿದೆ. ಈ ಸುದ್ದಿ ಕೇಳಿ ಸಲ್ಮಾನ್​ ಖಾನ್​ ಮತ್ತು ಕಮಲ್​ ಹಾಸನ್​ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಕಲ್ಕಿ 2898 ಎಡಿ: 7 ನಿಮಿಷಕ್ಕೆ 20 ಕೋಟಿ ಹಣ ಪಡೆದ ಕಮಲ್ ಹಾಸನ್

ಭರ್ಜರಿ ಆ್ಯಕ್ಷನ್​ ಸಿನಿಮಾಗಳನ್ನು ಮಾಡುವ ಮೂಲಕ ಅಟ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಇತ್ತ, ಸಲ್ಮಾನ್​ ಖಾನ್​ ಹಾಗೂ ಕಮಲ್ ಹಾಸನ್​ ಕೂಡ ಆ್ಯಕ್ಷನ್​ ಸಿನಿಮಾಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಮೂವರ ಕಾಂಬಿನೇಷನ್​ ಒಂದಾದರೆ ಭರ್ಜರಿ ಮನರಂಜನೆ ಗ್ಯಾರಂಟಿ. ಇನ್ನು, ಈ ಪ್ರಾಜೆಕ್ಟ್​ಗೆ ಸನ್​ ಪಿಕ್ಚರ್ಸ್​ ಸಂಸ್ಥೆ ಬಂಡವಾಳ ಹೂಡಲಿದೆ. ಈ ಪ್ರಾಜೆಕ್ಟ್​ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗುವುದು ಬಾಕಿ ಇದೆ.

ಸದ್ಯಕ್ಕೆ ಸಲ್ಮಾನ್​ ಖಾನ್​ ಅವರು ‘ಸಿಕಂದರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಕಮಲ್​ ಹಾಸನ್​ ಅವರು ‘ಇಂಡಿಯನ್​ 2’ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಬ್ಲಾಕ್​ ಬಸ್ಟರ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ