‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್

‘ಸಿಖಂದರ್’ ಸಿನಿಮಾ 2025ರ ಈದ್​ಗೆ ರಿಲೀಸ್ ಆಗಲಿದೆ. ಇದು ಬಿಗ್ ಬಜೆಟ್ ಸಿನಿಮಾ. ಅಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾದ ಶೂಟ್ ನಡೆಯಲಿದೆ. ಈ ಎಲ್ಲಾ ಕಾರಣದಿಂದ ಆದಷ್ಟು ಬೇಗ ಸಿನಿಮಾದ ಕೆಲಸ ಮುಗಿಸಿಕೊಳ್ಳುವ ಆಲೋಚನೆ ತಂಡಕ್ಕೆ ಇದೆ. ಈ ಮಧ್ಯೆ ಸಲ್ಲು ಹೊಸ ವಿಡಿಯೋ ವೈರಲ್ ಆಗಿದೆ.

‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್
ಸಲ್ಮಾನ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Aug 29, 2024 | 8:21 AM

ಸಲ್ಮಾನ್ ಖಾನ್​ಗೆ 58 ವರ್ಷ ಮುಗಿದಿದೆ. ಇನ್ನು ಕೆಲವೇ ತಿಂಗಳಲ್ಲಿ (ಡಿಸೆಂಬರ್ 27) 59ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ. ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಮಾಡೋಕೆ ಆದ್ಯತೆ ನೀಡುತ್ತಾರೆ. ಆದರೆ, ಸಲ್ಲುಗೆ ಈಗ ಮೊದಲು ಇದ್ದಷ್ಟು ಎನರ್ಜಿ ಇಲ್ಲ. ಅವರಿಗೆ ವಯಸ್ಸಾಗಿದ್ದು, ಎದ್ದೇಳಲು ಕಷ್ಟಪಟ್ಟಿದ್ದಾರೆ ಸದ್ಯ ವೈರಲ್ ಆಗಿರೋ ವಿಡಿಯೋ ಹೀಗೊಂದು ಅನುಮಾನ ಹುಟ್ಟುಹಾಕಿದೆ.

ಸಲ್ಮಾನ್ ಖಾನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಇತ್ತೀಚೆಗೆ ಈವೆಂಟ್​ ಒಂದರಲ್ಲಿ ಭಾಗಿ ಆಗಿದ್ದರು. ಈ ಈವೆಂಟ್​ನಲ್ಲಿ ಸೋನಾಲಿ ಬೇಂದ್ರೆ ಅವರು ಆಗಮಿಸಿದರು. ಅವರನ್ನು ಭೇಟಿ ಮಾಡಲು ಎದ್ದರು. ಈ ವೇಳೆ ಎದ್ದೇಳಲು ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಲ್ಲು ಆರೋಗ್ಯದ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ. ಸಲ್ಲುಗೆ ವಯಸ್ಸಾಗಿದೆ ಎಂದು ಕೆಲವರು ಹೇಳಿದ್ದಾರೆ.

ಸಲ್ಮಾನ್ ಖಾನ್ ಹಾಗೂ ಸೋನಾಲಿ ಬೇಂದ್ರೆ ಅವರು ಈ ಮೊದಲು ‘ಹಮ್ ಸಾತ್ ಸಾತ್ ಮೇ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಗಮನ ಸೆಳೆದಿತ್ತು. ಈಗ ಬೇರೆ ಕಾರ್ಯಕ್ರಮದಲ್ಲಿ ಇವರ ಭೇಟಿ ನಡೆದಿದೆ. ಸಲ್ಮಾನ್ ಖಾನ್ ಅವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಇದನ್ನೂ ಓದಿ: ರಶ್ಮಿಕಾ ಜೊತೆ ಒಂದೂವರೆ ತಿಂಗಳು ನಿರಂತರವಾಗಿ ಶೂಟಿಂಗ್ ಮಾಡಲಿದ್ದಾರೆ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿ ನಿರಂತರವಾಗಿ 45 ದಿನಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರವನ್ನು ತಮಿಳಿನ ಎಆರ್​ ಮುರುಗುದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಟ್ಲಿ ಜೊತೆಗೂ ಸಲ್ಮಾನ್ ಖಾನ್ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!