
ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾನುವಾರ (ಜುಲೈ) 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.
ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್ನ ಧೋನಿ ಅವರು ಕತ್ತರಿಸಿದ್ದಾರೆ. ಕೇಕ್ನ ಮೊದಲು ಪತ್ನಿ ಸಾಕ್ಷಿಗೆ ತಿನ್ನಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ (ಕ್ಯಾಪ್ಟನ್) ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಲು ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.
ಇದನ್ನೂ ಓದಿ: ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ
ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಈ ಸಂಗೀತ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದರು.
ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಆರ್ ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರಕ್ಕೆ ನಾಯಕಿ. ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.