AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ
ಸಲ್ಮಾನ್ ಖಾನ್ Image Credit source: Bollywood Hungama
ನಯನಾ ರಾಜೀವ್
|

Updated on:Nov 05, 2024 | 9:56 AM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಸಾರಿ ಎಂದು ಹೇಳಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 30ರಂದು ಮತ್ತೊಂದು ಕೊಲೆ ಬೆದರಿಕೆ ಬಂದಿತ್ತು ಯಾರೋ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿ. ಬಾಬಾ ಸಿದ್ದಿಕಿ ಅವರ ಪುತ್ರ ಸಲ್ಮಾನ್ ಖಾನ್ ಮತ್ತು ಜೀಶನ್ ಸಿದ್ದಿಕಿ ಅವರನ್ನು ಒಳಗೊಂಡ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕಳೆದ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ .

ಮತ್ತಷ್ಟು ಓದಿ: ‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ. ಬೆದರಿಕೆ ಹಾಕಿದ್ದಲ್ಲದೆ, ಆರೋಪಿ ಮೊಹಮ್ಮದ್ ತಯ್ಯಬ್ ಅಲಿಯಾಸ್ ಗುರ್ಫಾನ್, ಜೀಶನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

ಅಕ್ಟೋಬರ್ 12 ರಂದು, ಬಾಬಾ ಸಿದ್ದಿಕಿ ಅವರು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಹತ್ಯೆಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:55 am, Tue, 5 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್