ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು.

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ದಿಶಾ ಪಠಾಣಿ
Follow us
ರಾಜೇಶ್ ದುಗ್ಗುಮನೆ
|

Updated on: May 26, 2021 | 3:53 PM

ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ನಟನೆಯ ‘ರಾಧೆ ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಸಿನಿಮಾ ಒಳ್ಳೆ ವಿಮರ್ಶೆ ಪಡೆಯುವಲ್ಲಿ ಸೋತಿತ್ತು. ಅನೇಕ ಪ್ರಮುಖ ವಿಮರ್ಶಕರು ಈ ಸಿನಿಮಾವನ್ನು ಕಳಪೆ ಎಂದು ಕರೆದಿದ್ದರು. ಬಾಲಿವುಡ್ ನಟ ಕಮಾಲ್​ ಆರ್​. ಖಾನ್​ ಕೂಡ ಈ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು. ಈ ವಿಚಾರ ಸಲ್ಮಾನ್​ ಖಾನ್​ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಬೈನ ಹೆಚ್ಚುವರಿ ಸೆಷನ್​ ನ್ಯಾಯಾಲಯದಲ್ಲಿ ಸಲ್ಮಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕಮಾಲ್​, ‘ರಾಧೆ ವಿಮರ್ಶೆ ಮಾಡಿದ್ದಕ್ಕೆ ಸಲ್ಮಾನ್​ ಖಾನ್​ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಇದಾದ ಮೇಲೆ ಮತ್ತೊಂದು ಟ್ವೀಟ್​ನಲ್ಲಿ, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಶಪಥ ಮಾಡಿದ್ದಾರೆ.

ಏಕ್​ ವಿಲನ್​, ದೇಶದ್ರೋಹಿ ಮೊದಲಾದ ಸಿನಿಮಾಗಳಲ್ಲಿ ಕಮಾಲ್​ ನಟಿಸಿದ್ದರು. 2009ರಲ್ಲಿ ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ತೆರಳಿದ್ದರು.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇದನ್ನೂ ಓದಿ: ಥಿಯೇಟರ್​ನಲ್ಲಿ ಬಹುಕೋಟಿ ಬಾಚುತ್ತಿದ್ದ ಸಲ್ಮಾನ್​ ಖಾನ್​ ಈಗ ರಾಧೆ ಚಿತ್ರದಿಂದ ಮೊದಲ ದಿನ ಗಳಿಸಿದ್ದು ಬರೀ 10 ಸಾವಿರ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ