ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!

ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!
ಸಲ್ಮಾನ್​ ಖಾನ್​
Follow us
ರಾಜೇಶ್ ದುಗ್ಗುಮನೆ
|

Updated on: May 03, 2021 | 8:41 PM

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ತೆರೆಕಾಣುತ್ತಿದೆ.  ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿ U/A ಪ್ರಮಾಣಪತ್ರ ಸಿಕ್ಕಿದೆ. ವಿಶೇಷ ಎಂದರೆ, ಈ ಚಿತ್ರದ ಅವಧಿ ಕೇವಲ 114 ನಿಮಿಷ ಇರಲಿದೆಯಂತೆ.  

ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಆ್ಯಕ್ಷನ್​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಪ್ರತಿ ವರ್ಷ ಈದ್​ ಹಬ್ಬಕ್ಕೆ ಸಲ್ಮಾನ್​ ಖಾನ್​ ನಟನೆಯ ಯಾವುದಾದರೊಂದು ಸಿನಿಮಾ ಬಿಡುಗಡೆ ಆಗುವುದು ವಾಡಿಕೆ. ಈ ವರ್ಷವೂ ಅದು ಮುಂದುವರಿಯಲಿದೆ. ಮೇ 13ರಂದು ಈ ಚಿತ್ರ ಓಟಿಟಿ ಮತ್ತು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಆದರೆ, ರಾಧೆ ಮಾತ್ರ ಈ ವಿಚಾರದಲ್ಲಿ ನಿರ್ಧಾರ ಬದಲಿಸಿಲ್ಲ. ಇತ್ತೀಚೆಗೆ ಚಿತ್ರದ ಟ್ರೇಲರ್​ ರಿಲೀಸ್​ ಆಗಿ ಭಾರೀ ಹೈಪ್​ ಸೃಷ್ಟಿ ಮಾಡಿತ್ತು.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ