ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​
ಸಲ್ಮಾನ್​ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Apr 21, 2021 | 7:12 PM

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾ ತಂಡಗಳು ರಿಲೀಸ್​ ದಿನಾಂಕವನ್ನು ಮುಂದೂಡಿವೆ. ಆದರೆ, ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಈ ಮೊದಲು ನಿಗದಿ ಮಾಡಿದಂತೆ ಈದ್​ ಪ್ರಯುಕ್ತ ಮೇ 13ರಂದು ತೆರೆಕಾಣುತ್ತಿದೆ. ವಿಶೇಷ ಎಂದರೆ, ಚಿತ್ರಮಂದಿರದ ಜತೆಗೆ ಜೀಪ್ಲೆಕ್ಸ್​ನಲ್ಲೂ ಮೇ 13ರಂದೇ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದೇ ರೀತಿ ರಾಧೆ ಸಿನಿಮಾ ಕೂಡ ತೆರೆಕಾಣೋದು ವಿಳಂಬವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಸಲ್ಮಾನ್​ ಖಾನ್​ ಸಿನಿಮಾ ಈ ಮೊದಲು ನಿಗದಿ ಮಾಡಿದ ದಿನಾಂಕದಂದೇ ತೆರೆಗೆ ಬರುತ್ತಿದೆ.

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ. ಇದು ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿತ್ರತಂಡ, ಸಲ್ಮಾನ್​ ಖಾನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ, ಕೆಲ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೇಲರ್​ ಏಪ್ರಿಲ್​ 22ಕ್ಕೆ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್