Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

ಸಿನಿಮಾ ನೋಡಿದ ಅನೇಕ ಮಂದಿ ರಾಧೆ ಸಿನಿಮಾವನ್ನು ಟ್ರೋಲ್​ ಮಾಡುತ್ತಿದ್ದಾರೆ. ಇದು ನಾನು ನೋಡಿದ ಅತ್ಯಂತ ಕೆಟ್ಟ ಸಿನಿಮಾಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.

Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ
ಸಲ್ಮಾನ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: May 14, 2021 | 7:56 PM

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಆದರೆ, ಇದೆಲ್ಲವೂ ಕೇವಲ ಅಭಿಮಾನಿಗಳ ಬಲದಿಂದ ಆಗಿದ್ದು ಎಂಬುದು ಸ್ಪಷ್ಟವಾಗಿದೆ. ರಾಧೆ ಕೇವಲ ಸೋತಿದ್ದು ಮಾತ್ರವಲ್ಲ ಸಲ್ಮಾನ್​ ಖಾನ್​ ಕೆರಿಯರ್​ನಲ್ಲೇ ಅತ್ಯಂತ ಕಳಪೆ ಸಿನಿಮಾ ಎನ್ನುವ ಹಣೆಪಟ್ಟಿ ಕೂಡ ಹೊತ್ತಿದೆ.

ಕೊರೊನಾ ವೈರಸ್​ನಿಂದಾಗಿ ದೇಶದ ಸಾಕಷ್ಟು ರಾಜ್ಯಗಳಲ್ಲಿ ಲಾಕ್​ಡೌನ್​ ಹೇರಲಾಗಿದೆ. ಹೀಗಾಗಿ, ರಾಧೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡಲಿದೆ ಎನ್ನಲಾಗಿತ್ತು. ಆದರೆ, ರಾಧೆ ತಂಡ ಈದ್​ ಹಬ್ಬದಂದೆ (ಮೇ 13) ಚಿತ್ರವನ್ನು ಥಿಯೇಟರ್​ ಹಾಗೂ ಒಟಿಟಿಯಲ್ಲಿ ಒಟ್ಟಿಗೇ ರಿಲೀಸ್​ ಮಾಡಿತ್ತು. ದೇಶದಲ್ಲಿ ಬಹುತೇಕ ಚಿತ್ರಮಂದಿರಗಳು ಕ್ಲೋಸ್​ ಇರುವುದರಿಂದ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಇನ್ನು, ಸಿನಿಮಾ ರಿಲೀಸ್​ ಆದ ದಿನವೇ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿಲ್ಲ.

ಐಎಂಡಿಬಿ ರಾಧೆ ಚಿತ್ರಕ್ಕೆ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿದೆ. ಇದರ ಜತೆಗೆ ಚಿತ್ರಮಂದಿರಗಳಿಂದ ಸಿನಿಮಾಗೆ ಕಲೆಕ್ಷನ್​ ಕೂಡ ಇಲ್ಲ. ಇದರಿಂದ ಸಲ್ಮಾನ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಸಿನಿಮಾಗಳ ಸಾಲಿನಲ್ಲಿ ರಾಧೆ ಕೂಡ ನಿಂತಿದೆ. ರೇಸ್​ 3 ಚಿತ್ರಕ್ಕೆ ಐಎಂಡಿಬಿ 1.9 ರೇಟಿಂಗ್​ ನೀಡಿತ್ತು. ಇದು ಸಲ್ಲು ವೃತ್ತಿ ಜೀವನದ ಅತ್ಯಂತ ಕಳಪೆ ಚಿತ್ರವಾಗಿತ್ತು. ಈಗ ಈ ಸಾಲಿಗೆ ರಾಧೆ ಕೂಡ ಸೇರ್ಪಡೆ ಆಗಿದೆ.

ಇನ್ನು, ಸಿನಿಮಾ ನೋಡಿದ ಅನೇಕ ಮಂದಿ ರಾಧೆ ಸಿನಿಮಾವನ್ನು ಟ್ರೋಲ್​ ಮಾಡುತ್ತಿದ್ದಾರೆ. ಇದು ನಾನು ನೋಡಿದ ಅತ್ಯಂತ ಕೆಟ್ಟ ಸಿನಿಮಾಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ. ಇದರಿಂದ ಸಲ್ಮಾನ್​ ವೃತ್ತಿ ಜೀವನದಲ್ಲಿ ಮತ್ತೊಂದು ಚಿತ್ರ ನೆಲಕಚ್ಚಿದಂತಾಗಿದೆ.

2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್​-3’, ‘ಭಾರತ್’​, ‘ದಬಾಂಗ್​ 3’ ಚಿತ್ರಗಳು ಸೋಲು ಕಂಡಿದ್ದವು. ಈ ಸಾಲಿಗೆ ಈಗ ರಾಧೆ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ

Radhe Movie Review: ‘ರಾಧೆ’ ನೋಡಿ ಏನು ಹೇಳಿದ್ರು ಸಲ್ಮಾನ್​ ಖಾನ್​ ಫ್ಯಾನ್ಸ್​? ಇಲ್ಲಿದೆ ಟ್ವಿಟರ್​ ವಿಮರ್ಶೆ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ