AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ

ಸಲ್ಮಾನ್ ಖಾನ್ ಅವರ ಹೆಸರಲ್ಲಿ ಈ ಮೊದಲು ಅನೇಕ ಮೊಸ ನಡೆದಿದೆ. ಈ ಸಂಬಂಧ ಅವರು ದೂರು ನೀಡಿದ್ದರು. ಈಗ ವಿದೇಶದಲ್ಲೂ ಸಲ್ಲು ಹೆಸರಲ್ಲಿ ಮೋಸ ನಡೆಯುತ್ತಿರುವ ವಿಚಾರ ಗೊತ್ತಾಗಿದೆ. ಈ ವಿಚಾರವಾಗಿ ಸಲ್ಮಾನ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಅವರು ಎಚ್ಚರಿಕೆ ಕೂಡ ನೀಡಿದ್ದಾರೆ.

ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ; ಖಡಕ್ ಎಚ್ಚರಿಕೆ ನೀಡಿದ ನಟ
ಸಲ್ಲು
ರಾಜೇಶ್ ದುಗ್ಗುಮನೆ
|

Updated on: Sep 17, 2024 | 8:46 AM

Share

ನಟ ಸಲ್ಮಾನ್ ಖಾನ್ ಹೆಸರು ಹೇಳಿ ಅನೇಕರು ಮೋಸ ಮಾಡಿದ್ದು ಇದೆ. ಈ ವಿಚಾರದಲ್ಲಿ ಸಲ್ಮಾನ್ ಖಾನ್​ಗೆ ಬೇಸರ ಇದೆ. ಅವರು ಅನೇಕ ಬಾರಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಈಗ ಮತ್ತೆ ಅದೇ ರೀತಿ ಆಗಿದೆ. ಅವರು ಅಮೆರಿಕದಲ್ಲಿ ಪರ್ಫಾರ್ಮ್ ಮಾಡುತ್ತಾರೆ ಎಂದು ಹೇಳಿ ಕೆಲವರು ದುಡ್ಡು ಮಾಡುವ ಕುತಂತ್ರಕ್ಕೆ ಮುಂದಾಗಿದ್ದರು. ಈ ವಿಚಾರವಾಗಿ ಸಲ್ಮಾನ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಅವರು ಎಚ್ಚರಿಕೆ ಕೂಡ ನೀಡಿದ್ದಾರೆ.

ಅಕ್ಟೋಬರ್ 5ರಂದು ಅಮೆರಿಕದಲ್ಲಿ ಸಲ್ಮಾನ್ ಖಾನ್ ಅವರು ಪರ್ಫಾರ್ಮೆನ್ಸ್ ಮಾಡುತ್ತಾರೆ ಎನ್ನುವ ಪೋಸ್ಟರ್​ ವೈರಲ್ ಆಗಿದೆ. ಅಲ್ಲದೆ, ಟಿಕೆಟ್ ಬುಕಿಂಗ್​ಗೂ ಅವಕಾಶ ನೀಡಲಾಗಿದೆ. ಈ ವಿಚಾರವಾಗಿ ಸಲ್ಮಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ. ‘ಸಲ್ಮಾನ್ ಖಾನ್ ಆಗಲಿ ಅವರ ಯಾವುದೇ ಕಂಪನಿ ಆಗಲಿ ಪ್ರೋಗ್ರಾಂಗಳನ್ನು ಆಯೋಜನೆ ಮಾಡುತ್ತಿಲ್ಲ. ಅವರು ಪರ್ಫಾರ್ಮೆನ್ಸ್ ನೀಡುತ್ತಾರೆ ಎಂದು ವರದಿ ಆಗಿದ್ದರೆ ಅದು ಸಂಪೂರ್ಣವಾಗಿ ಸುಳ್ಳು’ ಎಂದಿದ್ದಾರೆ ಸಲ್ಲು.

‘ನನ್ನ ಕಾರ್ಯಕ್ರಮ ಎಂದು ಹೇಳಿ ಮಾಡಲಾಗುತ್ತಿರುವ ಯಾವುದೇ ಇಮೇಲ್​, ಮೆಸೇಜ್​ ಹಾಗೂ ಜಾಹೀರಾತುಗಳನ್ನು ನಂಬಬೇಡಿ. ಸಲ್ಮಾನ್ ಖಾನ್ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರ ಮ್ಯಾನೇಜರ್ ಜಾರ್ಡಿ ಪಟೇಲ್ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಫೇಕ್ ಬುಕಿಂಗ್ ಸೈಟ್ ಬಗ್ಗೆ ಅವರು ವಿವರಣೆ ನೀಡಿದ್ದಾರೆ. ಸದ್ಯ ಸಲ್ಮಾನ್ ಅವರು ಈ ವಿಚಾರವಾಗಿ ಸಿಟ್ಟಾಗಿದ್ದಾರೆ. ತಮ್ಮ ಹೆಸರಲ್ಲಿ ಮೋಸ ನಡೆಯುತ್ತಿರುವುದನ್ನು ಅವರು ಸಹಿಸುತ್ತಿಲ್ಲ.

ಇದನ್ನೂ ಓದಿ: ಸಲ್ಮಾನ್ ಖಾನ್ ಧರಿಸಿದ ವಾಚಿನಲ್ಲಿ 714 ವಜ್ರಗಳು; ವಾಚ್ ಮಾರಿದ್ರೆ ಬರುತ್ತೆ 5 ರೋಲ್ಸ್ ರಾಯ್ಸ್ ಕಾರು

ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 18’ಗೆ ಆ್ಯಂಕರ್ ಆಗಿ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ಸೀಸನ್​ಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಜೊತೆಗೆ ಅವರು ‘ಸಿಖಂದರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್