AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಅತ್ತಿಗೆ ಸಮಂತಾಗೆ ಅಖಿಲ್ ಅಕ್ಕಿನೇನಿ ಅಭಿನಂದನೆ

ನಟಿ ಸಮಂತಾ ರುತ್ ಪ್ರಭು ಅವರ ಮಾಜಿ ಮೈದುನ ಅಖಿಲ್ ಅಕ್ಕಿನೇನಿ, ಸಮಂತಾರವರ ಹೊಸ ಸಿನಿಮಾ 'ಮಾ ಇಂಟಿ ಬಂಗಾರಂ' ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಖಿಲ್-ಸಮಂತಾ ನಡುವಿನ ಉತ್ತಮ ಬಾಂಧವ್ಯವನ್ನು ಇದು ಸಾಬೀತುಪಡಿಸಿದೆ. ಇತ್ತೀಚೆಗೆ ಸಮಂತಾ ತಾವು ಗರ್ಭಿಣಿ ಎಂದು ಘೋಷಿಸಿದ್ದು, ಹೊಸ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಈ ಬೆಳವಣಿಗೆಗಳು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ.

ಮಾಜಿ ಅತ್ತಿಗೆ ಸಮಂತಾಗೆ ಅಖಿಲ್ ಅಕ್ಕಿನೇನಿ ಅಭಿನಂದನೆ
ಸಮಂತಾ-ಅಖಿಲ್
ರಾಜೇಶ್ ದುಗ್ಗುಮನೆ
|

Updated on:Jul 03, 2026 | 8:48 AM

Share

ಮುಖ್ಯಾಂಶಗಳು

  • ಸಮಂತಾ-ಅಖಿಲ್ ಅಕ್ಕಿನೇನಿ ಬಾಂಧವ್ಯ
  • ವಿಚ್ಛೇದನದ ನಂತರವೂ ಮಾಜಿ ಮೈದುನನಿಂದ ಮುಂದುವರಿದ ಗೌರವ ಮತ್ತು ಸ್ನೇಹ
  • 'ಮಾ ಇಂಟಿ ಬಂಗಾರಂ' ಚಿತ್ರಕ್ಕೆ ಅಖಿಲ್ ಪ್ರಶಂಸೆ

ನಟಿ ಸಮಂತಾ ರುತ್ ಪ್ರಭು (Samantha) ಹಾಗೂ ನಾಗ ಚೈತನ್ಯ ಅವರ ವಿಚ್ಛೇದನದ ನಂತರವೂ ಅಕ್ಕಿನೇನಿ ಕುಟುಂಬದ ಜೊತೆಗಿನ ಸಂಬಂಧದ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ವಿಚ್ಛೇದನಕ್ಕೂ ಮುನ್ನ ಸಮಂತಾ ಮತ್ತು ಅವರ ಮೈದುನ ಅಖಿಲ್ ಅಕ್ಕಿನೇನಿ ನಡುವೆ ಅತ್ಯುತ್ತಮ ಬಾಂಧವ್ಯವಿತ್ತು. ಇಬ್ಬರೂ ಸದಾ ಆತ್ಮೀಯ ಸ್ನೇಹಿತರಂತೆ ಇರುತ್ತಿದ್ದರು. ಆದರೆ, ವಿಚ್ಛೇದನದ ನಂತರ ಈ ಬಾಂಧವ್ಯ ಇಂದಿಗೂ ಹಾಗೆಯೇ ಇದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಂತಾಗಿದೆ. ಸಮಂತಾ ಅವರ ಹೊಸ ಚಿತ್ರ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ಅಖಿಲ್ ಮುಕ್ತಕಂಠದಿಂದ ಹಾಡಿ ಹೊಗಳಿದ್ದಾರೆ. ಆ ಮೂಲಕ ಇಂದಿಗೂ ಮಾಜಿ ಅತ್ತಿಗೆಯ ಮೇಲಿನ ಗೌರವ ಮತ್ತು ಪ್ರೀತಿ ಹಾಗೇ ಉಳಿದಿದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಖಿಲ್ ಅಕ್ಕಿನೇನಿ, ಸಮಂತಾ ಅವರ ಹೊಸ ಚಿತ್ರದ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ನಾನು ಇನ್ನೂ ಮಾ ಇಂಟಿ ಬಂಗಾರಂ ಚಿತ್ರವನ್ನು ನೋಡಿಲ್ಲ. ಆದರೆ ಚಿತ್ರದ ಟ್ರೈಲರ್ ನೋಡಿದೆ. ಅದು ನನಗೆ ತುಂಬಾ ಇಷ್ಟವಾಯಿತು. ಸಿನಿಮಾದ ಒಟ್ಟಾರೆ ವೈಬ್ ಮತ್ತು ಕಥೆ ತುಂಬಾ ಆಸಕ್ತಿದಾಯಕವಾಗಿ ಮೂಡಿಬಂದಿದೆ ಅನ್ನಿಸಿತು. ಈ ಅದ್ಭುತ ಪ್ರಯತ್ನಕ್ಕಾಗಿ ಸಮಂತಾ ಮತ್ತು ಚಿತ್ರದ ಇಡೀ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಹೇಳುವ ಮೂಲಕ ಮಾಜಿ ಅತ್ತಿಗೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಮಂತಾ ಅವರ ನಟನೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು. ಕೌಟುಂಬಿಕ ಮೌಲ್ಯಗಳು ಮತ್ತು ಭಾವನಾತ್ಮಕ ಕಥಾಹಂದರವನ್ನು ಹೊಂದಿರುವ ಈ ಚಿತ್ರದ ಟ್ರೈಲರ್ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಮಂತಾ ಅವರ ವಿಭಿನ್ನ ಪಾತ್ರ ಮತ್ತು ನಟನೆಗೆ ಚಿತ್ರರಂಗದ ಗಣ್ಯರಿಂದಲೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲೂ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ

ಸಮಂತಾ ಅವರ ವೈಯಕ್ತಿಕ ಜೀವನದ ಮತ್ತೊಂದು ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅವರು ಶೀಘ್ರವೇ ತಾಯಿ ಆಗುತ್ತಿದ್ದಾರೆ. ಇತ್ತೀಚೆಗೆ ವೇದಿಕೆ ಮೇಲೆಯೇ ತಮ್ಮ ಪ್ರೆಗ್ನೆನ್ಸಿ ವಿಷಯವನ್ನು ಅವರು ಘೋಷಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Fri, 3 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್