AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೂ ಬಲವಾಯ್ತು ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರ; ದೊಡ್ಡ ಸಾಕ್ಷಿ ತಂದ ಫ್ಯಾನ್ಸ್​

ಕಳೆದ ಕೆಲ ದಿನಗಳಿಂದ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ.

ಮತ್ತೂ ಬಲವಾಯ್ತು ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರ; ದೊಡ್ಡ ಸಾಕ್ಷಿ ತಂದ ಫ್ಯಾನ್ಸ್​
ನಾಗ ಚೈತ್ರನ್ಯ - ಸಮಂತಾ
TV9 Web
| Edited By: |

Updated on: Aug 30, 2021 | 9:51 PM

Share

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಜೋರಾಗಿದೆ. ಇತ್ತೀಚೆಗೆ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್​​ನೇಮ್​ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಹೊಸ ಫೋಟೋ ಒಂದು ವೈರಲ್​ ಆಗಿದೆ. ಇದು ಡಿವೋರ್ಸ್​ ವಿಚಾರದ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಕಳೆದ ಕೆಲ ದಿನಗಳಿಂದ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ. ಆಗಸ್ಟ್ 29ರಂದು ನಾಗ ಚೈತನ್ಯ ತಂದೆ ಅಕ್ಕಿನೇನಿ ನಾಗರ್ಜುನ​ ಜನ್ಮದಿನ. ಈ ವಿಶೇಷ ದಿನದಂದು ಸಮಂತಾ ಟ್ವೀಟ್​ ಮಾಡಿ ನಾಗರ್ಜುನ್​ಗೆ ವಿಶ್​ ಮಾಡಿದ್ದರು. ‘ಹುಟ್ಟು ಹಬ್ಬದ ಶುಭಾಶಯಗಳು ಮಾಮ’ ಎಂದಿದ್ದರು ಸಮಂತಾ. ಈ ಮೂಲಕ ಗಾಸಿಪ್​ ಮಂದಿಯ ಬಾಯಿ ಮುಚ್ಚಿಸಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ಮತ್ತೆ ಚಿತ್ರಣ ಬದಲಾಗಿತ್ತು.

ನಾಗಾರ್ಜುನ ಇಡೀ ಕುಟುಂಬದ ಜತೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿದೆ. ಆದರೆ, ಇಲ್ಲಿ ಸಮಂತಾ ಕಾಣಿಸುತ್ತಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಮಂತಾ ಈ ಪಾರ್ಟಿಯಲ್ಲಿ ಕಾಣಿಸಿಕೊಳ್ಳದೆ ಇರಲು ಇವರು ಬೇರೆ ಆಗಿದ್ದೇ ಕಾರಣ ಎಂದು ಕೆಲ ಫ್ಯಾನ್ಸ್​ ವಾದ ಮಂಡಿಸಿದ್ದಾರೆ.

ತಮಿಳಿನ ವಿಘ್ನೇಶ್​ ಶಿವನ್​ ನಿರ್ದೇಶನದ ‘ಕಾದು ವಾಕುಲಾ ರೆಂಡು ಕಾದು’ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ ಹಾಗೂ ಸಮಂತಾ ನಟಿಸುತ್ತಿದ್ದಾರೆ. ಈ ಮೂವರನ್ನು ಇದೇ ಮೊದಲ ಬಾರಿಗೆ ಒಂದೇ ಫ್ರೇಮ್​ನಲ್ಲಿ ತರಲಾಗಿದೆ. ಈ ಚಿತ್ರದ ಶೂಟಿಂಗ್​ನಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ಈ ಕಾರಣಕ್ಕೆ ಅವರು ಪಾರ್ಟಿಗೆ ಹಾಜರಿ ಹಾಕಿಲ್ಲ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಎಲ್ಲರೂ ತಮಗೆ ಬೇಕಾದಂತೆ ಇದನ್ನು ಅರ್ಥೈಸುತ್ತಿದ್ದಾರೆ.

‘ನಾನು ಮುಂದಿನ ಕೆಲ ತಿಂಗಳು ಸಿನಿಮಾ ಕೆಲಸದಿಂದ ಬ್ರೇಕ್​ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಸಮಂತಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇದು ಕೂಡ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿತ್ತು. ಅನೇಕ ವರ್ಷಗಳ ಕಾಲ ಸಮಂತಾ-ನಾಗಚೈತನ್ಯ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಮದುವೆ ಆದರು.

ಇದನ್ನೂ ಓದಿ: ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!