AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

The Family Man 2: ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ತಮಿಳರ ವಿರುದ್ಧವಾಗಿದೆ ಎಂಬುದಕ್ಕಾಗಿ #FamilyMan2_against_Tamils ಎಂಬ ಹ್ಯಾಷ್​ಟ್ಯಾಗ್​ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ತಮಿಳರ ಅಸಮಾಧಾನದ ಬಗ್ಗೆ ಸದ್ಯಕ್ಕಂತೂ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?
ದಿ ಫ್ಯಾಮಿಲಿ ಮ್ಯಾನ್ 2 ವೆಬ್ ಸಿರೀಸ್ - ಸಮಂತಾ ಅಕ್ಕಿನೇನಿ
ಮದನ್​ ಕುಮಾರ್​
| Edited By: |

Updated on: May 20, 2021 | 5:28 PM

Share

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಜನಮೆಚ್ಚುಗೆ ಗಳಿಸಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಅದರಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು. ರಾಜ್​ ಮತ್ತು ಡಿಕೆ ನಿರ್ದೇಶನದ ಆ ಸಿರೀಸ್​ಗೆ ಸೀಕ್ವೆಲ್​ ಬರಲಿದೆ ಎಂದು ಹೇಳಿದಾಗಲೇ ಪ್ರೇಕ್ಷಕರು ಥ್ರಿಲ್​ ಆಗಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ವಿಶೇಷ ಎಂದರೆ, ಈ ಬಾರಿ ನಟಿ ಸಮಂತಾ ಅಕ್ಕಿನೇನಿ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಹಾಗಾಗಿ ಜನರ ನಿರೀಕ್ಷೆ ಹೆಚ್ಚಿದೆ. ಆದರೆ ಇತ್ತೀಚೆಗೆ ಟ್ರೇಲರ್​ ಬಿಡುಗಡೆ ಆಗಿದ್ದು, ಸಮಂತ್​ ಪಾತ್ರದಿಂದಾಗಿ ವಿವಾದ ಶುರುವಾಗಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ಸಮಂತಾ ಎಲ್​ಟಿಟಿಇ ಸಂಘಟನೆಯ ಸದಸ್ಯಳಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಈ ವಿಚಾರ ಖಚಿತವಾಗಿದೆ. ಕಥೆಯ ಬಹುಪಾಲು ದೃಶ್ಯಗಳು ತಮಿಳುನಾಡಿನಲ್ಲಿ ನಡೆಯಲಿವೆ. ತಮಿಳು ಸಂಭಾಷಣೆಗಳು ಕೂಡ ಇವೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಿರುವುದಕ್ಕೆ ತಮಿಳುನಾಡಿನಾದ್ಯಂತ ಅನೇಕರು ಸಮಂತಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಈ ವಿವಾದ ದೊಡ್ಡದಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ.

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸಿರೀಸ್​ ತಮಿಳರ ವಿರುದ್ಧವಾಗಿದೆ ಎಂಬುದಕ್ಕಾಗಿ #FamilyMan2_against_Tamils ಎಂಬ ಹ್ಯಾಷ್​ಟ್ಯಾಗ್​ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ಸಮಂತಾ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ ದಿ ಫ್ಯಾಮಿಲಿ ಮ್ಯಾನ್​ 2 ಮೂಲಕ ಅವರು ವಿವಾದ ಮಾಡಿಕೊಂಡಿದ್ದಾರೆ. ತಮಿಳರ ಅಸಮಾಧಾನದ ಬಗ್ಗೆ ಸದ್ಯಕ್ಕಂತೂ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅಮೇಜಾನ್​ ಪ್ರೈಂನಲ್ಲಿ ಜೂ.4ರಂದು ‘ದಿ ಫ್ಯಾಮಿಲಿ ಮ್ಯಾನ್​ 2’ ವೀಕ್ಷಣೆಗೆ ಲಭ್ಯವಾಗಲಿದೆ. ದೇಶದ ಹಲವು ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿದ್ದು, ಜನರು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ವೇಳೆಯಲ್ಲಿ ಮನರಂಜನೆಗೆ ಬಹುತೇಕರು ಓಟಿಟಿ ಪ್ಲಾಟ್​ಫಾರ್ಮ್​ ಮೊರೆಹೋಗಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ‘ದಿ ಫ್ಯಾಮಿಲಿ ಮ್ಯಾನ್​ 2’ ಬಿಡುಗಡೆ ಆಗುತ್ತಿರುವುದರಿಂದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

Samantha Akkineni: ಸಂಕಷ್ಟದಲ್ಲಿದ್ದ ಮಹಿಳಾ ಆಟೋ ಡ್ರೈವರ್​​ಗೆ ದುಬಾರಿ ಕಾರ್​ ಗಿಫ್ಟ್​ ನೀಡಿದ ನಟಿ ಸಮಂತಾ

Samantha Yoga : ಸೌತ್ ನಟಿ ಸಮಂತಾ ಅಕ್ಕಿನೇನಿ ಯೋಗಾಸನ ಮಾಡುವ ಫೋಟೋಗಳು ಸಿಕ್ಕಾ ಪಟ್ಟೆ ವೈರಲ್!

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು