Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಂಡಿದ್ದಾರೆ. ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ
ನಾಗ ಚೈತನ್ಯ - ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on:Oct 02, 2021 | 5:10 PM

ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಂಡಿದ್ದಾರೆ. ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಎಂಬ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಇಂದು (ಅ.2) ನಾಗ ಚೈತನ್ಯ ಮತ್ತು ಸಮಂತಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ವಿಚ್ಛೇದನದ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ.

‘ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿ ಅಂತ ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ ಅಂತ ಕೇಳಿಕೊಳ್ಳುತ್ತೇವೆ’ ಎಂದು ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

View this post on Instagram

A post shared by S (@samantharuthprabhuoffl)

2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಲಾಗಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಈ ಜೋಡಿ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಾಗಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ತೀವ್ರ ನಿರಾಸೆ ಉಂಟು ಮಾಡಿದೆ.

ಈ ಸ್ಟಾರ್​ ಜೋಡಿಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಜನರು ಹಲವು ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಮಂತಾ ಅವರದ್ದೇ ತಪ್ಪು ಎಂಬುದು ಕೆಲವರ ಅಭಿಪ್ರಾಯ. ಹಾಗಾಗಿ ಅವರ ವಿರುದ್ಧ ಟೀಕೆ ವ್ಯಕ್ತವಾಗುವುದು ಸಹಜ. ಅದನ್ನು ಮೊದಲೇ ಅರಿತಿರುವ ಸಮಂತಾ ಅವರು ತಮ್ಮ ಪೋಸ್ಟ್​ಗೆ ಕಮೆಂಟ್​ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಆದರೆ ನಾಗ ಚೈತನ್ಯ ಅವರು ಹೀಗೆ ಮಾಡಿಲ್ಲ. ಅವರ ಪೋಸ್ಟ್​ಗೆ ಎಲ್ಲರೂ ಕಮೆಂಟ್​ ಮಾಡುತ್ತಿದ್ದಾರೆ. ‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ’ ಎಂದು ಸಲಹೆ ಕೂಡ ಅಭಿಮಾನಿಗಳಿಂದ ಸಿಗುತ್ತಿದೆ. ಸದ್ಯಕ್ಕಂತೂ ನಾಗಚೈತನ್ಯ ಇದಕ್ಕೆ ಏನೂ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ

ನಾಗ ಚೈತನ್ಯ ಜತೆ ಸಾಯಿ ಪಲ್ಲವಿ ಲಿಪ್​ ಲಾಕ್​ ಮಾಡಿದ್ದು ನಿಜವೇ? ‘ಲವ್​ ಸ್ಟೋರಿ’ ಹಿಂದಿನ ಸತ್ಯ ಬಾಯ್ಬಿಟ್ಟ ನಟಿ

Published On - 3:46 pm, Sat, 2 October 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ