ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಹೆಚ್ಚು ಆ್ಯಕ್ಟೀವ್​ ಆಗಿರೋದು ಟಾಲಿವುಡ್​ನಲ್ಲಿ. ಹೀಗಾಗಿ, ಅನೇಕ ಬಾರಿ ಇಬ್ಬರೂ ಒಟ್ಟಿಗೆ ಸಿಗೋ ಸಾಧ್ಯತೆ ಇರುತ್ತದೆ. ಇದನ್ನು ಸಮಂತಾ ಅವಾಯ್ಡ್​ ಮಾಡೋಕೆ ನೋಡುತ್ತಿದ್ದಾರೆ.

ವಿಚ್ಛೇದನದ ನಂತರ ಮೊದಲ ಬಾರಿಗೆ ಒಂದೇ ಕಡೆ ಕಾಣಿಸಿಕೊಂಡ ಸಮಂತಾ-ನಾಗ ಚೈತನ್ಯ; ಹೇಗಿತ್ತು ರಿಯಾಕ್ಷನ್​?
ಸಮಂತಾ-ನಾಗ ಚೈತನ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2021 | 8:36 AM

ಸಮಂತಾ ಹಾಗೂ ನಾಗ ಚೈತನ್ಯ (Samantha And Naga Chaitanya) ಇಬ್ಬರೂ ಪ್ರೀತಿಸಿ ಮದುವೆ ಆದವರು. ಆದರೆ, ದಾಂಪತ್ಯ ಜೀವನ ಹೆಚ್ಚು ವರ್ಷ ಬರಲಿಲ್ಲ. ಕೇವಲ ನಾಲ್ಕು ವರ್ಷಕ್ಕೆ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈಗ ಇಬ್ಬರೂ ತಮ್ಮದೇ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಮಂತಾ ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅವರು ಹೆಜ್ಜೆ ಹಾಕಿದ ವಿಶೇಷ ಸಾಂಗ್​ ‘ಹೂ ಅಂತೀಯಾ ಮಾವ, ಉಹೂ ಅಂತೀಯಾ ಮಾವ..’ ಸೂಪರ್​​ ಹಿಟ್​ ಆಗಿದೆ. ಈಗ ಸಮಂತಾ ಹಾಗೂ ನಾಗ ಚೈತನ್ಯ ಒಂದೇ ಕಡೆಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಈಗ ಸಾಕಷ್ಟು ಚರ್ಚೆ ಆಗುತ್ತಿದೆ.

ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಹೆಚ್ಚು ಆ್ಯಕ್ಟೀವ್​ ಆಗಿರೋದು ಟಾಲಿವುಡ್​ನಲ್ಲಿ. ಹೀಗಾಗಿ, ಅನೇಕ ಬಾರಿ ಇಬ್ಬರೂ ಎದುರು-ಬದುರು ಬರೋ ಸಾಧ್ಯತೆ ಇರುತ್ತದೆ. ಇದನ್ನು ಸಮಂತಾ ಅವಾಯ್ಡ್​ ಮಾಡೋಕೆ ನೋಡುತ್ತಿದ್ದಾರೆ. ವಿಚ್ಛೇದನ ಪಡೆದ ನಂತರ ಇಬ್ಬರೂ ಗೆಳೆಯರಾಗಿ ಇರುತ್ತೇವೆ ಎಂದು ಹೇಳಿಕೊಂಡಿದ್ದರು. ಈ ಕಾರಣಕ್ಕೆ, ಎದುರು ಸಿಕ್ಕರೆ ಮಾತನಾಡಲೇ ಬೇಕು. ಈಗ ಇಬ್ಬರೂ ಒಂದೇ ಕಡೆ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ನಾಗ ಚೈತನ್ಯ ಅವರು ‘ಬಂಗಾರ್ರಾಜು’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅಕ್ಕಿನೇನಿ ನಾಗಾರ್ಜುನ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕಾಗಿ ಅವರು ರಾಮಾ ನಾಯ್ಡು ಸ್ಟುಡಿಯೋಗೆ ತೆರಳಿದ್ದರು. ಈ ವೇಳೆ ಸಮಂತಾ ಕೂಡ ಅಲ್ಲಿಯೇ ಇದ್ದರು ಎನ್ನಲಾಗಿದೆ. ‘ಯಶೋಧಾ’ ಚಿತ್ರದ ಶೂಟಿಂಗ್​ಗಾಗಿ ಅವರು ರಾಮಾ ನಾಯ್ಡು ಸ್ಟುಡಿಯೋಗೆ ತೆರಳಿದ್ದರು. ಹಾಗಾದರೆ, ಇಬ್ಬರೂ ಭೇಟಿ ಆದರಾ? ಆ ಪ್ರಶ್ನೆಗೆ ಇಲ್ಲ ಎನ್ನುತ್ತಿವೆ ಮೂಲಗಳು.

ಸಮಂತಾ ಹಾಗೂ ನಾಗ ಚೈತನ್ಯ ಒಂದೇ ಕಡೆ ಸೇರಿದ್ದರೂ ಕೂಡ ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ. ಇಬ್ಬರೂ ಸಿನಿಮಾ ಪೂರ್ಣಗೊಂಡ ನಂತರದಲ್ಲಿ ಕಾರು ಹತ್ತಿ ಮನೆಗೆ ತೆರಳಿದ್ದಾರೆ ಎಂದು ವರದಿ ಆಗಿದೆ. ಸಮಂತಾ ಹಾಗೂ ನಾಗ ಚೈತನ್ಯ ಒಟ್ಟಾಗಿ ಸೇರಿ ಮಾತುಕತೆ ನಡೆಸಬೇಕಿತ್ತು ಎನ್ನುವ ಅಭಿಪ್ರಾಯ ಅಭಿಮಾನಿ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

Samantha: ಗರ್ಲ್ಸ್​ ಗ್ಯಾಂಗ್​ ಜತೆ ಸಮಂತಾ ಗೋವಾ ಟ್ರಿಪ್​; ವೈರಲ್​ ಆಯ್ತು ಫೋಟೋ

Published On - 5:08 pm, Tue, 28 December 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?