‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

‘ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’; ವಿಚ್ಛೇದನದ ದಿನವೇ ನಾಗ ಚೈತನ್ಯಗೆ ಹೊಸ ಸಲಹೆ
ನಾಗ ಚೈತನ್ಯ-ಸಾಯಿ ಪಲ್ಲವಿ-ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 02, 2021 | 4:27 PM

ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನದಲ್ಲಿ ಬಿರುಕಾಗಿದೆ ಎಂಬ ವದಂತಿ ನಿಜವಾಗಿದೆ. ಇಬ್ಬರೂ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್​ ವಿಚಾರ ಅಧಿಕೃತ ಮಾಡಿದ್ದಾರೆ. ಇಷ್ಟು ದಿನ ಸುಳ್ಳಾಗಲಿ ಎಂದು ಅಭಿಮಾನಿಗಳು ಕೋರುತ್ತಾ ಬಂದಿದ್ದ ಸುದ್ದಿ ನಿಜವಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ನೀವು ಈ ರೀತಿ ಮಾಡಬಾರದಿತ್ತು ಎಂದು ಫ್ಯಾನ್ಸ್​ ಬೇಸರ ಹೊರ ಹಾಕಿದ್ದಾರೆ.

ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನುವುದನ್ನು ಪುಷ್ಟೀಕರಿಸುವ ಸಾಕಷ್ಟು ಘಟನೆಗಳು ನಡೆದಿದ್ದವು. ಮೊಟ್ಟ ಮೊದಲ ಬಾರಿಗೆ ಸಮಂತಾ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಿಂದ ಅಕ್ಕಿನೇನಿ ಸರ್​ ನೇಮ್​ ಅನ್ನು ತೆಗೆದು ಹಾಕಿದ್ದರು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಅಕ್ಕಿನೇನಿ ಕುಟುಂಬದಿಂದ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.

ಆಮಿರ್ ಖಾನ್​ ಅವರು ನಾಗ ಚೈತನ್ಯ ನಟನೆಯ ಲವ್​​ಸ್ಟೋರಿ ಸಿನಿಮಾ ಪ್ರಚಾರಕ್ಕೆ ಬಂದಿದ್ದರು. ಆಮಿರ್​ ಖಾನ್​ ದಕ್ಷಿಣ ಭಾರತದ ಸಿನಿಮಾಗೆ ಪ್ರಚಾರ ನೀಡುತ್ತಾರೆ ಎಂದರೆ ಅದು ನಿಜಕ್ಕೂ ದೊಡ್ಡವಿಚಾರ. ಈ ಕಾರಣಕ್ಕೆ ಅಕ್ಕಿನೇನಿ ಕುಟುಂಬದಲ್ಲಿ ವಿಶೇಷ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಕಿನೇನಿ ಕುಟುಂಬದ ಬಹುತೇಕರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಸಮಂತಾ ಮಾತ್ರ ಈ ಫೋಟೋದಲ್ಲಿ ಇರಲಿಲ್ಲ. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.

ಈ ರೀತಿಯ ಘಟನೆಗಳು ನಡೆದೇ ಇದ್ದವು. ಈಗ ಸಮಂತಾ ಹಾಗೂ ನಾಗ ಚೈತನ್ಯ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಈ ವಿಚಾರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದೆ. ಅಲ್ಲದೆ, ಈ ಸ್ಟಾರ್​ ಜೋಡಿ ಈ ರೀತಿ ಮಾಡಬಾರದಿತ್ತು ಎಂದು ಬೇಸರ ಹೊರ ಹಾಕುತ್ತಿದ್ದಾರೆ ಅಭಿಮಾನಿಗಳು. ಕೆಲವರು ‘ಲವ್​ ಸ್ಟೋರಿ’ ಸಿನಿಮಾದ ನಾಯಕಿ ಸಾಯಿ ಪಲ್ಲವಿಯನ್ನು ಮದುವೆಯಾಗುವಂತೆ ನಾಗಚೈತನ್ಯಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಅಕ್ಕಿನೇನಿ ಬಗ್ಗೆ ಹುಟ್ಟಿಕೊಂಡಿದೆ ಹೊಸದೊಂದು ಸುದ್ದಿ; ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ?

Samantha Naga Chaitanya Divorce: ಸಮಂತಾ-ನಾಗ ಚೈತನ್ಯ ಡಿವೋರ್ಸ್​; ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯ

Published On - 4:25 pm, Sat, 2 October 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ