ನಾಲ್ಕೇ ವರ್ಷಕ್ಕೆ ಅಂತ್ಯವಾಯ್ತು ಸಮಂತಾ-ನಾಗ ಚೈತನ್ಯ ದಾಂಪತ್ಯ; ಮದುವೆಗೆ ಖರ್ಚಾಗಿತ್ತು 10 ಕೋಟಿ ರೂ.!

ನಾಗ ಚೈತನ್ಯ ಮತ್ತು ಸಮಂತಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ವಿಚ್ಛೇದನದ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ. ನಾಲ್ಕು ವರ್ಷ ಜೊತೆಯಾಗಿ ಸಂಸಾರ ಮಾಡಿದ್ದ ಈ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಿದೆ.

ನಾಲ್ಕೇ ವರ್ಷಕ್ಕೆ ಅಂತ್ಯವಾಯ್ತು ಸಮಂತಾ-ನಾಗ ಚೈತನ್ಯ ದಾಂಪತ್ಯ; ಮದುವೆಗೆ ಖರ್ಚಾಗಿತ್ತು 10 ಕೋಟಿ ರೂ.!
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ


ಒಂದಷ್ಟು ದಿನಗಳಿಂದ ಈಚೆಗೆ ನಟಿ ಸಮಂತಾ ಅಕ್ಕಿನೇನಿ ಅವರ ಪ್ರತಿಯೊಂದು ನಡೆ ಕೂಡ ಅನುಮಾನ ಮೂಡಿಸುವಂತಿತ್ತು. ಆ ಅನುಮಾನ ಈಗ ನಿಜವಾಗಿದೆ. ನಾಗ ಚೈತನ್ಯ ಜೊತೆಗೆ ಅವರು ಮನಸ್ತಾಪ ಮಾಡಿಕೊಂಡಿದ್ದಾರೆ. ಈ ಸ್ಟಾರ್​ ಜೋಡಿಯ ದಾಂಪತ್ಯ ಅಂತ್ಯವಾಗಿದೆ. ಯಾವುದೋ ವಿಚಾರಕ್ಕೆ ಈ ದಂಪತಿ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿತ್ತು. ವಿಚ್ಛೇದನ ಪಡೆಯಬೇಕೆಂಬ ಮಟ್ಟಕ್ಕೂ ಸಮಂತಾ ಮತ್ತು ನಾಗ ಚೈತನ್ಯ ಹೋಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಕಡೆಗೂ ಅದು ನಿಜವಾಗಿದೆ. ಸಮಂತಾ ಮತ್ತು ನಾಗ ಚೈತನ್ಯ ಅವರು ತಮ್ಮ ಡಿವೋರ್ಸ್​ ವಿಚಾರವನ್ನು ಅಧಿಕೃತಗೊಳಿಸಿದ್ದಾರೆ.

ಅ.6ರಂದು ನಾಗ ಚೈತನ್ಯ ಮತ್ತು ಸಮಂತಾಗೆ ಮದುವೆ ವಾರ್ಷಿಕೋತ್ಸವ ನಡೆಯಬೇಕಿತ್ತು. ನಾಲ್ಕನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿಯನ್ನು ಈ ಜೋಡಿ ಹೇಗೆ ಆಚರಿಸಿಕೊಳ್ಳಬಹುದು ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಈ ಹಿಂದೆ ಪತಿಗೆ ಸಂಬಂಧಿಸಿದ ಅನೇಕ ಫೋಟೋ ಮತ್ತು ವಿಡಿಯೋಗಳನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸಮಂತಾ ಶೇರ್​ ಮಾಡಿಕೊಳ್ಳುತ್ತಿದ್ದರು. ಆದರೆ ಕಳೆದ ಕೆಲವು ತಿಂಗಳಿನಿಂದ ಅಂಥ ಯಾವುದೇ ಫೋಟೋವನ್ನೂ ಸಮಂತಾ ಪೋಸ್ಟ್​ ಮಾಡಿಲ್ಲ. ಕೊನೇ ಪಕ್ಷ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ದಿನವಾದರೂ ಪತಿಯ ಫೋಟೋ ಪೋಸ್ಟ್​ ಮಾಡುತ್ತಾರಾ ಎಂಬ ಪ್ರಶ್ನೆಯನ್ನು ಮನದಲ್ಲಿ ಇಟ್ಟುಕೊಂಡು ಅವರ ಫ್ಯಾನ್ಸ್​ ಕಾಯುತ್ತಿದ್ದರು. ಆದರೆ ಆ ದಿನ ಬರುವ ಮುನ್ನವೇ ಶಾಕಿಂಗ್​ ಸುದ್ದಿ ಹೊರಬಿದ್ದಿದೆ.

ಅಚ್ಚರಿ ಎಂದರೆ ಸಮಂತಾ ಮತ್ತು ನಾಗ ಚೈತನ್ಯ ಅವರ ಮದುವೆ ಬಹಳ ಅದ್ದೂರಿಯಾಗಿ ನಡೆದಿತ್ತು. 2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಲಾಗಿತ್ತು. ಅದಕ್ಕಾಗಿ ಈ ಜೋಡಿ ಖರ್ಚು ಮಾಡಿದ್ದು ಬರೋಬ್ಬರಿ 10 ಕೋಟಿ ರೂ. ಎನ್ನುತ್ತಿವೆ ಮೂಲಗಳು. ಇಷ್ಟು ದೊಡ್ಡ ಮೊತ್ತ ಖರ್ಚು ಮಾಡಿ ಆದ ಮದುವೆಯು ಕೇವಲ 4 ವರ್ಷದಲ್ಲಿ ಮುರಿದು ಬೀಳಲಿದೆ ಎಂದು ಯಾರೂ ಊಹಿಸಿರಲಿಲ್ಲ.

‘ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿ ಅಂತ ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ ಅಂತ ಕೇಳಿಕೊಳ್ಳುತ್ತೇವೆ’ ಎಂದು ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:

ಸಮಂತಾ-ನಾಗ ಚೈತನ್ಯ ಫ್ಯಾಮಿಲಿಯ ಇನ್ನೊಂದು ಗುಟ್ಟು ಬಯಲು; ಮಗನ ಸಿನಿಮಾಗೆ ನಾಗಾರ್ಜುನ ತಲೆ ಹಾಕುತ್ತಿಲ್ಲ

ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

Click on your DTH Provider to Add TV9 Kannada