ಸಮಂತಾ-ವಿಜಯ್ ದೇವರಕೊಂಡ ಅಪಘಾತ ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್
ಸಿನಿಮಾ ಶೂಟಿಂಗ್ ಮುಗಿಯಿತು ಎನ್ನುವಾಗಲೇ ಫೇಕ್ ಸುದ್ದಿ ಹರಡಿತ್ತು. ಈ ರೀತಿಯ ಸುದ್ದಿ ಹಬ್ಬಿಸಿದ್ದು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಸಮಂತಾ (Samantha) ಹಾಗೂ ವಿಜಯ್ ದೇವರಕೊಂಡ (Vijay Devarakonda) ‘ಖುಷಿ’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಇದ್ದರು. ಹೀಗಿರುವಾಗಲೇ ಒಂದು ಬ್ಯಾಡ್ನ್ಯೂಸ್ ಕೇಳಿ ಬಂದಿತ್ತು. ಅವರಿಗೆ ಅಪಘಾತವಾಗಿದೆ ಎನ್ನುವ ಶಾಕಿಂಗ್ ವಿಚಾರ ಹೊರಬಿದ್ದಿತ್ತು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಆತಂಕಗೊಂಡಿದ್ದರು. ಅವರಿಗೆ ಏನಾಯಿತು ಎನ್ನುವ ಚಿಂತೆಯಲ್ಲೇ ದಿನ ಕಳೆದಿದ್ದರು. ಆದರೆ, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ನಂತರ ಗೊತ್ತಾಗಿದೆ. ಈ ವಿಚಾರ ಕೇಳಿ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸಮಂತಾಗೆ ದೊಡ್ಡ ಅಭಿಮಾನಿ ಬಳಗ ಇದೆ. ವಿಜಯ್ ದೇವರಕೊಂಡ ಕೂಡ ಸಖತ್ ಫೇಮಸ್. ‘ಮಹಾನಟಿ’ ಬಳಿಕ ಇಬ್ಬರೂ ‘ಖುಷಿ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇವರ ಕಾಂಬಿನೇಷನ್ ನೋಡೋಕೆ ಫ್ಯಾನ್ಸ್ ಕಾದು ಕೂತಿದ್ದಾರೆ. ಸಿನಿಮಾ ಶೂಟಿಂಗ್ ಮುಗಿಯಿತು ಎನ್ನುವಾಗಲೇ ಫೇಕ್ ಸುದ್ದಿ ಹರಡಿತ್ತು. ಈ ರೀತಿಯ ಸುದ್ದಿ ಹಬ್ಬಿಸಿದ್ದು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಹಬ್ಬಿದ್ದ ವದಂತಿ ಏನು?
ಸಮಂತಾ ಅವರು ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸೋಕೆ ಹಿಂಜರಿಕೆ ಮಾಡುವುದಿಲ್ಲ. ವಿಜಯ್ ದೇವರಕೊಂಡ ಕೂಡ ಇದೇ ಸಾಲಿಗೆ ಸೇರುತ್ತಾರೆ. ‘ಖುಷಿ’ ಸಿನಿಮಾದಲ್ಲಿ ಕಾರು ಚೇಸಿಂಗ್ ದೃಶ್ಯವೊಂದಿದೆ. ಇದರ ಶೂಟಿಂಗ್ ಕಾಶ್ಮೀರದ ಪಹಲ್ಗಮ್ನಲ್ಲಿ ನಡೆಯುತ್ತಿತ್ತು. ಈ ವೇಳೆ ಕಾರು ದೊಡ್ಡ ಕೆರೆಯಲ್ಲಿ ಬಿದ್ದಿದ್ದು, ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ ಎಂದು ವರದಿ ಆಗಿತ್ತು.
ಮುಗಿದಿದೆ ಮೊದಲ ಶೆಡ್ಯೂಲ್
‘ಖುಷಿ’ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಈ ಶೂಟಿಂಗ್ ಮುಗಿದಿದೆ. ಈ ಚಿತ್ರದ ಬಹುತೇಕ ಕಥೆ ಈ ಭಾಗದಲ್ಲೇ ಸಾಗಲಿದೆ. ಈ ಕಾರಣಕ್ಕೆ ಹೆಚ್ಚಿನ ಭಾಗದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದೆ ಎನ್ನಲಾಗಿದೆ.
ಪ್ಯಾನ್ ಇಂಡಿಯಾ ಸಿನಿಮಾ
ಸದ್ಯ ಪ್ಯಾನ್ ಇಂಡಿಯಾ ಟ್ರೆಂಡ್ ಜೋರಾಗಿದೆ. ಈ ಸಿನಿಮಾ ಕೂಡ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರ ರಿಲೀಸ್ ಆಗಲಿದೆ. ಹಿಂದಿಯಲ್ಲಿ ಈ ಸಿನಿಮಾವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಅನ್ನೋದನ್ನು ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.
ಇದನ್ನೂ ಓದಿ: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ವಿಜಯ್ ದೇವರಕೊಂಡ ಹಾಗೂ ಸಮಂತಾ ಮಾತ್ರವಲ್ಲದೆ, ಜಯರಾಮ್, ಮುರಳಿ ಶರ್ಮಾ, ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ಯ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ್ರಕ್ಕಿದೆ. ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ನಿರ್ವಾಣ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.