ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ.

ನಾಗ ಚೈತನ್ಯ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ ಸಮಂತಾ; ಇಲ್ಲಿದೆ ಸಾಕ್ಷ್ಯ
ಸಮಂತಾ ಅಕ್ಕಿನೇನಿ, ನಾಗ ಚೈತನ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 28, 2021 | 5:48 PM

ಸಮಂತಾ ಅವರು ನಾಗ ಚೈತನ್ಯ ಅವರಿಂದ ದೂರವಾದ ನಂತರ ಸಾಕಷ್ಟು ಕಡೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ರಿಷಿಕೇಷಕ್ಕೆ ಭೇಟಿ ನೀಡಿದ್ದ ಅವರು, ಈಗ ದುಬೈಗೆ ಹಾರಿದ್ದಾರೆ. ಈ ಮೂಲಕ ದಾಂಪತ್ಯದಲ್ಲಿ ಆದ ಕಹಿ ಘಟನೆಯನ್ನು ಅವರು ಮರೆಯೋಕೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದಕ್ಕೆ ಹೆಚ್ಚು ಸಮಯ ಬೇಕು. ಈ ಮಧ್ಯೆ ಸಮಂತಾ ಅವರು ನಾಗ ಚೈತನ್ಯ ಜತೆಗಿನ ನೆನಪನ್ನು ಸಂಪೂರ್ಣವಾಗಿ ಡಿಲೀಟ್​ ಮಾಡಿದ್ದಾರೆ. ಇದನ್ನು ನೋಡಿದ ಸ್ಯಾಮ್​ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ.

ಸಮಂತಾ ಮತ್ತು ನಾಗ ಚೈತನ್ಯ ಅವರ ನಡುವೆ ಏಕಾಏಕಿ ಪ್ರೀತಿ ಹುಟ್ಟಿಲ್ಲ. ಇದಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿದ್ದರು. ಅಲ್ಲಿ ಪರಿಚಯ ಬೆಳೆದು ಅದು ಗೆಳೆತನವಾಗಿ ಮಾರ್ಪಟ್ಟು ನಂತರ ಬಹುಕಾಲ ಪ್ರೀತಿಸಿ ನಾಲ್ಕು ವರ್ಷದ ಹಿಂದೆ ಮದುವೆ ಆಗಿದ್ದರು. ಇಷ್ಟು ದೀರ್ಘ ಪಯಣದಲ್ಲಿ ಅವರು ನಾಗ ಚೈತನ್ಯ ಜತೆಗೆ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಇದರಲ್ಲಿ ಆಯ್ದ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದರು.

ಈಗ ಸಮಂತಾ ನಾಗ ಚೈತನ್ಯ ಜತೆಗೆ ಇದ್ದ ಇತ್ತೀಚಿಗಿನ ಎಲ್ಲಾ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಿಂದ ಡಿಲೀಟ್​ ಮಾಡಿದ್ದಾರೆ. ಈ ಮೂಲಕ ಅವರ ಜತೆಗಿನ ನೆನಪನ್ನು ಮರೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಇಬ್ಬರೂ ಪರಸ್ಪರ ಫಾಲೋ ಮಾಡುತ್ತಿದ್ದಾರೆ.

ವಿಚ್ಛೇದನದ ಬಗ್ಗೆ ಘೋಷಣೆ ಮಾಡಿದಾಗಿನಿಂದಲೂ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಿವಿಧ ರೀತಿಯ ಸಾಲುಗಳನ್ನು ಕೂಡ ಹಾಕುತ್ತಿದ್ದಾರೆ. ಇತ್ತೀಚೆಗೆ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಪೋಸ್ಟ್ ಮಾಡಿದ್ದರು. ‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಮಾಜಿ ಪತಿಯಿಂದ ತಪ್ಪಿದ್ದ ಆಫರ್​ ಸಮಂತಾಗೆ ಮತ್ತೆ ಸಿಕ್ತು; ಮದುವೆ ತಯಾರಿಯೇ ಇದಕ್ಕೆ ಕಾರಣ

ಮಗಳ ಮದುವೆ ಬಗ್ಗೆ ಚಿಂತೆ ಮಾಡುವ ಪಾಲಕರಿಗೆ ಸಮಂತಾ ವಿಶೇಷ ಮನವಿ 

Published On - 1:52 pm, Thu, 28 October 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ