AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ವೇಳೆ ಸಂತ್ರಸ್ತೆ ಅನ್ನೋ ರೀತಿ ಬಿಂಬಿಸಿಕೊಂಡಿದ್ರಾ ಸಮಂತಾ? ಆಪ್ತೆಯಿಂದಲೇ ಶಾಕಿಂಗ್ ಹೇಳಿಕೆ

ಸಮಂತಾ 'ದಿ ಫ್ಯಾಮಿಲಿ ಮ್ಯಾನ್' ನಿರ್ದೇಶಕ ರಾಜ್ ನಿಡಿಮೋರು ಅವರನ್ನು ವರಿಸಿದ್ದಾರೆ. ಇದರ ಬೆನ್ನಲ್ಲೇ ಅವರ ಮೇಕಪ್ ಆರ್ಟಿಸ್ಟ್ ಸಾಧ್ನಾ ಸಿಂಗ್ ಪರೋಕ್ಷ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಸಮಂತಾ ಅವರ ನಡವಳಿಕೆಯನ್ನು ಪ್ರಶ್ನಿಸಿದೆ.ನಾಗ ಚೈತನ್ಯ ದೋಷಿ ಎಂಬ ಹಿಂದಿನ ಮಾತುಗಳಿಗೆ ಈಗ ತಿರುವು ಸಿಕ್ಕಿದೆ.

ವಿಚ್ಛೇದನದ ವೇಳೆ ಸಂತ್ರಸ್ತೆ ಅನ್ನೋ ರೀತಿ ಬಿಂಬಿಸಿಕೊಂಡಿದ್ರಾ ಸಮಂತಾ? ಆಪ್ತೆಯಿಂದಲೇ ಶಾಕಿಂಗ್ ಹೇಳಿಕೆ
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Dec 02, 2025 | 10:59 AM

Share

ಸಮಂತಾ (Samantha) ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದಾಗ ಆರೋಪಗಳೆಲ್ಲ ನಾಗ ಚೈತನ್ಯ ಅವರ ಮೇಲೆ ಇತ್ತು. ಈ ವಿಚ್ಛೇದನಕ್ಕೆ ನಾಗ ಚೈತನ್ಯ ಕಾರಣ ಎಂಬ ಮಾತುಗಳು ಕೇಳಿ ಬಂದವು. ಈಗ ಸಮಂತಾಗೆ ಎರಡನೇ ವಿವಾಹ ಆಗಿದೆ. ‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕ ರಾಜ್ ಜೊತೆ ಸಮಂತಾ ಹೊಸ ಬಾಳು ಆರಂಭಿಸಿದ್ದಾರೆ. ಇವರ ಮದುವೆಯ ಬೆನ್ನಲ್ಲೇ ಸಮಂತಾ ಆಪ್ತೆ ಎನಿಸಿಕೊಂಡಿದ್ದ ಮೇಕಪ್ ಆರ್ಟಿಸ್ಟ್ ಸಾಧ್ನಾ ಸಿಂಗ್ ಮಾಡಿದ ಪೋಸ್ಟ್ ವೈರಲ್ ಆಗಿದೆ. ಅವರು ಎಲ್ಲಿಯೂ ಹೆಸರು ಉಲ್ಲೇಖಿಸಿಲ್ಲ. ಆದರೆ, ಪರೋಕ್ಷ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ.

ಸಮಂತಾ ಮತ್ತು ರಾಜ್ ನಿಡಿಮೋರು ಸೋಮವಾರ (ಡಿಸೆಂಬರ್ 1) ವಿವಾಹವಾದರು. ಕೊಯಮತ್ತೂರಿನ ಇಶಾ ಫೌಂಡೇಷನ್​ನಲ್ಲಿ ಈ ಮದುವೆ ನಡೆಯಿತು. ಸಮಂತಾ ಹಾಗೂ ರಾಜ್ ಭೇಟಿ ಆಗಿದ್ದು 2019ರಲ್ಲಿ. ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದಿದ್ದು 2021ರಲ್ಲಿ. ಹೀಗಾಗಿ, ರಾಜ್ ಮತ್ತು ಸಮಂತಾ ಪರಿಚಯವೇ ಅವರ ದಾಂಪತ್ಯಕ್ಕೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಈ ಚರ್ಚೆ ಬೆನ್ನಲ್ಲೇ ಸಮಂತಾ ಮೇಕಪ್ ಆರ್ಟಿಸ್ಟ್ ಮಾಡಿರೋ ಪೋಸ್ಟ್ ಗಮನ ಸೆಳೆದಿದೆ. ‘ವಿಲನ್ ಆದವನು ತಾನೇ ಸಂತ್ರಸ್ತ ಎಂದು ಚೆನ್ನಾಗಿ ನಾಟಕ ಮಾಡುತ್ತಾನೆ’ ಎಂಬರ್ಥ ಬರುವ ರೀತಿಯಲ್ಲಿ ಸಾಧ್ನಾ ಪೋಸ್ಟ್ ಮಾಡಿದ್ದಾರೆ. ಇದು ಸಮಂತಾಗೆ ಹೇಳಿದ್ದು ಎನ್ನಲಾಗುತ್ತಿದೆ. ಇಷ್ಟೇ ಅಲ್ಲ, ಸಮಂತಾ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅವರು ಅನ್​​ಫಾಲೋ ಮಾಡಿದ್ದಾರೆ.

ಇದನ್ನೂ ಓದಿ: ತುಂಬಾ ಸರಳವಾಗಿ ನಡೆಯಿತು ಸಮಂತಾ ಮದುವೆ: ಫೋಟೋ ಗ್ಯಾಲರಿ ನೋಡಿ..

ರಾಜ್ ಹಾಗೂ ಸಮಂತಾಗೆ ಪರಿಚಯ ಆಗುವಾಗ ರಾಜ್​​ಗೆ ಆಗಲೇ ವಿವಾಹ ಆಗಿತ್ತು. ಶ್ಯಾಮಲಿ ಎಂಬುವವರ ಜೊತೆ ಇವರ ಮದುವೆ ನಡೆದಿತ್ತು. ಆದರೆ, ರಾಜ್ ಹಾಗೂ ಶ್ಯಾಮಲಿ ಬೇರೆ ಆಗಿದ್ದಾರೆ. ಇವರ ದಾಂಪತ್ಯದಲ್ಲಿ ಬಿರುಕು ಮೂಡಲು ಸಮಂತಾ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ, ಇದ್ಯಾವುದನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ